Homeಕರ್ನಾಟಕಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ರಾಜ್ಯದ 31 ಜಿಲ್ಲೆಗಳಲ್ಲಿಯೂ ಸೈಕಲ್ ಜಾಥಾ ನಡೆಸಲು ನಿರ್ಧರಿಸಿರುವ ಕಿರಣ್, ಈವರೆಗೆ 13 ಜಿಲ್ಲೆಗಳಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

- Advertisement -
- Advertisement -

“ದೇಶದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಹೆಣ್ಣು ಮಕ್ಕಳ ಮೇಲೆ ಶೋಷಣೆ ನಿರಂತರವಾಗಿ ನಡೆಯುತ್ತಿದೆ. ಕಳೆದ ವರ್ಷ 38 ರಿಂದ 36 ಸಾವಿರ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಆದರೆ, ಶಿಕ್ಷೆಯಾಗುವುದು ಮಾತ್ರ ಅದರಲ್ಲಿ ನಾಲ್ಕನೇ ಒಂದು ಭಾಗ..” ಹೀಗೆ ಮಾತನಾಡುತ್ತಾ ಸಾಗಿದ್ದು, ಅತ್ಯಾಚಾರ ನಿರ್ಮೂಲನೆ ಮತ್ತು ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಅಖಂಡ ಕರ್ನಾಟಕ ಸೈಕ್ಲಿಂಗ್ ಜಾಥಾ ನಡೆಸುತ್ತಿರುವ ವಿದ್ಯಾರ್ಥಿ ಕಿರಣ್ ವಿ.

ಬೆಂಗಳೂರಿನ ಬನ್ನೇರುಘಟ್ಟದ ನಿವಾಸಿ ಕಿರಣ್, ರಾಜ್ಯದ 31 ಜಿಲ್ಲೆಗಳಲ್ಲಿಯೂ ಸೈಕಲ್ ಜಾಥಾ ನಡೆಸಿ, ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆಯಾಗಬೇಕು. ಅತ್ಯಾಚಾರ ನಿರ್ಮೂಲನೆಯಾಗಬೇಕು ಎಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸುತ್ತಿದ್ದಾರೆ.

ಕೆ.ಆರ್.ಸರ್ಕಲ್‌ನ ಸರ್ಕಾರಿ ಆಟ್ಸ್ ಕಾಲೇಜಿನಲ್ಲಿ ಪ್ರಥಮ ಬಿ.ಎ ವಿದ್ಯಾರ್ಥಿಯಾಗಿರುವ ಕಿರಣ್, ಕಳೆದ ಆಗಸ್ಟ್ 28ರ ಭಾನುವಾರ ಈ ಜಾಥಾ ಶುರು ಮಾಡಿದ್ದು, ಇಂದಿಗೆ  28 ದಿನಗಳು ಕಳೆದಿವೆ. ಈವರೆಗೆ 13 ಜಿಲ್ಲೆಗಳಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬಿಜಾಪುರ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳು ಮುಗಿದಿವೆ. ಇನ್ನು 18 ಜಿಲ್ಲೆಗಳು ಬಾಕಿ ಇವೆ. 3,800 ಕಿಲೋಮೀಟರ್ ಜಾಥಾ ನಡೆಸಲು ನಿರ್ಧರಿಸಿರುವ ಕಿರಣ್, ಇಲ್ಲಿಯವರೆಗೆ 1,600 ಕಿ.ಮೀ ದೂರ ಕ್ರಮಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ತಮ್ಮ ಜಾಥಾ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಕಿರಣ್, “ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಲೇ ಇದೆ. ಅತ್ಯಾಚಾರ ನಡೆದರೂ ಶಿಕ್ಷೆ ಮಾತ್ರ ಪ್ರಕಟವಾಗುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳು ಕಣ್ಣು ಮುಚ್ಚಿದರೂ, ಸಾಮಾಜಿಕ ಮಾಧ್ಯಮಗಳು, ಅಂತರ್ಜಾಲ, ವೆಬ್‌ಸೈಟ್‌ಗಳು ಮಾಹಿತಿ ನೀಡುತ್ತವೆ. ಹೀಗಾಗಿ ಒಂದೆರಡು ತಿಂಗಳು ಈ ಬಗ್ಗೆ ರಿಸರ್ಚ್ ಮಾಡಿದೆ. ಕಳೆದ 2019-2020ರಲ್ಲಿ 38 ರಿಂದ 36 ಸಾವಿರ ಅತ್ಯಾಚಾರ ಪ್ರಕರಣಗಳು ನಡೆದಿವೆ. ಆದರೆ, ಆರೋಪಿಗಳಿಗೆ ಶಿಕ್ಷೆಯಾಗಿರುವುದು ಅತೀ ಕಡಿಮೆ. ನಾಲ್ಕನೇ ಒಂದು ಭಾಗ ಮಾತ್ರ. ಹೀಗಾಗಿ ಮನನೊಂದು ಈ ಬಗ್ಗೆ ಜಾಗೃತಿ ಮೂಡಿಸಲು ಈ ಜಾಥಾ ನಡೆಸುತ್ತಿದ್ದೇನೆ” ಎಂದಿದ್ದಾರೆ.

