Homeಮುಖಪುಟಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳನ್ನು ಒಳಗೊಂಡ 10 ಚದರ ಕಿಲೋಮೀಟರ್ ವ್ಯಾಪ್ತಿಯನ್ನು ‘ಪವಿತ್ರ ತೀರ್ಥಯಾತ್ರೆಯ ಸ್ಥಳ’ ಎಂದು ಘೋಷಿಸಿದೆ. ಈ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸಾಹಾರಿ ಆಹಾರ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆಗಸ್ಟ್ 30 ರಂದು ಕೃಷ್ಣ ಜನ್ಮಾಷ್ಟಮಿಯ ದಿನ ಸಿಎಂ ಆದಿತ್ಯನಾಥ್‌, ತಮ್ಮ ಸರ್ಕಾರವು ಮಥುರಾದ ಸಂತರು ಮತ್ತು ಜನರ ಜನಪ್ರಿಯ ಬೇಡಿಕೆಯನ್ನು ಪರಿಗಣಿಸಿ ಕೃಷ್ಣ ಜನ್ಮಭೂಮಿ ಪ್ರದೇಶ ಮತ್ತು ಸುತ್ತಮುತ್ತ ಮದ್ಯ ಮತ್ತು ಮಾಂಸಹಾರಿ ಆಹಾರ ಮಾರಾಟ ಮಾಡುವುದನ್ನು ನಿಷೇಧಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಿಎಂ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಜಿಲ್ಲಾಡಳಿತಕ್ಕೆ ಕೂಡಾ ಮಥುರಾದ ಏಳು ಹಿಂದೂ ತೀರ್ಥಕ್ಷೇತ್ರಗಳ ಸುತ್ತಮುತ್ತ ಮಾಂಸ ಮತ್ತು ಮದ್ಯವನ್ನು ನಿಷೇಧಿಸುವ ಹಾಗೆ ಕೆಲಸ ಮಾಡುವಂತೆ ಸಿಎಂ ಕೇಳಿಕೊಂಡಿದ್ದರು. ಈ ತೀರ್ಥಕ್ಷೇತ್ರಗಳ ಬಳಿ ಮದ್ಯ ಮತ್ತು ಮಾಂಸದ ವ್ಯಾಪಾರದಲ್ಲಿ ತೊಡಗಿರುವವರನ್ನು ಸ್ಥಳಾಂತರಿಸುವ ಮತ್ತು ಪುನರ್ವಸತಿ ಕಲ್ಪಿಸುವ ಭರವಸೆಯನ್ನೂ ನೀಡಿದ್ದರು.

“ಜನ್ಮಾಷ್ಟಮಿಯ ದಿನದಂದು ಮುಖ್ಯಮಂತ್ರಿ ಮಾಡಿದ ಘೋಷಣೆಗೆ ಅನುಸಾರವಾಗಿ, ಶ್ರೀ ಕೃಷ್ಣ ಜನ್ಮಭೂಮಿಯ ಸುತ್ತಲಿನ 22 ವಾರ್ಡ್‌ಗಳನ್ನು ಒಳಗೊಂಡ ಪ್ರದೇಶಗಳನ್ನು ತೀರ್ಥ ಯಾತ್ರಾಸ್ಥಳವೆಂದು ಘೋಷಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರ ಪರಿಣಾಮವಾಗಿ, ಈ ಅಧಿಸೂಚಿತ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸ ವ್ಯಾಪಾರ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ” ಎಂದು ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಚಾಹಲ್ ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ವಿರುದ್ದ ಸ್ಪರ್ಧಿಸಲಿರುವ ಮಾಜಿ ಐಪಿಎಸ್‌ ಅಮಿತಾಬ್‌ ಠಾಕೂರ್‌‌

ಈ ಪ್ರದೇಶಗಳಲ್ಲಿ ಮದ್ಯ ಮತ್ತು ಮಾಂಸದ ಅಂಗಡಿಗಳನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಧಾರ್ಮಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ, “ಮಥುರಾ-ವೃಂದಾವನವು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಆದ್ದರಿಂದ ಇದನ್ನು ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ಭಾರತ ಮತ್ತು ವಿದೇಶಗಳಿಂದ ಲಕ್ಷಾಂತರ ಯಾತ್ರಿಕರು ಇಲ್ಲಿ ಭೇಟಿ ಮಾಡುತ್ತಾರೆ. ಮಥುರಾ-ವೃಂದಾವನ ಐತಿಹಾಸಿಕವಾಗಿ ಮತ್ತು ಪ್ರವಾಸೋದ್ಯಮ ದೃಷ್ಟಿಯಿಂದಲೂ ಮಹತ್ವದ್ದಾಗಿದೆ” ಎಂದು ಹೇಳಲಾಗಿದೆ.

ಮಥುರಾ-ವೃಂದಾವನ ಪ್ರದೇಶದಲ್ಲಿ ಸುಮಾರು 10 ಚದರ ಕಿಮೀ ಪ್ರದೇಶವನ್ನು ತೀರ್ಥಕ್ಷೇತ್ರವೆಂದು ಘೋಷಿಸಲಾಗಿದೆ ಎಂದು ಧಾರ್ಮಿಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾಗಿ TNIE ವರದಿ ಮಾಡಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...