Homeಕರ್ನಾಟಕಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಆಂಬ್ಯುಲೆನ್ಸ್ ಗಳನ್ನು ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.

- Advertisement -
- Advertisement -

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಆಂಬ್ಯುಲೆನ್ಸ್ ಗಳನ್ನು ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಕವಚ ಯೋಜನೆಯಡಿ 710 ಆಂಬ್ಯುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 155 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಆಂಬ್ಯುಲೆನ್ಸ್ ಆಗಿವೆ. ಇಂದು ಲೋಕಾರ್ಪಣೆಗೊಂಡಿರುವ 120 ಆಂಬ್ಯುಲೆನ್ಸ್ ಗಳು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲನ್ಸ್ ಆಗಿವೆ ಎಂದು ತಿಳಿಸಿದರು.

2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ಅವರ ಅವಧಿಯಲ್ಲಿ ಆರಂಭವಾದ ಆರೋಗ್ಯ ಕವಚ ಸೇವೆಗೆ ಆಧುನಿಕ ಸ್ಪರ್ಶ ನೀಡಲಾಗುತ್ತಿದೆ. ಆಸ್ಪತ್ರೆಗಳ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನ ಅಳವಡಿಸಿಕೊಂಡರೆ ವ್ಯಕ್ತಿ ಕರೆ ಮಾಡಿದ 10-15 ನಿಮಿಷದಲ್ಲಿ ಆಂಬ್ಯುಲೆನ್ಸ್ ತಲುಪಿ, ಸಮೀಪದ ಆಸ್ಪತ್ರೆಯನ್ನೂ ಗುರುತಿಸಬಹುದು. ಈಗ ನಗರ ಪ್ರದೇಶದಲ್ಲಿ 30-45 ನಿಮಿಷ ಹಾಗೂ ಗ್ರಾಮೀಣ ಭಾಗದಲ್ಲಿ 45 ನಿಮಿಷಕ್ಕಿಂತ ಹೆಚ್ಚು ಸಮಯ ಬೇಕಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಸೇವೆ ದೊರಕುವಂತೆ ಸುಧಾರಣೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ನೂತನ ಟೆಂಡರ್ ಕರೆದಿದ್ದು, ಆದಷ್ಟು ಶೀಘ್ರದಲ್ಲಿ ಆರೋಗ್ಯ ಕವಚ ಸೇವೆಯನ್ನು ಇನ್ನಷ್ಟು ಸುಗಮಗೊಳಿಸಲಾಗುವುದು. ಪ್ರಸ್ತುತ 1 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯವಿದ್ದು, ಮುಂದಿನ ದಿನಗಳಲ್ಲಿ 40-50 ಸಾವಿರ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಆಂಬ್ಯುಲೆನ್ಸ್ ಚಾಲಕರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ, ಉತ್ಕೃಷ್ಟ ಸೇವೆ ನೀಡುವ ನಿಟ್ಟಿನಲ್ಲಿ ಅವರಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದರು.

5 ಕೋಟಿ ಲಸಿಕೆಯತ್ತ ರಾಜ್ಯ ದಾಪುಗಾಲು

ರಾಜ್ಯದಲ್ಲಿ ದಿನಕ್ಕೆ ಸರಾಸರಿ 3.8 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು ಇದು ಇಡೀ ರಷ್ಯಾ ದೇಶದಲ್ಲಿ ನೀಡುತ್ತಿರುವ ಲಸಿಕೆಗಿಂತ ಹೆಚ್ಚಾಗಿದೆ. ಕರ್ನಾಟಕ 5 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸುವತ್ತ ದಾಪುಗಾಲು ಇಡುತ್ತಿದ್ದು ಶೀಘ್ರವೇ ಈ ಮೈಲಿಗಲ್ಲು ತಲುಪಲಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...