Homeಕರ್ನಾಟಕಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರವಿದೆ. ಆದರೂ ಪ್ರತಾಪ್ ಸಿಂಹ ಅವರು, ದೇವಾಲಯ ತೆರವು ಕಾರ್ಯಾಚರಣೆಗೆ ಈ ರೀತಿ ಪ್ರತಿಕ್ರಿಯೆ ನೀಡುತ್ತಿರುವ ಉದ್ದೇಶವೇನು?

- Advertisement -
- Advertisement -

ಕೇಂದ್ರದಲ್ಲೂ ಬಿಜೆಪಿ, ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರವಿದೆ. ಆದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು, ದೇವಾಲಯ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಪ್ರತಿಕ್ರಿಯೆ ನೀಡುತ್ತಿರುವ ಉದ್ದೇಶವೇನು ಎಂಬ ಪ್ರಶ್ನೆಗಳ ನಡುವೆಯೇ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆ ಮಾಡದಂತೆ ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಗುಡುಗಿದ್ದಾರೆ. ಕಾರ್ಯಾಚರಣೆ ಮುಂದುವರಿಸಿದರೆ ದೇವಸ್ಥಾನ ಉಳಿಸಿ ಜನಾಂದೋಲನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸುಪ್ರೀಂಕೋರ್ಟ್‌ನ ಆದೇಶವನ್ನು ಜಿಲ್ಲಾಡಳಿತ ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಆರೋಪಿಸಿರುವ ಅವರು, ಸಾರ್ವಜನಿಕವಾಗಿ ತಲೆ ಎತ್ತಿರುವ ಧಾರ್ಮಿಕ ಸ್ಥಳಗಳನ್ನು ಪ್ರತ್ಯೇಕವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಬೇಕು. ಸರ್ಕಾರ 2010ರಲ್ಲಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯಬೇಕು. ಪ್ರತಿ ದೇಗುಲವನ್ನೂ ಪ್ರತ್ಯೇಕವಾಗಿ ಪರಿಗಣಿಸಿ, ಬದಲಿ ಸ್ಥಳ ನೀಡುವುದು, ಸಾಧ್ಯವಾದರೆ ಸಕ್ರಮಗೊಳಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುತ್ತಿರುವ ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ ಸಾರುತ್ತಿರುವುದೇಕೆ? ಕೋರ್ಟ್ ಆದೇಶದಂತೆ ಎಲ್ಲ ಧರ್ಮಗಳ ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಜಿಲ್ಲಾಡಳಿತ ತೆರವು ಮಾಡುವವರೆಗೂ ಸುಮ್ಮನಿರುತ್ತಿಲ್ಲವೇಕೆ? ದೇವಾಲಯ ಹೆಸರಲ್ಲಿ ಸಂಸದರು ರಾಜಕೀಯ ಮಾಡಲು ಹೊರಟಿದ್ದಾರೆ. ಅನ್ಯಧರ್ಮೀಯರ ಮೇಲೆ ಅಸಹಿಷ್ಣುತೆ ಬೆಳೆಸಲು ಈ ವಿದ್ಯಮಾನವನ್ನು ಬಳಸಿಕೊಳ್ಳುತ್ತಿದ್ದಾರೆ. ಧಾರ್ಮಿಕ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದನ್ನು ಬಿಟ್ಟು, ಅಭಿವೃದ್ಧಿ ವಿಚಾರಗಳತ್ತ ಸಂಸದರು ಯೋಚಿಸಬೇಕು ಎಂದು ಪ್ರಜ್ಞಾವಂತರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ನಡುವಿನ ಗಲಾಟೆ ಪ್ರಕರಣದಲ್ಲೂ ಪ್ರತಾಪ್ ಸಿಂಹ ಅವರ ಹೆಸರು ಮುಂಚೂಣಿಯಲ್ಲಿತ್ತು. ಈ ಅಧಿಕಾರಿಗಳನ್ನು ಮೈಸೂರಿನಿಂದ ಎತ್ತಂಗಡಿ ಮಾಡುವ ಮೂಲಕ ವಿವಾದವನ್ನು ತಣ್ಣಗಾಗಿಸಲಾಗಿತ್ತು. ಕೋವಿಡ್ ಸಮಯದಲ್ಲಿ ಜನರತ್ತ ಗಮನ ಹರಿಸದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಅಗ್ಗಜಗ್ಗಾಟದಲ್ಲಿ ಕಳೆದುಹೋಗಿದ್ದರು. ವಿವಾದಗಳಿಂದಲೇ ಎಷ್ಟು ಕಾಲ ಅಧಿಕಾರ ನಡೆಸಲು ಸಾಧ್ಯ? ಅಧಿಕಾರಿಗಳ ವಿರುದ್ಧ ಹೀಗೆ ಹೇಳಿಕೆ ನೀಡುವ ಉದ್ದೇಶವೇನು? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆಯೇ? ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್ಐಆರ್ ಬೇಡ..’ ರಾಷ್ಟ್ರೀಯ ವೇದಿಕೆ ಆರಂಭ; ಪ್ರಕ್ರಿಯೆ ರದ್ದುಗೊಳಿಸಿ ಹಳೆ ಮತದಾರರ ಪಟ್ಟಿ ಮರುಸ್ಥಾಪನೆಗೆ ಆಗ್ರಹ

ದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಮೇಲೆ ಉಂಟಾಗಿರುವ ಅದರ ಪರಿಣಾಮಗಳ ವಿರುದ್ಧ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಕರೆ ನೀಡಿರುವ ನಾಗರಿಕ ಸಂಘಟನೆಗಳು, ದೇಶದ ವಿವಿಧ ರಾಜ್ಯಗಳ...

ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಂದ ಅರ್ಹ ಮತದಾರರ ಹೆಸರು ಡಿಲೀಟ್‌ಗೆ ಅರ್ಜಿ; ಚುನಾವಣಾ ಕಚೇರಿ ಮುಂದೆ ಸಿಎಂ ಪ್ರತಿಭಟನೆ

ಅರ್ಹ ಮತದಾರರ ಹಸರು ಡಿಲೀಟ್‌ ಮಾಡುವಂತೆ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತತು ಫಾರ್ಮ್‌ - 7 ನೀಡಿದ್ದಾರೆ ಎಂದು ಆರೋಪಿಸಿರುವ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ...

ಕದನ ವಿರಾಮದ ಹೊರತಾಗಿಯೂ ಗಾಜಾದಲ್ಲಿ ಇಸ್ರೇಲ್‌ ದಾಳಿ; ಪತ್ರಕರ್ತ ಸೇರಿದಂತೆ ಕನಿಷ್ಠ ಎಂಟು ಮಂದಿ ಪ್ಯಾಲೆಸ್ತೀನಿಯರ ಹತ್ಯೆ

ಪ್ಯಾಲೆಸ್ತೀನ್ ಅಧಿಕಾರಿಗಳು ಮತ್ತು ವೈದ್ಯಕೀಯ ಮೂಲಗಳ ಪ್ರಕಾರ, ಬುಧವಾರ (ಸೆ.30) ದಂದು ಗಾಜಾ ಪಟ್ಟಿಯಾದ್ಯಂತ ಇಸ್ರೇಲ್ ನಡೆಸಿದ ದಾಳಿಯಲ್ಲಿ ಪತ್ರಕರ್ತ ಹಾಗೂ ಇಮಾಮ್ ಮೊಹಮ್ಮದ್ ಅಬ್ದುಲ್ ಅಜೀಜ್ ಅಲ್-ನಜ್ಜಾರ್ ಸೇರಿದಂತೆ ಕನಿಷ್ಠ ಎಂಟು...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ಕೇರಳ ಯೂತ್ ಕಾಂಗ್ರೆಸ್ -ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜಧಾನಿಯ ಪಾಳಯಂ ಪ್ರದೇಶದಲ್ಲಿ ನಡೆದ ಘರ್ಷಣೆಯ ನಂತರ, ಕೆಎಸ್‌ಯು/ಯೂತ್ ಕಾಂಗ್ರೆಸ್ ಮತ್ತು ಎಸ್‌ಎಫ್‌‌ಐ/ಡಿವೈಎಫ್‌ಐ ಕಾರ್ಯಕರ್ತರ ವಿರುದ್ಧ ಗುರುವಾರ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ ಕೇಂದ್ರ ಸರ್ಕಾರ...

ಹೈದರಾಬಾದ್: ಕೇಸರಿ ಶಾಲುಗಳೊಂದಿಗೆ ಶಾಲೆಗೆ ನುಗ್ಗಿ ಮುಸ್ಲಿಂ ಶಿಕ್ಷಕಿಗೆ ಬೆದರಿಕೆ ಆರೋಪ: ಬಿಜೆಪಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್: ಶಾಲೆಯೊಂದರ ಮುಸ್ಲಿಂ ಶಿಕ್ಷಕಿಗೆ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಅಕುಲಾ ಶ್ರೀವಾಣಿ ವಿರುದ್ಧ ಹೈದರಾಬಾದ್ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಸರೂರ್ ನಗರದ ಶ್ರೀ ವೆಂಕಟೇಶ್ವರ...

