Homeಮುಖಪುಟಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ (80) ನಿಧನ

ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ (80) ನಿಧನ

- Advertisement -
- Advertisement -

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ (80) ರವರು ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಇಂದು ಸೋಮವಾರ ಕೊನೆಯುಸಿರೆಳೆದಿದ್ದಾರೆ.

ಜುಲೈ 18 ರಂದು ಯೋಗ ಮಾಡುತ್ತಿದ್ದಾಗ ಜಾರಿ ಬಿದ್ದು ತಲೆಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿತ್ತು. ಆನಂತರ ಅವರನ್ನು ಖಾಸಗೀ ಆಸ್ಪತ್ರೆಯಲ್ಲಿ ಐಸಿಯುನಲ್ಲಿರಿಸಲಾಗಿತ್ತು. ಆದರೆ ಅವರು ಚೇತರಿಸಿಕೊಳ್ಳದೇ ನಿಧನರಾಗಿದ್ದಾರೆ.

ಆರಂಭದಲ್ಲಿ ತಲೆಗೆ ಪೆಟ್ಟಾದಾಗ ಅವರು ನಿರ್ಲಕ್ಷಿಸಿದ್ದರು. ಆದರೆ ನಂತರ ವೈದ್ಯರು ಗಂಭೀರ ಗಾಯದ ಬಗ್ಗೆ ಅರಿತು ಶಸ್ತ್ರ ಚಿಕಿತ್ಸೆಗೆ ಶಿಫಾರಸ್ಸು ಮಾಡಿದ್ದರು ಎಂದು ವರದಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಆಸ್ಕರ್ ಫರ್ನಾಂಡಿಸ್ ರವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

1941, ಮಾರ್ಚ್ 27 ರಂದು ಜನಿಸಿದ ಆಸ್ಕರ್ ಫರ್ನಾಂಡಿಸ್ ರವರು ನಾಲ್ಕು ಬಾರಿ ಸಂಸತ್ ಸದಸ್ಯರಾಗಿ ಮತ್ತು ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಕೇಂದ್ರ ಸಾರಿಗೆ ಸಚಿವರಾಗಿ ಮತ್ತು ಕಾರ್ಮಿಕ ಸಚಿವರಾಗಿ ಗಮನಸೆಳೆದಿದ್ದರು.

“ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ಆಸ್ಕರ್ ಫರ್ನಾಂಡೀಸ್ ಅವರು ಇಹಲೋಕ ತ್ಯಜಿಸಿರುವುದು ಮನಸ್ಸಿಗೆ ತೀವ್ರ ನೋವನ್ನುಂಟುಮಾಡಿದೆ. ದೇಶಕ್ಕಾಗಿ ಮತ್ತು ಪಕ್ಷಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಶ್ರೀಯುತರು, ತಮ್ಮ ದೂರದೃಷ್ಟಿ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳಿಂದಾಗಿ ಜನಮಾನಸದಲ್ಲಿ ಯಾವತ್ತಿಗೂ ನೆನಪಿನಲ್ಲುಳಿಯಲಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ; ಮೃತರ ಸಂಖ್ಯೆ 8ಕ್ಕೆ ಏರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...