Homeಮುಖಪುಟ#WorldFekuDay | ಪ್ರಧಾನಿ ಮೋದಿ ಜನ್ಮದಿನ - ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

#WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿಗೆ ಇಂದು ಎಪ್ಪತ್ತೊಂದನೇ ವರ್ಷದ ಹುಟ್ಟ ಹಬ್ಬ. ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ‘ಹುಟ್ಟಹಬ್ಬದ ಶುಭಾಶಯಗಳು ಮೋದಿಯವರೇ’ #HappyBdayModiji ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ಈ ನಡುವೆ ಟ್ವಿಟರ್‌ನಲ್ಲಿ ‘ವಿಶ್ವ ಫೇಕು ದಿನ’ #WorldFekuDay, ‘ರಾಷ್ಟ್ರೀಯ ನಿರುದ್ಯೋಗ ದಿನ’ #NationalUnemploymentDay, ‘ಮೋದಿ ಕೆಲಸ ಕೊಡಿ’ #मोदी_रोजगार_दो, ಜುಮ್ಲಾ ದಿವಸ್ #JumlaDiwas ಹ್ಯಾಶ್ ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಅದರಂತೆ ಟ್ವಿಟರ್‌ನಲ್ಲಿ #WorldFekuDay, #NationalUnemploymentDay, #मोदी_रोजगार_दो, #JumlaDiwas ಹ್ಯಾಶ್ ಟ್ಯಾಗ್‌ ಟ್ರೆಂಡ್‌ ಆಗಿದೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಯೂತ್‌ ಕಾಂಗ್ರೆಸ್‌‌ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರು ಟ್ವೀಟ್ ಮಾಡಿ, “ಮೋದಿಯವರ ಜನ್ಮದಿಕ್ಕೆ ಶುಭಕೋರಿದವರಿಗಿಂತ ನಾಲ್ಕು ಪಟ್ಟು ಹೆಚ್ಚು ನಿರುದ್ಯೋಗ ದಿನದ ಟ್ವೀಟ್‌ ಆಗಿದೆ. ಮೋದಿಯವರೇ ನೀವು ಇದನ್ನು ನೋಡುತ್ತಿದ್ದೀರಲ್ವಾ?” ಎಂದು ಪ್ರಧಾನಿಗೆ ಕೇಳಿದ್ದಾರೆ.

ಅವರು ತಮ್ಮ ಮತ್ತೊಂದು ಟ್ವೀಟ್‌‌ನಲ್ಲಿ ನೀವು ಮೋದಿಯವರ ಜನ್ಮದಿನವನ್ನು ಆಚರಿಸುತ್ತಿದ್ದೀರಾ ಅಥವಾ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಈ ದೇಶದ ಯುವಕರೊಂದಿಗೆ ಆಚರಿಸುತ್ತಿರುವಿರಾ? ನಿರುದ್ಯೋಗ ಸಮಸ್ಯೆಯ ಕುರಿತು ಈಗಾಗಲೇ 1 ಮಿಲಿಯನ್‌ಗಿಂತಲೂ ಹೆಚ್ಚು ಟ್ವೀಟ್‌ಗಳು ಆಗಿದೆ. ಪತ್ರಿಕೋದ್ಯಮ ಜೀವಂತವಾಗಿದ್ದರೆ ವಾಸ್ತವಾಂಶಗಳನ್ನು ವರದಿ ಮಾಡಿ ಎಂದು ಹೇಳಿದ್ದಾರೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಸುಧೀರ್‌ ಯಾದವ್ ಅವರು, “ಅವರು ಜೋಲಿಗೆ ಎತ್ತಿಕೊಂಡು ನಡೆಯುತ್ತಾರೆ. ದೇಶ ಯುವಕರು ಎಚ್ಚೆತ್ತು, ಈ ಹೆಮ್ಮೆಯ ಮನುಷ್ಯನನ್ನು ಇಲ್ಲಿಂದ ಓಡಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸಾ ಅವರು, ಪ್ರಧಾನಿ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಪಟ್ಟಯನ್ನು ನೀಡಿದ್ದಾರೆ. ಅವುಗಳಲ್ಲಿ, 15 ಕೋಟಿ ಉದ್ಯೋಗ ನಷ್ಟ, 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಇಳಿದಿದ್ದು, ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಇಳಿದಿದ್ದು, ಲಾಭದಾಯಕ ಸರ್ಕಾರಿ ಉದ್ದಿಮೆಗಳನ್ನು ಮಾಡಿದ್ದು, ಕೊರೊನಾ ದುರಾಡಳಿತ, ಎಲ್‌ಪಿಜಿಗೆ 900 ರೂ, ಪೆಟ್ರೋಲ್‌ಗೆ 110 ರೂ, ಅಡುಗೆ ಎಣ್ಣೆಗೆ 200 ರೂ.

