Homeಮುಖಪುಟ#NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

#NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 71 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಹುಟ್ಟಿದ ದಿನದ ಶುಭ ಕೋರಿದವರಿಗಿಂತ ಉದ್ಯೋಗ ಕೇಳಿದವರೆ ಹೆಚ್ಚಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ” ಎಂದು ಟೀಕೆ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬೆಳಗ್ಗೆಯಿಂದ  ರಾಷ್ಟ್ರೀಯ ನಿರುದ್ಯೋಗ ದಿನ (#NationalUnemploymentDay, #राष्ट्रीय_बेरोजगार_दिवस), ಮೋದಿ ನಮಗೆ ಉದ್ಯೋಗ ನೀಡಿ(#मोदी_रोजगार_दो), ಅಖಂಡ ಗ್ರಹಚಾರ ದಿವಸ (#अखंड_पनौती_दिवस) ಹ್ಯಾಶ್‌ಟ್ಯಾಗ್‌ಗಳು ಕ್ರಮವಾಗಿ ಟ್ವಿಟರ್‌ ಟ್ರೆಂಡ್‌‌‌ನಲ್ಲಿದೆ. ಇದರ ಜೊತೆಗೆ ‘ವಿಶ್ವ ಫೇಕು ದಿನ’ #WorldFekuDay ಮತ್ತು ಜುಮ್ಲಾ ದಿವಸ್ #JumlaDiwas ಹ್ಯಾಶ್‌ಟ್ಯಾಗ್‌ಗಳು ಕೂಡಾ ಟ್ರೆಂಡ್‌ ಆಗಿವೆ.

“ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ. ತಾವೇನೋ ದುಡಿಯಲಾರದ ಸೋಂಬೇರಿತನದಲ್ಲಿ ಸ್ವಾಭಿಮಾನ ಮರೆತು ಭಿಕ್ಷೆ ಬೇಡಿರಬಹುದು, ಆದರೆ ದೇಶದ ಸ್ವಾಭಿಮಾನಿ ಯುವಜನತೆ ಭಿಕ್ಷೆ ಬೇಡಲಾರರು! ಬದುಕಲು ಜನತೆಗೆ ಉದ್ಯೋಗ ಬೇಕಿದೆ” ಎಂದು ಟೀಕಿಸಿದೆ.

ಇದನ್ನೂ ಓದಿ: #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

“ಉದ್ಯೋಗ ಸೃಷ್ಟಿಯ ಪ್ರಶ್ನೆಗೆ ಯುವಕರು ಪಕೋಡಾ ಮಾರುತ್ತಿಲ್ಲವೇ ಎಂದು ಕೇಳಿದ ಜಗತ್ತಿನ ಏಕೈಕ ಪ್ರಧಾನಿ
ನರೇಂದ್ರ ಮೋದಿ!. ಇದು ಬೇಜವಾಬ್ದಾರಿತನ ಹಾಗೂ ಮೂರ್ಖತನದ ಪರಮಾವಧಿ. ಗ್ಯಾಸ್, ಅಡುಗೆ ಎಣ್ಣೆಯಂತಹ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ, ದೇಶವನ್ನು ಪಕೋಡಾ ಮಾಡಲೂ ಆಗದ ಸ್ಥಿತಿಗೆ ತಂದಿಟ್ಟಿದ್ದಾರೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇತ್ತ, ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಯುವ ಕಾಂಗ್ರೆಸ್‌ ಇಂದು ದೇಶದಾದ್ಯಂತ ಪ್ರತಿಭಟನೆಯನ್ನೂ ನಡೆಸುತ್ತಿದೆ.

ಯೂತ್ ಕಾಂಗ್ರೆಸ್  ಘಟಕಗಳು ದೇಶಾಸ್ಯಂತ ಪ್ರತಿಭಟನೆ ನಡಸಿವೆ. ಜೊತೆಗೆ ತಮ್ಮ ಸಾಮಾಜಿಕ ಜಾಲತಾಣಗಳ ಪ್ರೋಫೈಲ್ ಪೋಟೋಗಳನ್ನು ರಾಷ್ಟ್ರೀಯ ನಿರುದ್ಯೋಗ ದಿವಸ ಎಂಬ ಪೋಸ್ಟರ್‌‌‌ ಬಳಸಿ ಬದಲಿಸಿವೆ. ರಾಜ್ಯದಲ್ಲಿಯೂ ಯುವ ಕಾಂಗ್ರೆಸ್ ಪ್ರತಿಭಟನೆ ಜೊತೆಗೆ ಉದ್ಯೋಗ ನೀಡಿ ಅಭಿಯಾನ ನಡೆಸಿದೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...