Homeಮುಖಪುಟಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

ಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

- Advertisement -
- Advertisement -

ಟಿ-20 ಚುಟುಕು ಕ್ರಿಕೆಟ್‌ನ ನಾಯಕತ್ವವನ್ನು ಮುಂಬರುವ ಟಿ-20 ವಿಶ್ವಕಪ್‌ ಟೂರ್ನಿಯ ಬಳಿಕ ತ್ಯಜಿಸುವುದಾಗಿ ನಾಯಕ ವಿರಾಟ್‌ ಕೊಹ್ಲಿ ಪ್ರಕಟಿಸಿದ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ, ಖ್ಯಾತ ಕ್ರಿಕೆಟಿಗ ಸೌರವ್‌ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.

“ವಿರಾಟ್‌ ಭಾರತ ಕ್ರಿಕೆಟ್‌ ತಂಡದ ನಿಜವಾದ ಆಸ್ತಿಯಾಗಿದ್ದು, ತಂಡವನ್ನು ಉತ್ಸುಕತೆಯಿಂದ ಮುನ್ನಡೆಸಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲೂ ಯಶಸ್ವಿಯಾದ ನಾಯಕ ವಿರಾಟ್‌. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ” ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಟಿ-20 ನಾಯಕನಾಗಿ ಅದ್ಭುತ ಪ್ರದರ್ಶನ ನೀಡಿದ ಕೊಹ್ಲಿಯವರಿಗೆ ಧನ್ಯವಾದ ಹೇಳುತ್ತೇವೆ. ಮುಂಬರುವ ಚುಟುಕು ವಿಶ್ವಕಪ್‌ ಟೂರ್ನಿಯಲ್ಲಿ ಗೆಲ್ಲಲೆಂದು ಶುಭಕೋರುತ್ತೇವೆ. ಭಾರತಕ್ಕಾಗಿ ಅವರು ರನ್‌ ಗಳಿಕೆಯನ್ನು ಹೀಗೆಯೇ ಮುಂದುವರಿಸುತ್ತಾರೆ ಎಂದು ಭಾವಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಟಿ-20 ನಾಯಕತ್ವ ತ್ಯಜಿಸಲು ವಿರಾಟ್‌ ಕೊಹ್ಲಿ ನಿರ್ಧಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

0
ಸಾರ್ವತ್ರಿಕ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೂ ಮುನ್ನ ಬಂಧಿಸಿದ್ದು ಏಕೆ? ಎಂದು...