Homeಮುಖಪುಟ‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

"ಹಿಂದೂ ರಾಷ್ಟ್ರೀಯತೆ" ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದರೆ ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

- Advertisement -
- Advertisement -

“ಹಿಂದೂ ರಾಷ್ಟ್ರೀಯತೆ” ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದವರನ್ನು ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

ಸೆ.9 ರಂದು ಗಾರ್ಡಿಯನ್ ವರದಿ ಪ್ರಕಟಿಸಿದ್ದು, ಹಲವು ವಿದ್ವಾಂಸರನ್ನು ಹಿಂದೂ ವಿರೋಧಿಗಳೆಂದು ದೂಷಿಸಿ, ಅವರು ವಿಚಾರ ವಿಚಾರಸಂಕಿರಣದಿಂದ ಹಿಂದೆ ಸರಿಯುವಂತೆ ಹಿಂದುತ್ವವಾದಿ ಉಗ್ರರು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

ಸಮ್ಮೇಳನವು “ಜಾಗತಿಕ ಹಿಂದುತ್ವದ ನಿರ್ನಾಮ” ಎಂಬ ಹೆಸರಿನಲ್ಲಿದೆ. ಹಾರ್ವಾಡ್, ಸ್ಟಾಂಡ್‌ಫಾರ್ಡ್, ಪ್ರಿನ್ಸ್‌ಟನ್‌, ಕೊಲಂಬಿಯ, ಬರ್ಕ್ಲಿ, ಚಿಕಾಗೋ, ಪೆನ್ಸಿಲ್‌ವೇನಿಯ, ರುಟ್‌ಗರ್ಸ್ ಸೇರಿದಂತೆ 53ಕ್ಕೂ ಹೆಚ್ಚು ವಿವಿಗಳು ಈ ಸಮ್ಮೇಳನದ ಸಹ ಪ್ರಯೋಜಕತ್ವ ಹೊಂದಿವೆ.

ಸಮ್ಮೇಳನ ಉದ್ದೇಶವನ್ನು ಚರ್ಚಿಯಲು ಸೆ.10ರಂದು ಆಯೋಜಿಸಲಾಗಿತ್ತು. ಹಿಂದುತ್ವ ಗುಂಪುಗಳು, ಜಾತ್ಯತೀತ ರಾಷ್ಟ್ರವನ್ನು ನಿರ್ನಾಮ ಮಾಡಿ, ಹಿಂದೂರಾಷ್ಟ್ರ ಕಟ್ಟುವ ಸಂಬಂಧ ಮಾಡುತ್ತಿರುವ ಪ್ರಯತ್ನಗಳ ಕುರಿತು ವಿದ್ವಾಂಸರು ಚರ್ಚಿಸಲಿದ್ದರು ಎಂದು ವರದಿ ಉಲ್ಲೇಖಿಸಿದೆ.

ನರೇಂದ್ರ ಮೋದಿ ನೇತೃತ್ವದ ಆಡಳಿತ ಪಕ್ಷ ಬಿಜೆಪಿಯು ಹಿಂದೂ ರಾಷ್ಟ್ರೀಯ ಅಜೆಂಡಾವನ್ನು ಮುನ್ನಲೆಗೆ ತಂದಿದೆ. ಸುಮಾರು 20 ಕೋಟಿ ಮುಸ್ಲಿಮರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆ ಎಂಬುದನ್ನು ಗಾರ್ಡಿಯನ್ ಉಲ್ಲೇಖಿಸಿದೆ.

ಸಮ್ಮೇಳನದಲ್ಲಿ ಪಾಲ್ಗೊಳ್ಳುವವರ ಮೇಲೆ ದಾಳಿ ಮಾಡಲು ಹಿಂದುತ್ವವಾದಿ ಗುಂಪುಗಳು ಸಜ್ಜಾಗಿವೆ. ವಿವಿಗಳು ಹಿಂದೆ ಸರಿಯುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಸಮ್ಮೇಳನದ ಆಯೋಜಕರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿನ ತಮ್ಮ ಕುಟುಂಬಕ್ಕೆ ಮರಳುವುದನ್ನು ನಿಷೇಧಿಸುವ ಭಯದಿಂದ ಅಥವಾ ಭಾರತಕ್ಕೆ ಮರಳಿದಾಗ ಬಂಧಿಸುವ ಭಯದಿಂದ ಅನೇಕರು ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ. ಹತ್ತಾರು ಭಾಷಣಕಾರರು ಹಾಗೂ ಸಂಘಟನಾಕಾರರ ಕುಟುಂಬದವರಿಗೆ ಬೆದರಿಕೆ ಒಡ್ಡಲಾಗಿದೆ. ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಸಮ್ಮೇಳನದ ಅಧ್ಯಕ್ಷರಿಗೆ, ವಿಶ್ವವಿದ್ಯಾನಿಲಯಗಳಿಗೆ 10 ಲಕ್ಷಕ್ಕೂ ಹೆಚ್ಚು ಇಮೇಲ್‌ ಮಾಡಲಾಗಿದ್ದು, ಸಮ್ಮೇಳನದಿಂದ ಹಿಂದೆ ಸರಿಯುವಂತೆ ಎಚ್ಚರಿಸಲಾಗಿದೆ. ನ್ಯೂಜೆರ್ಸಿಯ ಡ್ರೂ ವಿವಿಯು ಕೆಲವೇ ನಿಮಿಷಗಳಲ್ಲಿ 30,000 ಇಮೇಲ್‌ಗಳನ್ನು ಸ್ವೀಕರಿಸಿದೆ ಮತ್ತು ವಿವಿಯ ಸರ್ವರ್‌ ಹಾನಿಯಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....