Homeಕರ್ನಾಟಕ‘ಹಿಂದಿ ದಿನ’ ವಿರೋಧಿಸಿ ‘ಕರವೇ’ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ

‘ಹಿಂದಿ ದಿನ’ ವಿರೋಧಿಸಿ ‘ಕರವೇ’ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ

ಈಗಾಗಲೆ ಸುಮಾರು 1500 ಕಡೆ ಪ್ರತಿಭಟನೆಗಳು ನಡೆದಿದ್ದು, ಸಂಜೆಯ ಹೊತ್ತಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ದಾಖಲಾಗಲಿದೆ ಎಂದು ಕರವೇ ಹೇಳಿದೆ.

- Advertisement -
- Advertisement -

‘ಹಿಂದಿ ದಿವಸ್’ ಆಚರಣೆಯನ್ನು ವಿರೋಧಿಸಿ ‘ಕರ್ನಾಟಕ ರಕ್ಷಣಾ ವೇದಿಕೆ’(ಕರವೇ) ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ನೂರಾರು ಕರವೇ ಕಾರ್ಯಕರ್ತರು ರಾಜ್ಯದಲ್ಲಿರುವ ಬ್ಯಾಂಕುಗಳ ಮುಂದೆ ಜಮಾಯಿಸಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಘೋಷನೆಗಳನ್ನು ಕೂಗುತ್ತಿದ್ದಾರೆ. ಈಗಾಗಲೆ ಸುಮಾರು 1500 ಕಡೆ ಪ್ರತಿಭಟನೆಗಳು ನಡೆದಿದ್ದು, ಸಂಜೆಯ ಹೊತ್ತಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ದಾಖಲಾಗಲಿದೆ ಎಂದು ಕರವೇ ಹೇಳಿದೆ.

‘ಹಿಂದಿ ದಿನ’ ವಿರೋಧಿ ಪ್ರತಿಭಟನೆಗಾಗಿ ವೇದಿಕೆ ಸುಮಾರು 300 ಕ್ಕೂ ಹೆಚ್ಚು ಪೂರ್ವಭಾವಿ ಸಭೆಗಳನ್ನು ನಡೆಸಿತ್ತು ಎಂದು ವೇದಿಕೆಯ ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿರುವ ದಿನೇಶ್ ಕುಮಾರ್‌ ಅವರು ಈ ಹಿಂದೆ ಹೇಳಿದ್ದರು. ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಮಟ್ಟಗಳಲ್ಲಿ ಈ ಸಭೆಗಳನ್ನು ನಡೆಸಲಾಗಿತ್ತು ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕ ರ ವೇ ಕರೆ

ಇಂದಿನ ಪ್ರತಿಭಟನೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಿನೇಶ್ ಕುಮಾರ್‌ ಅವರು, “ನಾವು ಮೊದಲಿಗೆ 1 ಸಾವಿರ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಂದೆ ಮಾತ್ರ ಪ್ರತಿಭಟನೆ ಮಾಡಲಿದ್ದೇವೆ ಎಂದು ತೀರ್ಮಾನಿಸಿದ್ದೆವು. ಆದರೆ ನಮ್ಮ ಕಾರ್ಯಕರ್ತರು ಖಾಸಗಿ ಬ್ಯಾಂಕುಗಳ ಮುಂದೆ ಕೂಡಾ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ರಾಜ್ಯದಾದದ್ಯಂತ 1500 ಕ್ಕೂ ಹೆಚ್ಚು ಕಡೆಯಲ್ಲಿ ಪ್ರತಿಭಟನೆಗಳು ನಡೆದಿವೆ. ಸಂಜೆಯ ಹೊತ್ತಿಗೆ 2 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ದಾಖಲಾಗಲಿದೆ” ಎಂದು ತಿಳಿಸಿದ್ದಾರೆ.

‘ಹಿಂದಿ ದಿನ’ ವಿರೋಧಿಸಿ ‘ಕರ್ನಾಟಕ ರಕ್ಷಣಾ ವೇದಿಕೆ’ ವತಿಯಿಂದ ಪ್ರತಿಭಟನೆಗಳ ಝಲಕ್‌

‘ಕರವೇ’ ಪ್ರತಿಭಟನೆ ಮಾತ್ರವಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಹಿಂದಿ ಹೇರಿಕೆಯನ್ನು ವಿರೋಧಿಸಿ ಹ್ಯಾಶ್ ಟ್ಯಾಗ್ ಚಳುವಳಿಗೆ ಕರೆ ನೀಡಿದೆ. ಸೆಪ್ಟೆಂಬರ್ 14 ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 12 ಗಂಟೆಗಳು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಟ್ವಿಟರ್ ಅಭಿಯಾನವನ್ನು ಕರವೇ ಹಮ್ಮಿಕೊಂಡಿದೆ. ವೇದಿಕೆಯ ಕರೆಗೆ ಜನರು ಸಾಮಾಜಿಕ ಜಾಲತಾಣದಲ್ಲೂ ಕೈಜೋಡಿಸಿದ್ದಾರೆ. ಈಗಾಗಲೆ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಇದನ್ನೂ ಓದಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕ ರ ವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...