Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಜಾರಿ ಮಾಡಿ ಒಂದು ವರ್ಷವಾದ ಹಿನ್ನೆಲೆ ಅಕಾಲಿದಳ ದೆಹಲಿಯಲ್ಲಿ ’ಕರಾಳ ಶುಕ್ರವಾರ ಮೆರವಣಿಗೆ’ (black Friday march) ಆಯೋಜಿಸಿತ್ತು.

ಪ್ರತಿಭಟನೆ ನಡೆಸುತ್ತಿದ್ದ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್, ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಮತ್ತು ಇತರ  12ಕ್ಕೂ ಹೆಚ್ಚು ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಮತ್ತು ಇತರರನ್ನು ಸೆಕ್ಷನ್ 144 ಉಲ್ಲಂಘನೆ ಆರೋಪದಲ್ಲಿ ಬಂಧಿಸಿ, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

“ನಾವು ಪ್ರತಿಭಟನೆ ನಡೆಸಲು ಬಂದಿದ್ದೆವು. ಇದು ಶಾಂತಿಯುತ ಪ್ರತಿಭಟನೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಆದರೆ, ದೆಹಲಿ ಪೊಲೀಸರು ನಮ್ಮನ್ನು ತಡೆಯಲು ಬಲಪ್ರಯೋಗ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು. ಅರವಿಂದ್ ಕೇಜ್ರೀವಾಲ್ ನಮಗೆ ಗುರುದ್ವಾರದಲ್ಲಿ ಸೇರುವಂತಿಲ್ಲ ಎಂದು ಆದೇಶ ನೀಡಿದೆ. ಒಕ್ಕೂಟ ಸರ್ಕಾರ ಕೂಡ ನಮ್ಮನ್ನು ತಡೆದಿದೆ. ಇದು ಪ್ರಜಾಪ್ರಭುತ್ವವಲ್ಲ” ಎಂದು ಸುಖ್‌ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ ಎಂದು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಈ ಮೊದಲು ರೈತರು ಮತ್ತು ಅಕಾಲಿ ದಳದ ಕಾರ್ಯಕರ್ತರು ದೆಹಲಿಯ ಗಡಿಗಳಲ್ಲಿ ನೆರೆದಿದ್ದರು, ಆದರೆ, ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ, ಪ್ರಮುಖ ರಸ್ತೆಗಳನ್ನು ಮುಚ್ಚಿದ್ದರು. ಜೊತೆಗೆ ಪ್ರತಿಭಟನಾಕಾರರು ಗಡಿಯನ್ನು ಪ್ರವೇಶಿಸುವುದನ್ನು ತಡೆಯಲು ಎರಡು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿದ್ದರು.

ಗುರುದ್ವಾರದ ರಕಾಬ್ ಗಂಜ್ ಸಾಹಿಬ್‌ನಿಂದ ನವದೆಹಲಿಯ ಸಂಸತ್ತಿನವರೆಗೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ರೈತರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ ಎಂದು ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ತಿಳಿಸಿದ್ದರು.

ಕೃಷಿ ಕಾನೂನನ್ನು ವಿರೋಧಿಸಿ ಅಕಾಲಿದಳದ ಸಂಸದೆ ಹರ್ಸಿಮ್ರತ್ ಕೌರ್ ಒಕ್ಕೂಟ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದ್ದು ಮಾತ್ರವಲ್ಲದೆ, ಪಕ್ಷವು ಬಿಜೆಪಿ ನೇತೃತ್ವದ NDA ಮೈತ್ರಿ ಕೂಟದಿಂದ ಹೊರ ಬಂದಿತ್ತು.

ರೈತರು ಮತ್ತು ವಿರೋಧ ಪಕ್ಷಗಳು ಕಳೆದ ವರ್ಷದ ನವೆಂಬರ್ 26, 27 ರಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರೈತ ಮುಖಂಡರ ನಡುವೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದೆ, ಆದರೆ ಎಲ್ಲವು ವಿಫಲವಾಗಿವೆ. ಸೆಪ್ಟಂಬರ್‌ 27ಕ್ಕೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ.


ಇದನ್ನೂ ಓದಿ: #WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...