Homeಕರ್ನಾಟಕಯಲಹಂಕ - ತಮ್ಮ ‘ನೆಲದ ಹಕ್ಕು’ಗಳಿಗಾಗಿ ಬಿಡಿಎ ವಿರುದ್ದ 17 ಹಳ್ಳಿಗಳ ರೈತರಿಂದ ಬೃಹತ್ ಪ್ರತಿಭಟನೆ

ಯಲಹಂಕ – ತಮ್ಮ ‘ನೆಲದ ಹಕ್ಕು’ಗಳಿಗಾಗಿ ಬಿಡಿಎ ವಿರುದ್ದ 17 ಹಳ್ಳಿಗಳ ರೈತರಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಲು ಹೊರಟಿರುವ ‘ಶಿವರಾಮ ಕಾರಂತ ಬಡಾವಣೆ ಯೋಜನೆ’ಯ ವಿರುದ್ದ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳ ರೈತರು ಯಲಹಂಕ ಸರ್ಕಾರಿ ಶಾಲೆಯ ಆವರಣದಲ್ಲಿ ಬೃಹತ್‌ ಪ್ರತಿಭಟನಾ ಸಭೆ ಶುಕ್ರವಾರದಂದು ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಕಂದಾಯ ಇಲಾಖೆಯ ಸಹಾಯಕ ಆಯುಕ್ತ ರಂಗನಾಥ್‌ ಮುಖಾಂತರ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಗಿದೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳಲ್ಲಿ ಬಿಡಿಎ ‘ಶಿವರಾಮ ಕಾರಂತ ಬಡಾವಣೆ’ ಎಂಬ ವಸತಿ ಸೌಕರ್ಯವನ್ನು ನಿರ್ಮಿಸಲು ಹೊರಟಿದೆ. ಯೋಜನೆಯ ವಿರುದ್ದ, ಅಲ್ಲಿನ ರೈತರು ಮತ್ತು ನಿವಾಸಿಗಳು ಸುಮಾರು 47 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಬೆ೦ಗಳೂರು ಅಬಿವೃದ್ಧಿ ಪ್ರಾಧಿಕಾರವು, ‘ಡಾ| ಕೆ. ಶಿವರಾಮ ಕಾರಂತ ಬಡಾವಣೆ’ಗಾಗಿ ಬೆ೦ಗಳೂರು ಉತ್ತರ ತಾಲೂಕು ರಾಮಗೊಂಡನಹಳ್ಳಿಯ ಸುತ್ತಮುತ್ತಲಿನ 17 ಹಳ್ಳಿಗಳ 3546 ಎಕರೆ 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸುವುದಾಗಿ ಈಗಾಗಲೆ ಹೇಳಿದೆ.

ಸಂತ್ರಸ್ತ ರೈತರು ಪ್ರಾಧಿಕಾರ ಹಾಗೂ ಸರ್ಕಾರಕ್ಕೆ ಅನೇಕ ಮನವಿಗಳನ್ನು ನೀಡಿದ ಹೊರತಾಗಿಯು ಸಮಸ್ಯೆ ಪರಿಹಾರವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಸಂತ್ರಸ್ತ 17 ಹಳ್ಳಿಯ ರೈತರು ಇಂದು ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದ್ದರು.

