Homeಕರ್ನಾಟಕವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

- Advertisement -
- Advertisement -

“ನಕಲಿ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ” ಎಂದು ಮಾಜಿ ಕೇಂದ್ರ ಸಚಿವ, ಸಂಸದ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಾದ ಟ್ವಿಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ಬರೆದಿರುವ ಅವರು, ವಿಡಿಯೊದಲ್ಲಿರುವುದು ನಾನಲ್ಲ, ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.

“ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

“ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ, ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಈ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ, ದಯವಿಟ್ಟು ನನಗೆ ಇನ್ ಬಾಕ್ಸ್ ಮಾಡಿ” ಎಂದಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿ ಸದಾನಂದ ಗೌಡರ ಆಪ್ತ ತಮ್ಮೇಗೌಡ ಅವರು ನಗರ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಮತ್ತು ಉಪ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರತಿಯನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಸದಾನಂದಗೌಡ, “ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಅನ್ಯಧರ್ಮೀಯ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...