ಒಬೈದುಲ್ಲಾ ಅವರು, “ಭಾರತದಲ್ಲಿ ಮೊಟ್ಟಮೊದಲ ಡಿಜಿಟಲ್ ಕ್ಯಾಮೆರಾ ಮಾರಾಟವಾಗಿದ್ದು 1995 ರಲ್ಲಿ. ಆದರೆ ಮೋದಿ ಅದನ್ನು 1987-88ರಲ್ಲಿ ಬಳಸಿದ್ದಾರೆ” ಎಂದು ಪ್ರಧಾನಿ ಮೋದಿ ಅವರು ಡಿಜಿಟಲ್‌ ಕ್ಯಾಮೆರಾ ಬಗ್ಗೆ ಖಾಸಗಿ ಚಾನೆಲ್‌ ಒಂದರಲ್ಲಿ ಸುಳ್ಳು ಹೇಳುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಜಾಹೀರಾತಿಗೆ ದೆಹಲಿ ಸರ್ಕಾರಿ ಶಾಲೆಗಳ ಫೋಟೊ ಬಳಕೆ: ಥ್ಯಾಂಕ್ಯೂ ಮೋದಿಜೀ ಎಂದ ಆಪ್

ಅನುಪಮ್‌ ಅವರು, “ಇವತ್ತಿನ ‘ಜುಮ್ಲಾ ದಿವಸ್’ ನಿರುದ್ಯೋಗದ ಬಿಕ್ಕಟ್ಟನ್ನು ನಿರ್ಲಕ್ಷಿಸದಂತೆ ಮೋದಿ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನೋಜ್ ಮೆಹ್ತಾ ಅವರು, “ಒಂದು ದಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ನಿಮ್ಮನ್ನು ಓಡಿಸುತ್ತಾರೆ. ಆಗ ಮೊದಲು ತಪ್ಪಿಸಿಕೊಳ್ಳುವುದು ನಿಮ್ಮ ಕಾರ್ಪೊರೇಟ್ ಸ್ನೇಹಿತರು” ಎಂದು ಬರೆದಿದ್ದಾರೆ.

ವಿನಯ್ ಕುಮಾರ್‌ ದೊಕಾನಿಯಾ ಅವರು, “ಈ ಸಹಸ್ರಮಾನದ ಮಾರಾಟಗಾರ ವಿಶ್ವ ಫೇಕು ದಿನವನ್ನು ಆಚರಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಮಧುರೇಂದ್ರ ಸಿಂಗ್‌ ಅವರು, “ದೇಶಕ್ಕಾಗಿ ಕೊಡುಗೆ ನೀಡಲು ಸಾಧ್ಯವಿಲ್ಲದ ಕಾರಣ ಮಾಲಿಂಗ ನಿವೃತ್ತರಾದರು, ಮೋದಿಜಿ ನೀವು ಯಾವಾಗ ನಿವೃತ್ತರಾಗುತ್ತೀರಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...