Homeಮುಖಪುಟಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ - ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ...

ಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ – ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್

ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗವನ್ನು ಕಳೆದುಕೊಂಡು ಸುಮಾರು 11 ಲಕ್ಷ ಜನರು ಕೇರಳಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

- Advertisement -
- Advertisement -

ಗಲ್ಫ್ ದೇಶಗಳ ವಿಮಾನಯಾನ ದರವನ್ನು ಕೈಗೆಟುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಒಕ್ಕೂಟ ಸರ್ಕಾರದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಬರೆದ ಪತ್ರದಲ್ಲಿ, “ಕೊರೊನಾ ಸಾಂಕ್ರಮಿಕದ ಸಮಯದಲ್ಲಿ ಅತೀ ಹೆಚ್ಚು ಪರಿಣಾಮ ಬೀರಿದ ವಿಭಾಗ ಅನಿವಾಸಿ ಭಾರತೀಯರಾಗಿದ್ದಾರೆ. ಸಾಂಕ್ರಾಮಿಕದ ಮೊದಲ ಲಾಕ್‌ಡೌನ್ ಸಮಯದಲ್ಲಿ ದೇಶಕ್ಕೆ ಬಂದ ಅವರು, ನಂತರ ಯಾವುದೆ ಉದ್ಯೋಗವಿಲ್ಲದೆ ಇಲ್ಲಿ ಇರಬೇಕಾಯಿತು” ಎಂದು ಹೇಳಿದ್ದಾರೆ.

ಗಲ್ಫ್ ದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ವಿಮಾನದ ಟಿಕೆಟ್‌ಗಳನ್ನು ಕೈಗೆಟುಕುವಂತೆ ಮಾಡಲು ಸಚಿವರು “ತಕ್ಷಣದ ಮಧ್ಯಸ್ಥಿಕೆ” ವಹಿಸಬೇಕು ಎಂದು ಪಿಣರಾಯಿ ಕೋರಿದ್ದಾರೆ. ವಿವಿಧ ವಿಮಾನ ಮಾರ್ಗಗಳು ಶೀಘ್ರದಲ್ಲೇ ತೆರೆಯುತ್ತಿರುವುದರಿಂದ ಜನರು ಗಲ್ಫ್ ದೇಶಗಳಿಗೆ ಮರಳಲು ಉತ್ಸುಕರಾಗಿದ್ದಾರೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಕಳೆದ ಒಂದು ವರ್ಷದಿಂದ ನಿರುದ್ಯೋಗಿಗಳಾಗಿರುವ ಅನೇಕರಿಗೆ ವಿಮಾನ ಪ್ರಯಾಣದ ದರಗಳನ್ನು ಭರಿಸಲು ಕಷ್ಟವಾಗುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚು ಸಂಕಷ್ಟ ಅನುಭವಿಸಿದವರಲ್ಲಿ ಕೌಶಲ್ಯರಹಿತ ಮತ್ತು ಅರೆಕೌಶಲ್ಯ ಹೊಂದಿರುವ ಅನಿವಾಸಿ ಕಾರ್ಮಿಕರಾಗಿದ್ದಾರೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಸಾಂಕ್ರಮಿದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವುದರಿಂದ ಸಚಿವರು ಅದಕ್ಕೆ ಬೆಂಬಲ ನೀಡಬೇಕು ಎಂದು ಪಿಣರಾಯಿ ವಿಜಯನ್ ಪತ್ರದಲ್ಲಿ ಸಿಂದಿಯಾ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ.

ಹೆಚ್ಚಿನ ಜನರು ಕೈಗೆಟುಕುವ ದರದಲ್ಲಿ ವಿದೇಶಕ್ಕೆ ಪ್ರಯಾಣಿಸಲು ಸಾಧ್ಯವಾದಾಗ ವಿದೇಶಿ ವಿನಿಮಯದ ಮೂಲಕ ಭಾರತದ ಬೊಕ್ಕಸಕ್ಕೆ ಹೆಚ್ಚಿನ ಹಣ ಬರುತ್ತದೆ ಎಂದು ಅವರು ಹೇಳಿದ್ದು, ಇದು ದೇಶದ ಆರ್ಥಿಕ ಚೇತರಿಕೆಯನ್ನು ಸುಧಾರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಸೆಂಟರ್ ಫಾರ್ ಇಂಡಿಯನ್ ಮೈಗ್ರಂಟ್ ಸ್ಟಡೀಸ್ (ಸಿಐಎಂಎಸ್) ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಅನೇಕ ಅನಿವಾಸಿ ಭಾರತೀಯರು ತಮ್ಮ ಉದ್ಯೋಗದಾತರಿಂದ  ಬರಬೇಕಿರುವ ಬಾಕಿ ಹಣವನ್ನು ಪಡೆದಿಲ್ಲ ಎಂದು ಬಹಿರಂಗಪಡಿಸಿದೆ. ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗವನ್ನು ಕಳೆದುಕೊಂಡು ಸುಮಾರು 11 ಲಕ್ಷ ಜನರು ಕೇರಳಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...