ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಿಂದಾಗಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ. ಬಿಜೆಪಿ ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುತ್ತಿದೆ ಎಂದಿರುವ ಸಿಎಂ ಮಮತಾ ಬ್ಯಾನರ್ಜಿ, ನಾನು ಭಾರತವನ್ನು ತಾಲಿಬಾನ್ ಅಥವಾ ಪಾಕಿಸ್ತಾನವಾಗಲು ಬಿಡುವುದಿಲ್ಲ ಎಂದಿದ್ದಾರೆ.
ಇತ್ತೀಚೆಗೆ ಸಿಎಂ ಮಮತಾ ಬ್ಯಾನರ್ಜಿ ಮಸೀದಿಗೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದ್ದ ಬಿಜೆಪಿ, ಮಮತಾ ಬ್ಯಾನರ್ಜಿ ಮಸೀದಿಗೆ ಧಿಡೀರ್ ಭೇಟಿ ನೀಡಿ, ಎಲ್ಲರನ್ನೂ ಓಲೈಸುವ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಡಿಯೊ ತುಣುಕನ್ನು ವೈರಲ್ ಮಾಡಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಾನು ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದಾಗ ಬಿಜೆಪಿಯವರಿಗೆ ಸಮಸ್ಯೆ ಉಂಟಾಗುತ್ತದೆ. ವಿಧಾನಸಭಾ ಚುನಾವಣೆಗೆ ಮುನ್ನವೂ ನಂದಿಗ್ರಾಮದಲ್ಲಿ ನನ್ನನ್ನು ಸೋಲಿಸಲು ಪಿತೂರಿ ನಡೆಸಲಾಯಿತು. ಟಿಎಂಸಿ ಗೆದ್ದರೆ ಮಿನಿ ಪಾಕಿಸ್ತಾನ ಆಗುತ್ತದೆ ಎಂದರು. ಈಗ ಮತ್ತೆ ಭವಾನಿಪುರದಲ್ಲಿ ಧರ್ಮದ ಬಣ್ಣ ಬಳಿಯುತ್ತಿದ್ದಾರೆ. ಆದರೆ, ನಾನು ಭಾರತವನ್ನು ತಾಲಿಬಾನ್ ಅಥವಾ ಪಾಕಿಸ್ತಾನವಾಗಲು ಬಿಡುವುದಿಲ್ಲ” ಎಂದಿದ್ದಾರೆ.
ಇದನ್ನೂ ಓದಿ: ಭವಾನಿಪುರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಚುನಾವಣಾ ಆಯೋಗದ ನೋಟಿಸ್
ಭವಾನಿಪುರದ ಬಂಗಾಳಿ ಸಮುದಾಯದವರಲ್ಲದ ಮತದಾರರು, ಒಟ್ಟು 40% ರಷ್ಟಿದ್ದಾರೆ. ಇವರ ಮತಗಳನ್ನು ಪಡೆಯಲು ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪ್ರಯತ್ನಿಸುತ್ತಿವೆ.
ಸಿಖ್ ಮತದಾರರ ಬೆಂಬಲವನ್ನು ಪಡೆಯಲು ಮಮತಾ ಬ್ಯಾನರ್ಜಿ ಬುಧವಾರ ಭವಾನಿಪುರದ ಗುರುದ್ವಾರಕ್ಕೆ ಭೇಟಿ ನೀಡಿದ್ದರು. ಜೊತೆಗೆ ಗುರುವಾರ ಭವಾನಿಪುರದ ಲೇಡೀಸ್ ಪಾರ್ಕ್‌ನಲ್ಲಿ ಗುಜರಾತಿ ಮತದಾರರೊಂದಿಗೆ ಸಂವಾದ ನಡೆಸಿದ್ದರು.
If you thought Bhabanipur was a “no contest” and Mamata Banerjee was confident of winning hands down, forget it. She is sweating. This visit to Sola Ana Masjid is not “sudden” but a planned visit to seek votes from ward 77.
In the next few days, she will hop from booth to booth. https://t.co/7oyWrMRdPS
— Amit Malviya (@amitmalviya) September 13, 2021
ಇತ್ತ, ಮಾದರಿ ನೀತಿ ಸಂಹಿತೆ ಮತ್ತು ಕೊರೊನಾ ನಿಯಮಾವಳಿಗಳ ಉಲ್ಲಂಘನೆಗಾಗಿ ಚುನಾವಣಾ ಆಯೋಗದಿಮದ ನೋಟಿಸ್ ಪಡೆದಿರುವ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್, “ಗುರುದ್ವಾರಕ್ಕೆ ಭೇಟಿ ನೀಡಿದಾಗ ಮಮತಾ ಬ್ಯಾನರ್ಜಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಮತ್ತು ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕೇಂದ್ರದಿಂದ ಕಿತ್ತೊಗೆಯುವಂತೆ ವಿಪಕ್ಷಗಳನ್ನು ಒತ್ತಾಯಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ನಾವು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಹೇಳಿದ್ದಾರೆ.


