Homeಕರ್ನಾಟಕದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ತನ್ನ ಸಹೋದ್ಯೋಗಿ ಹಾಗೂ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಲಾಗಿತ್ತು

- Advertisement -
- Advertisement -

ತನ್ನ ಸಹೋದ್ಯೋಗಿ ಹಾಗೂ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಸುಮಾರು ಐದು ಜನರ ತಂಡವೊಂದು ಕಿರುಕುಳ ನೀಡಿದ್ದು, ಮಹಿಳೆಯ ಸ್ನೇಹಿತರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಸೋಮವಾರ ಸಂಜೆ ನಡೆದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಭಜರಂಗದಳದ ಸದಸ್ಯರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಆನೇಕಲ್ ನಿವಾಸಿ ರಾಜೇಶ್ವರಿ ಎಂಬವರು, ಈ ಹಿಂದೆ ಪೊಲೀಸರು ವಶಪಡಿಸಿಕೊಂಡಿದ್ದ ತಮ್ಮ ಕಾರನ್ನು ಮರಳಿ ಪಡೆಯಲು ಬೇಕಾಗಿ ಸೆಪ್ಟೆಂಬರ್‌ 18 ರಂದು ಪುತ್ತೂರಿಗೆ ಆಗಮಿಸಿದ್ದರು. ಹೀಗಾಗಿ ಅಲ್ಲಿನ ಸ್ಥಳೀಯ ಲಾಡ್ಜ್‌ ಒಂದರಲ್ಲಿ ರೂಂ ಪಡೆದು ತಂಗಿದ್ದರು. ಸಹೋದ್ಯೋಗಿಗಳಾದ ಬೆಂಗಳೂರಿನ ಕೊಟ್ಟಿಗೇರಿ ನಿವಾಸಿ ಶಿವ ಮತ್ತು ಉಳ್ಳಾಲದ ನಿವಾಸಿ ಯು.ಕೆ ಮೊಹಮ್ಮದ್ ಅರಾಫತ್ ಕೂಡಾ ಅವರ ಜೊತೆಗೆ ಇದ್ದರು.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ಸೆಪ್ಟೆಂಬರ್ 20 ರ ಸೋಮವಾರಂದು ಮೂವರೂ ಸಂಜೆ 7 ಗಂಟೆಗೆ ಲಾಡ್ಜ್‌ನಲ್ಲಿ ಊಟ ಮಾಡುತ್ತಿದ್ದಾಗ, ಐದು ಜನರ ತಂಡವೊಂದು ಅವರನ್ನು ಪ್ರಶ್ನಿಸಿ, ನಿಂದಿಸಲು ಆರಂಭಿಸಿದ್ದಾರೆ. ಈ ವೇಳೆ ಮಹಿಳೆಯ ಸಹೋದ್ಯೋಗಿ ಶಿವ ಎಂಬವರಿಗೆ ತಂಡದ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಇಷ್ಟೇ ಅಲ್ಲದೆ, ತಂಡದ ಸದಸ್ಯರು ಮಹಿಳೆ ಮತ್ತು ಅವರ ಸಹೋದ್ಯೋಗಿಗಳ ಫೋಟೊಗಳನ್ನು ತೆಗೆದು ಅವಮಾನಿಸಿದ್ದಾರೆ ಎಂದು ದೂರಿದ್ದಾರೆ.

ಮಹಿಳೆ ನೀಡಿದ ದೂರಿನಂತೆ, ಘಟನೆ ನಡೆದು ಕೆಲವೆ ಗಂಟೆಗಲ್ಲಿ ಇಬ್ಬರನ್ನು ಬಂಧಿಸಿದ್ದಾಗಿ ಪುತ್ತೂರು ನಗರ ಠಾಣೆಯ ಸಿಐ ಗೋಪಾಲ್ ನಾಯಕ್‌ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಗೋಪಾಲ್‌ ಅವರು, “ಮಹಿಳೆ ತನ್ನ ಸಹೋದ್ಯೋಗಿ ಮತ್ತು ಮುಸ್ಲಿಂ ಗೆಳೆಯನೊಂದಿಗೆ ಹೊಟೇಲ್‌ನಲ್ಲಿ ಆಹಾರ ಸೇವಿಸುತ್ತಿದ್ದಾಗ ಕೆಲವರು ಬಂದು ಅವರನ್ನು ಪ್ರಶ್ನಿಸಿ, ಮಹಿಳೆಯ ಗೆಳೆಯನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದಲ್ಲಿ, ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಬಂಧಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಯುತ್ತಿರುವ ಬಗ್ಗೆ ಇತ್ತೀಚೆಗೆ ಹಲವು ಪ್ರಕರಣಗಳು ವರದಿಯಾಗಿದೆ. ದಿನಗಳ ಹಿಂದೆಯಷ್ಟೆ ಬೆಂಗಳೂರಿನಲ್ಲಿ ಮುಸ್ಲಿಂ ಸಹೋದ್ಯೋಗಿಯೊಬ್ಬರಿಗೆ ಡ್ರಾಪ್‌ ನೀಡಿದ್ದನ್ನು ಪ್ರಶ್ನಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ್ದ ಇಬ್ಬರನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಮೂರನೆ ಘಟನೆಯಾಗಿದೆ ಇದು. ಬಂಟ್ವಾಳದಲ್ಲಿ ಕಾರಿಂಜ ದೇವಸ್ಥಾನಕ್ಕೆ ತೆರಳಿದ್ದ ಆರು ವಿದ್ಯಾರ್ಥಿಗಳನ್ನು ತಡೆದು ಹಲವು ಗಂಟೆಗಳ ಕಾಲ ಪ್ರಶ್ನಿಸಿದ್ದ ತಂಡದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದಕ್ಕಿಂಲೂ ಮುಂಚೆ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ವಿಭಿನ್ನಕೋಮಿನ ಯುವಕ ಯುವತಿಯರು ಒಟ್ಟಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಆರೋಪಿಸಿ ಬಸ್ಸನ್ನು ತಡೆದಿದ್ದು ವರದಿಯಾಗಿತ್ತು

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: 4 ತಿಂಗಳಲ್ಲಿ 58 ಪ್ರಕರಣಗಳು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...