“ಉದ್ದೇಶಿತ ಡಾ| ಕೆ. ಶಿವರಾಮ ಕಾರಂತ ಬಡಾವಣೆಗೆ ಒಳಪಡುವ 17 ಗ್ರಾಮಗಳು ಬಹುತೇಕ ಅಬಿವೃದ್ಧಿ ಹೊ೦ದಿರುವುದರಿಂದ ಈ ಯೋಜನೆಯನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್‌ಗೆ ಸರ್ಕಾರ ಮನವಿ ಸಲ್ಲಿಸಬೇಕು” ಎಂದು ರೈತರು ಸಭೆಯಲ್ಲಿ ಒಕ್ಕೊರೊಳಿನಿಂದ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಈ ಹಿಂದೆ ದೊಡ್ಡಬೆಡ್ಡ ಹಳ್ಳಿಯ ದಲಿತ ಮಹಿಳೆ ಜಯಮ್ಮ ಮತ್ತು ಶಾಂತರಾಜು ಎಂಬವರ ಮನೆಯನ್ನು ಬಿಡಿಎ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ಧ್ವಂಸಗೊಳಿಸಿದ್ದರು. ಅವರಿಗೆ ಕೂಡಲೆ ಪುನರ್‌ವಸತಿ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ರೈತರು ತಮ್ಮ ಹೋರಾಟವನ್ನು ಮತ್ತೆ ಮುಂದುವರೆಸಿದ್ದು, ಮುಂದಿನ ತಿಂಗಳು ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ಯಲಹಂಕದಲ್ಲಿ ‘‘ಅರೆ ಬೆತ್ತಲೆ ಮೆರವಣಿಗೆ” ನಡೆಸಿ ತಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.

ಇಲ್ಲಿನ ರೈತರು ಇತ್ತೀಚೆಗಷ್ಟೇ, ಯೋಜನೆಯ ಅನುಷ್ಠಾನದ ಹೆಸರಿನಲ್ಲಿ ಬಿಡಿಎ ಅಧಿಕಾರಿಗಳು ನಡೆಸುತ್ತಿರುವ ದೌರ್ಜ್ಯನ್ಯವನ್ನು ಖಂಡಿಸಿ, ಕೃಷ್ಣಜನ್ಮಾಷ್ಠಮಿಯ ದಿನದಂದು ‘ವಿಧಾನಸೌಧ ಚಲೋ’ ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ರೈತರು ಮುಖ್ಯಮಂತ್ರಿಗೆ ಸಲ್ಲಿಸಿರುವ ಪತ್ರವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಡ್ಡಾದಿಡ್ಡಿ ಬೆಳವಣಿಗೆ ತಡೆಯಲು ಬಿಡಿಎ ಯ planned layoutsಗಳೇ ಮದ್ದು. ಬೆಂಗಳೂರು ಸೇರಿದಂತೆ ಉಳಿದ ಪಟ್ಟಣಗಳ ಸುತ್ರಾ ಸರ್ಕಾರದ ವತಿಯಿಂದ planning layoutಗಳನ್ನು ಮಾಡುವುದನ್ನು ಅಲ್ಲಿನ ಬೆಳೆಬೆಳೆಯದ ನೆಲದೊಡೆಯರು ತಡೆಯುತ್ತಿದ್ದಾರೆ.
    ಇದು ತುಂಬಾ ಗಂಬೀರ ಸಂಗತಿ.
    ಇಂತ ಹೊಸ layout ಗಳಲ್ಲಿ ದೊಡ್ಡ ಅಳತೆಯ(50*80,40*60 ) ನಿವೇಶನಗಳನ್ನು ಮಾಡುವುದನ್ನು ಕಯ್ ಬಿಟ್ಟು ಬಡವರಿಗೆ,ನಡುಪದರಿನ ಮಂದಿಗೆ ನೆರವಾಗುವಂತೆ ೩೦*೪೦ ರಂತ ಅಳತೆಯ ನಿವೇಶನಗಳನ್ನು ಮಾಡಿ ಹಂಚಬೇಕು. ಈಗಾಗಲೇ ಬೆಂಗಳೂರಿನಲ್ಲಿ ನೆಲೆಇರುವ ಮಂದಿಯ ಸೊತ್ತುಗಳನ್ನು ಆದಾರ್ ಕಾರ್ಡ್ ಗೆ ಜೋಡಿಸಿ, ಉಳ್ಳವರೇ ಮತ್ತೆ ನಿವೇಶನ ಪಡೆದಂತೆ ಮಾಡಬೇಕು.
    ಕೊಳ್ಳೆಮಾಡುವ ಕಾಸಗಿ ರಿಯಲ್ ಎಸ್ಟೇಟ್ ಮಾಪಿಯಾವನ್ನು ಮಟ್ಟಹಾಕಲು ಇದೊಂದು ತಕ್ಕ ದಾರಿ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...