“ನಾನು ಈ ಜಾಥಾ ಶುರು ಮಾಡಿ ಮೂರು ದಿನಕ್ಕೆ ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಯಿತು. ದಿನ ಒಂದಲ್ಲ ಒಂದು ಘಟನೆ ವರದಿಯಾಗುತ್ತಲೆ ಇದೆ. ಅತ್ಯಾಚಾರ ನಿರ್ಮೂಲನೆಯಾಗಬೇಕು. ಅತ್ಯಾಚಾರದ ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕು. ಹೀಗಾಗಿ ಒಂದೆರಡು ಕಾಲೇಜುಗಳಿಗೂ ಭೇಟಿ ನೀಡಿ ಯುವಜನರ ಬಳಿ ಮಾತನಾಡಿದ್ದೇನೆ. ಈ ಜಾಥಾ ಮುಂದುವರೆಯಲಿದೆ” ಎಂದಿದ್ದಾರೆ ಕಿರಣ್.

ಕಿರಣ್ ತಂದೆ ಕಾರು ಚಾಲಕರಾಗಿದ್ದು, ತಾಯಿ ಮನೆ ಕೆಲಸಕ್ಕೆ ಹೋಗುತ್ತಾರೆ. ಕಿರಣ್‌ಗೆ ಒಬ್ಬ ಅಕ್ಕ ಇದ್ದಾರೆ. ಕೊರೊನಾ ಸಂಕಷ್ಟದಿಂದ ಈ ಬಾರಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ, ಈ ಒಂದು ಸೈಕ್ಲಿಂಗ್ ಜಾಥಾಕ್ಕೆ ಕೈ ಹಾಕಿದ್ದೇನೆ. ಇದನ್ನು ಮುಂದುವರೆಸುತ್ತೇನೆ. ಜೊತೆಗೆ ಮುಂದಿನ ಬಾರಿ ಪರೀಕ್ಷೆ ಬರೆಯುತ್ತೇನೆ ಎನ್ನುತ್ತಾರೆ ವಿದ್ಯಾರ್ಥಿ ಕಿರಣ್.

ಅತ್ಯಾಚಾರ ನಿರ್ಮೂಲನೆ ಬಗ್ಗೆ ಯುವಜನತೆ ಹೆಚ್ಚು ಹೆಚ್ಚು ಜಾಗೃತರಾಗಲಿ, ಹೆಣ್ಣು ಮಕ್ಕಳ ಮಲೆ ನಡೆಯುವ ದೌರ್ಜನ್ಯಗಳ ಬಗ್ಗೆ ದನಿ ಎತ್ತುವಂತಾಗಲಿ. ಕಿರಣ್ ಅಂತಹ ಯುವ ಜನರ ಸಂಖ್ಯೆ ಹೆಚ್ಚಾಗಲಿ ಅನ್ನುವುದು ನಮ್ಮ ಆಶಯ.


ಇದನ್ನೂ ಓದಿ: ಹೈದರಾಬಾದ್ – ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...