Homeಕರ್ನಾಟಕPUC result 2021 | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್...

PUC result 2021 | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

2021 ರ ಆಗಸ್ಟ್-ಸೆಪ್ಟೆಂಬರ್‌ ತಿಂಗಳಲ್ಲಿ ನಡೆದ ರಾಜ್ಯದ ದ್ವಿತೀಯ ಪಿಯುಸಿ(2nd puc result 2021) ಪರೀಕ್ಷೆಗಳ ಫಲಿತಾಂಶಗಳು ಸೋಮವಾರ ಪ್ರಕಟಿಸಲಾಗಿದೆ. ಈ ಹಿಂದೆ ಯಾವುದೆ ಪರೀಕ್ಷಯಿಲ್ಲದೆ ಪರ್ಯಾಯ ಮೌಲ್ಯಮಾಪನ ವಿಧಾನಗಳ ಮೂಲಕ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿತ್ತು. ಆದರೆ ಅಂದು ಪಡೆದ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ಹಾಗೂ ಪುನಾರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಲಾಗಿತ್ತು.

ಅದರಂತೆ ಈ ಪರೀಕ್ಷೆಗಳು ಆಗಸ್ಟ್ 19 ಮತ್ತು ಸೆಪ್ಟೆಂಬರ್ 3 ರ ನಡುವೆ ನಡೆದಿದ್ದವು. ಈ ಪರೀಕ್ಷೆಗಳನ್ನು ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌‌‌ ಅವರು ಇಂದು ಪ್ರಕಟಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿರುವವ ಪೈಕಿ 29.91% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 18,413 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 5,507 ಮಂದಿ ಪಾಸಾಗಿದ್ದಾರೆ. ಪಾಸಾದವರ ಪೈಕಿ, 580 ಮಂದಿ ಉನ್ನತ ಶ್ರೇಣಿ ಪಡೆದರೆ, 1,939 ಮಂದಿ ಪ್ರಥಮ ಶ್ರೇಣಿ, 1,578 ಮಂದಿ ದ್ವಿತೀಯ ಶ್ರೇಣಿ ಪಡೆದಿದ್ದಾರೆ.

592 ಹೊಸ ಅಭ್ಯರ್ಥಿಗಳು ಪರಿಕ್ಷೆಗೆ ಹಾಜರಾಗಿದ್ದು, ಈ ಪೈಕಿ 556 ಪಾಸಾಗಿದ್ದಾರೆ. ಪುನರಾವರ್ತಿತವಾಗಿ ಪರೀಕ್ಷೆ ಬರೆದಿದ್ದ 351 ಜನರಲ್ಲಿ 183 ಅಭ್ಯರ್ಥಿಗಳು ಮತ್ತು ಖಾಸಗಿಯಾಗಿ ಪರೀಕ್ಷೆ ಬರೆದಿದ್ದ 17,470 ವಿದ್ಯಾರ್ಥಿಗಳಲ್ಲಿ 4,768 ಮಂದಿ ಪಾಸಾಗಿದ್ದಾರೆ.

  • ಕಲಾ ವಿಭಾಗದಲ್ಲಿ 12,203 ಜನರು ಪರೀಕ್ಷೆ ಬರೆದಿದ್ದರು, ಅದರಲ್ಲಿ 3,912 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
  • ವಾಣಿಜ್ಯ ವಿಭಾಗ 6,114 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ 1,527 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
  • ವಿಜ್ಞಾನ ವಿಭಾದಲ್ಲಿ 96 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 68 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿರುವ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...