ಪ್ರತಿಯೊಂದರಲ್ಲೂ ಅಜೆಂಡಾ; ಉತ್ತರ ಪ್ರದೇಶ ಪೊಲೀಸರನ್ನೇ ವಿಸರ್ಜಿಸಿಬಿಡುವುದು ಒಳ್ಳೆಯದು: ಸುಪ್ರೀಂ ಕೋರ್ಟ್

ಉತ್ತರ ಪ್ರದೇಶ ಪೊಲೀಸರ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಸುಪ್ರೀಂ ಕೋರ್ಟ್, ಆ ಇಲಾಖೆಯನ್ನೇ ವಿಸರ್ಜಿಸಿ ರಾಜ್ಯದ ಪ್ರತಿಯೊಂದು ತನಿಖೆಯನ್ನು ಸಿಬಿಐ (ಸಿಬಿಐ) ವಹಿಸಿಕೊಳ್ಳುವಂತೆ ಮಾಡುವುದು ಉತ್ತಮ ಎಂದು ಬುಧವಾರ (ಸೆ.30) ಕಟುವಾಗಿ ಟೀಕಿಸಿದೆ. ಮೋಟಾರ್...

ಜಾತಿ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ ಆರೋಪ : ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ!

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಗ್ಯಾನ್‌ಪುರದಲ್ಲಿರುವ ಮಹಾರಾಜ ಚೇತ್ ಸಿಂಗ್ ಜಿಲ್ಲಾಸ್ಪತ್ರೆಯ ಸಿಬ್ಬಂದಿ ದಾಖಲಿಸಿಕೊಳ್ಳಲು ನಿರಾಕರಿಸಿದ ಕಾರಣ, ಆದಿವಾಸಿ ಮಹಿಳೆಯೊಬ್ಬರು ಆಸ್ಪತ್ರೆಯ ಹೊರಗಿನ ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ....

ಬ್ಯಾಂಕ್ ಖಾತೆಗಳು ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿದ್ಧ ಟಿಎಂಸಿ ಆರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ : ವಿಚಾರಣೆ ತ್ವರಿತಗೊಳಿಸುವಂತೆ ಹೈಕೋರ್ಟ್‌ಗೆ ಸೂಚನೆ

ಪಶ್ಚಿಮ ಬಂಗಾಳ ಪೊಲೀಸರು ತಮ್ಮ ನಾಲ್ಕು 'ಇಂಡಿಯನ್ ಬ್ಯಾಂಕ್' ಖಾತೆಗಳನ್ನು ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ 'ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್' (ಎಐಟಿಸಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ (ಅ.1)...

ಬಂಗಾಳ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು; ನಂದಿಗ್ರಾಮ ಕಾಂಗ್ರೆಸ್‌ ಅಭ್ಯರ್ಥಿ ಜೈಲಿನಿಂದ ಬಿಡುಗಡೆ

ಪಶ್ಚಿಮ ಬಂಗಾಳ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ಮರುದಿನವೇ, ಕಾಂಗ್ರೆಸ್‌ನ ನಂದಿಗ್ರಾಮ ಉಪಚುನಾವಣೆಯ ಅಭ್ಯರ್ಥಿ ಮಿಲನ್ ಪ್ರಧಾನ್ ಬುಧವಾರ (ಸೆ. 30) ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಲ್ದಿಯಾ ಜೈಲಿನ ಹೊರಗೆ...

ಚುನಾವಣಾ ಆಯೋಗದ ಐಟಿ ಸೆಲ್ ನಿರ್ದೇಶಕಿ ಸೀಮಾ ಖನ್ನಾ ವಿರುದ್ಧ ದೂರು ದಾಖಲಿಸಿದ ಸಂಸದೆ ಮಹುವಾ ಮೊಯಿತ್ರಾ

ಬಂಗಾಳದಲ್ಲಿ ಮತದಾರರ ಹೆಸರುಗಳು ಮತ್ತು ಪಟ್ಟಿಗಳನ್ನು ಕೇಂದ್ರ ಮಟ್ಟದಲ್ಲೇ ಸೇರಿಸಲು, ತೆಗೆದುಹಾಕಲು ಅಥವಾ ಬದಲಾಯಿಸಲು ಅನುವು ಮಾಡಿಕೊಡುವಂತಹ ಮತದಾರರ ಪಟ್ಟಿ ಸಾಫ್ಟ್‌ವೇರ್ ಬಳಕೆಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ ಆಯೋಗದ ಐಟಿ ವಿಭಾಗದ ಮಹಾನಿರ್ದೇಶಕಿ...