Homeಮುಖಪುಟ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

- Advertisement -
- Advertisement -

ರಾಜ್ಯದಲ್ಲಿ ಬಾಲ್ಯವಿವಾಹಗಳ ನೋಂದಣಿಗೆ ಅವಕಾಶ ನೀಡಲಾಗುವ ಮಸೂದೆಯನ್ನು ಶುಕ್ರವಾರದಂದು ರಾಜಸ್ಥಾನ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಬಗ್ಗೆ ಸದನದಲ್ಲಿ ಬಿರುಸಿನ ಚರ್ಚೆ ನಡೆದರೂ, ಅಂತಿಮವಾಗಿ, ‘ರಾಜಸ್ಥಾನ ವಿವಾಹಗಳ ಕಡ್ಡಾಯ ನೋಂದಣಿ ತಿದ್ದುಪಡಿ ಮಸೂದೆ’ಯನ್ನು ಅಂಗೀಕರಿಸಲಾಯಿತು.

ಈ ಹೊಸ ಮಸೂದೆಯ ಪ್ರಕಾರ, ಬಾಲ್ಯ ವಿವಾಹದ ಮಾಹಿತಿಯನ್ನು ಮದುವೆಯಾದ 30 ದಿನಗಳ ಒಳಗೆ ನೀಡಬೇಕು. ಚರ್ಚೆಯಲ್ಲಿ, ಸಂಸತ್ತಿನ ವ್ಯವಹಾರಗಳ ಸಚಿವೆ ಶಾಂತಿ ಧಾರಿವಾಲ್ ಅವರು ಬಾಲ್ಯವಿವಾಹಗಳನ್ನು ನೋಂದಾಯಿಸುವುದರಿಂದ ಅವುಗಳನ್ನು ಮಾನ್ಯವೆಂದು ಪರಿಗಣಿಸಲಾಗುವುದು ಎಂದಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಹೊಸ ಕಾನೂನಿನ ಪ್ರಕಾರ, ವಿವಾಹ ನೋಂದಣಿ ಅಧಿಕಾರಿಯು ಬ್ಲಾಕ್ ಹಂತದವರೆಗೆ ನೋಂದಣಿಯನ್ನು ಮಾಡುತ್ತಾರೆ. ಮದುವೆಯ ಸಮಯದಲ್ಲಿ ಹುಡುಗಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿದ್ದರೆ ಮತ್ತು ಹುಡುಗನ ವಯಸ್ಸು 21 ಕ್ಕಿಂತ ಕಡಿಮೆಯಿದ್ದರೆ, ಅವರ ಪೋಷಕರು ನೋಂದಣಿ ಅಧಿಕಾರಿಗೆ 30 ದಿನಗಳಲ್ಲಿ ತಿಳಿಸಬೇಕೆಂದು ಮಸೂದೆಯು ತಿಳಿಸುತ್ತದೆ.

ಬಾಲ್ಯವಿವಾಹಗಳ ಸಂದರ್ಭದಲ್ಲಿ ಹುಡುಗ ಮತ್ತು ಹುಡುಗಿಯ ಪೋಷಕರು ನಿಗದಿತ ನಮೂನೆಯಲ್ಲಿ ಜ್ಞಾಪನಾ ಪತ್ರವನ್ನು ನೀಡಿ ನೋಂದಣಿ ಅಧಿಕಾರಿಗೆ ತಿಳಿಸಬೇಕಾಗುತ್ತದೆ. ಇದರ ಆಧಾರದ ಮೇಲೆ, ನೋಂದಣಿ ಅಧಿಕಾರಿ ಆ ಬಾಲ್ಯ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಾರೆ. ಈ ನಿಬಂಧನೆಯನ್ನು ವಿವಾಹಗಳ ಕಡ್ಡಾಯ ನೋಂದಣಿ ಕಾಯಿದೆಯ ಸೆಕ್ಷನ್ 8 ರಲ್ಲಿ ಮಾಡಲಾಗಿದೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಈ ಹಿಂದೆ ರಾಜ್ಯದಲ್ಲಿ, ಜಿಲ್ಲಾ ಮಟ್ಟದಲ್ಲಿ ವಿವಾಹ ನೋಂದಣಿ ಅಧಿಕಾರಿಗಳು ಇದ್ದರು ಆದರೆ ಈಗ ಬ್ಲಾಕ್ ಹಂತದವರೆಗೆ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.

ಬಾಲ್ಯ ವಿವಾಹ ಕಾನೂನುಬಾಹಿರವಾಗಿರುವಾಗ ನೋಂದಣಿಯ ಅಗತ್ಯತೆ ಮತ್ತು ವಿಧೇಯಕದ ಉದ್ದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಮಸೂದೆಯನ್ನು ತರಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಪ್ರತಿಪಕ್ಷಗಳು ಬಾಲ್ಯವಿವಾಹಗಳ ನೋಂದಣಿಯ ಅಗತ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿ, ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಧಾರಿವಾಲ್, “ಬಾಲ್ಯ ವಿವಾಹವನ್ನು ನೋಂದಾಯಿಸುವುದು ಎಂದರೆ ಬಾಲ್ಯವಿವಾಹಕ್ಕೆ ಸಿಂಧುತ್ವವನ್ನು ನೀಡುವುದು ಎಂದಲ್ಲ ಮತ್ತು ಅವರಿಗೆ ನ್ಯಾಯಬದ್ಧತೆಯನ್ನು ನೀಡುವುದು ಎಂದಲ್ಲ” ಎಂದು ಪ್ರತಿಪಾದಿಸಿದ್ದಾರೆ. ನೋಂದಾಯಿಸಿದ ನಂತರವೂ ಬಾಲ್ಯ ವಿವಾಹಗಳನ್ನು ಆಯೋಜಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...