Homeಮುಖಪುಟಹೈದರಾಬಾದ್ - ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ...

ಹೈದರಾಬಾದ್ – ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ಸೆಪ್ಟೆಂಬರ್ 9 ರಂದು ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಶಂಕಿಲಾಗಿರುವ, ಸೈದಾಬಾದ್ ಅತ್ಯಾಚಾರ ಪ್ರಕರಣದ ಆರೋಪಿ ತೆಲಂಗಾಣದ ಘಾನಾಪುರ ರೈಲು ನಿಲ್ದಾಣದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

“ಆರೋಪಿ ಸಾವನ್ನಪ್ಪಿರುವುದು ನಿಜ. ನಾನು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯೊಂದಿಗೆ ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಬೇಕು. ಪೊಲೀಸರು ಆತನನ್ನು ಹಿಂಬಾಲಿಸುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆ, ಅವರ ಎಚ್ಚರಿಕೆಯ ಹೊರತಾಗಿಯು ರೈಲಿಗೆ ಹಾರಿದ್ದಾನೆ ಎಂದು ನನಗೆ ತಿಳಿಸಲಾಗಿದೆ. ಎಲ್ಲಾ ವಿವರಗಳನ್ನು ಖಚಿತಪಡಿಸಿಕೊಂಡ ನಂತರ ಅದನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳಲಾಗುತ್ತದೆ” ಎಂದು ಹೈದರಾಬಾದ್ ಪೂರ್ವ ವಲಯದ ಉಪ ಪೊಲೀಸ್ ಆಯುಕ್ತರು (ಡಿಸಿಪಿ) ರಮೇಶ್ ಹೇಳಿದ್ದಾರೆಂದು ದಿ ನ್ಯೂಸ್ ಮಿನಿಟ್‌ ವರದಿ ಮಾಡಿದೆ.

ಇದನ್ನೂ ಓದಿ: ಹೈದರಾಬಾದ್ – 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಪೊಲೀಸರು 30 ವರ್ಷದ ರಾಜು ಎಂಬವರನ್ನು ಆರೋಪಿ ಎಂದು ಗುರುತಿಸಿದ್ದರು. ಘಟನೆ ವರದಿಯಾದಾಗಿನಿಂದ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಪೊಲೀಸರು ಒಂಬತ್ತು ವಿಶೇಷ ತಂಡಗಳನ್ನು ರಚಿಸಿದ್ದರು. ಜೊತೆಗೆ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನವನ್ನೂ ಪೊಲೀಸರು ಘೋಷಿಸಿದ್ದರು.

ಸೆಪ್ಟೆಂಬರ್‌ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಚಾರ ಮಾಡಿ ಕೊಲೆ ಮಾಡಲಾಗಿತ್ತು. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಇದನ್ನೂ ಓದಿ: ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಹಿಂದುತ್ವ ಶಕ್ತಿಗಳು ಮೇಲುಗೈ ಪಡೆದಿದ್ದು ಹೇಗೆ?

ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್‌ಶೀಟ್‌ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಪೊಲೀಸರು ಆರೋಪಿಯ ವಿರುದ್ದ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದರು.

ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ. ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಹೈದರಾಬಾದ್: ಅತಿಕ್ರಮಣ ಪ್ರವೇಶ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...