Homeಮುಖಪುಟರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಬಿಜೆಪಿಯ ಮಾಜಿ ವಕ್ತಾರ ಆಯ್ಕೆ

ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಬಿಜೆಪಿಯ ಮಾಜಿ ವಕ್ತಾರ ಆಯ್ಕೆ

- Advertisement -
- Advertisement -

2020 ರ ಮೇ ತಿಂಗಳಿನಿಂದ ಖಾಲಿಯಿರುವ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಒಕ್ಕೂಟ ಸರ್ಕಾರ ಕೊನೆಗೂ ಮುಖ್ಯಸ್ಥರನ್ನು ನೇಮಿಸಿದೆ. ಬಿಜೆಪಿಯ ಮಾಜಿ ವಕ್ತಾರ ಇಕ್ಬಾಲ್ ಸಿಂಗ್ ಲಾಲ್‌ಪುರ ಅವರು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥರಾಗಿ ಮುಂದಕ್ಕೆ ಕಾರ್ಯನಿರ್ವಹಿಸಲಿದ್ದಾರೆ. ಇಕ್ಬಾಲ್ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಕೂಡಾ ಆಗಿದ್ದಾರೆ.

ಇಕ್ಬಾಲ್ ಸಿಂಗ್‌ ಅವರ ನೇಮಕಾತಿಗೆ ಪ್ರತಿಕ್ರಿಯಿಸಿದ ಒಕ್ಕೂಟ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, “ಇಕ್ಬಾಲ್‌ ಸಿಂಗ್‌ ಅವರ ಆಡಳಿತ, ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿನ ಅಪಾರ ಅನುಭವವು ಪ್ರಧಾನಿ ಮೋದಿಯವರ ಬದ್ಧತೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

1984 ರ ಗಲಭೆ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ, ಕರ್ತಾರ್‌ಪುರ ಕಾರಿಡಾರ್‌ನ ಕಾರ್ಯಾಚರಣೆ ಮತ್ತು ಶೀಘ್ರದಲ್ಲೇ ಆರಂಭವಾಗಲಿರುವ ‘ಗುರುದ್ವಾರ ಸರ್ಕ್ಯೂಟ್’ನಂತಹ ಕ್ರಮಗಳನ್ನು ಮೋದಿ ಸರ್ಕಾರ ಸಿಖ್ ಸಮುದಾಯಕ್ಕಾಗಿ ಮಾಡಿದೆ ಎಂದು ನಖ್ವಿ ಎತ್ತಿ ತೋರಿಸಿದ್ದಾರೆ.

“ಪ್ರತಿಯೊಬ್ಬರೂ ಸುರಕ್ಷಿತ ಮತ್ತು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರಾಗಿರುವುದು ನಮ್ಮ ಸಂಕಲ್ಪವಾಗಿದೆ. ಆ ಸಂಕಲ್ಪವನ್ನು ಬಲಪಡಿಸುವಲ್ಲಿ ಇಕ್ಬಾಲ್ ಸಿಂಗ್ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಬಿಜೆಪಿಯ ವಕ್ತಾರರಾಗಿದ್ದ ಇಕ್ಬಾಲ್ ಸಿಂಗ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಈ ಸ್ಥಾನಕ್ಕೆ ಏರುತ್ತೇನೆ ಎಂದು ಹೇಳಿದ್ದಾರೆ. “ಬಿಜೆಪಿಯಲ್ಲಿ ಮಾತ್ರ ಇರುವುದು ಅನಿವಾರ್ಯವಲ್ಲ, ಜನರಿಗೆ ನ್ಯಾಯ ಒದಗಿಸುವುದೇ ನನ್ನ ಗುರಿ. ಆದರೆ, ದೇಶದ ಕಾನೂನು ನನಗೆ ಎಲ್ಲಕ್ಕಿಂತ ಹೆಚ್ಚಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಅರ್ಜಿ ನಮೂನೆಗಳಲ್ಲಿ ’ಲೈಂಗಿಕ ಅಲ್ಪಸಂಖ್ಯಾತ’ ಆಯ್ಕೆ- ಕೇರಳ ಸರ್ಕಾರದ ಮಹತ್ವದ ನಿರ್ಧಾರ

ಜನರಿಗೆ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದ ಅವರು ಸಮಾಜದಲ್ಲಿ ಹರಡುತ್ತಿರುವ ಸುಳ್ಳುಗಳು ಮತ್ತು ಭಯವನ್ನು ಕೊನೆಗೊಳಿಸಲು ಕೆಲಸ ಮಾಡುವುದಾಗಿ ಹೇಳಿದ್ದಾರೆ.

2003 ಮತ್ತು 2006 ರ ನಡುವೆ ಆಯೋಗದ ನೇತೃತ್ವ ವಹಿಸಿದ್ದ ಎಸ್‌ ಟಾರ್ಲೋಚನ್ ಸಿಂಗ್ ನಂತರ, ಅಲ್ಪಸಂಖ್ಯಾತ ಆಯೋಗದ ಮುಖ್ಯಸ್ಥರಾಗಿರುವ ಎರಡನೇ ಸಿಖ್ ಧರ್ಮೀಯ ಇಕ್ಬಾಲ್‌ ಸಿಂಗ್‌ ಆಗಿದ್ದಾರೆ. ಈ ಮೊದಲು ಗೈರುಲ್ ಹಸನ್ ರಿಜ್ವಿ ಆಯೋಗದ ಅಧ್ಯಕ್ಷರಾಗಿದ್ದರು, ಅವರ ಅವಧಿ ಮೇ 2020 ರಲ್ಲಿ ಕೊನೆಗೊಂಡಿತ್ತು.

ಆಯೋಗವು ಅಧ್ಯಕ್ಷರನ್ನು ಒಳಗೊಂಡಂತೆ ಏಳು ಸದಸ್ಯರನ್ನು ಒಳಗೊಂಡಿದ್ದು, ಅದರಲ್ಲಿ ಐದು ಹುದ್ದೆಗಳು ಪ್ರಸ್ತುತ ಖಾಲಿ ಇವೆ. ಅತಿಫ್ ರಶೀದ್ ಆಯೋಗದ ಉಪಾಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...