Homeಕರೋನಾ ತಲ್ಲಣಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

- Advertisement -
- Advertisement -

ಕೊರೊನಾ ಕಾರಣದಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿ ಮನೆಯಲ್ಲಿ ಫ್ಯಾನಿಗೆ ಮಗಳನ್ನು ನೇಣು ಹಾಕಿ, ಅದೇ ಫ್ಯಾನಿನ ಕುಣಿಕೆಗೆ ತಾಯಿಯೂ ಕೊರಳೊಡ್ಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಹೊರ ವಲಯದ ರಾಜಾನುಕುಂಟೆ ಬಳಿಯ ದಿಬ್ಬೂರಿನಲ್ಲಿ ನಡೆದಿದೆ.

ದುರಂತದಲ್ಲಿ 12 ವರ್ಷದ ಮಗಳು ದಿವ್ಯಶ್ರೀ ಸಾವನ್ನಪ್ಪಿದ್ದರೆ, ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿರೋ ವಿಕಲಾಂಗ ಚೇತನರಾಗಿರುವ 38 ವರ್ಷದ ವರಲಕ್ಷ್ಮಿ ಜೀವಾಪಾಯದಿಂದ ಪಾರಾಗಿದ್ದಾರೆ. ತಾಯಿ ಮತ್ತು ಅಕ್ಕ ನೇಣಿನ ಕುಣಿಕೆಯಲ್ಲಿರೋದನ್ನ ನೋಡಿದ್ದ 8 ವರ್ಷದ ಇನ್ನೊಂದು ಮಗು ಜೋರಾಗಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿ ಬಂದಿದೆ. ಮಗು ಕಿರುಚಾಟ ಕಂಡ ಸ್ಥಳೀಯರು ಮನೆಗೆ ತೆರಳಿ ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೆ 12 ವರ್ಷದ ಮಗಳು ದಿವ್ಯಶ್ರೀ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಕಲಾಂಗ ಚೇತನರಾಗಿರುವ ವರಲಕ್ಷ್ಮಿ ಅವರ ಗಂಡ ತಿಮ್ಮರಾಜು ಇತ್ತೀಚಿಗೆ ಕೊರೊನಾ ವೈರಸ್​ಗೆ ಬಲಿಯಾಗಿದ್ದರು. ಹೀಗಾಗಿ ಸಂಸಾರದ ಜೀವನ ನಿರ್ವಹಣೆಗೆ ಕಷ್ಟವಾಗಿತ್ತು. ಇದೇ ಕಾರಣಕ್ಕೆ ವರಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಕಳೆದ ಜೂನ್ 2ರಂದು ಚಾಮರಾಜನಗರ ಜಿಲ್ಲೆಯ ಎಚ್. ಮೂಕನಹಳ್ಳಿಯಲ್ಲಿ ಕೃಷಿ ಚಟುವಟಿಕೆ ಕಡಿಮೆ ಆಗಿರುವುದು ಹಾಗೂ ಕೊರೊನಾ ಲಾಕ್‌ಡೌನ್‌ ತಂದಿಟ್ಟಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು.

ಮಹದೇವಪ್ಪ, ಮಂಗಳಮ್ಮ, ಮಕ್ಕಳಾದ ಜ್ಯೋತಿ ಹಾಗೂ ಶ್ರುತಿ (12) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಮೃತರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದ್ದವು.

ಇನ್ನು ಸೆ.20 ರಂದು ಕೊರೊನಾ ಆರ್ಥಿಕ ಮುಗ್ಗಟ್ಟಿನ ಕಾರಣಕ್ಕೆ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದರು. ಕೊರೊನಾ ಲಾಕ್‌ಡೌನ್ ಮತ್ತು ಆರ್ಥಿಕ ಕಾರಣದಿಂದಾಗಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ.

2015-2019ರ ನಡುವೆ ರಾಜ್ಯದಲ್ಲಿ 5 ವರ್ಷದಲ್ಲಿ 54,038 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕೊರೊನಾ ಬಳಿಕ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗುವುದೂ ಸೇರಿದಂತೆ ಪ್ರಾಣ ತೆಗೆದುಕೊಳ್ಳುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸುತ್ತವೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಪಿಎ ಅವಧಿಗೆ ಹೋಲಿಸಿದರೆ ಮೋದಿ ಆಡಳಿತದಲ್ಲಿ ಶೇ.16–28ರಷ್ಟು ಮಸೂದೆಗಳಷ್ಟೇ ಸಂಸದೀಯ ಸಮಿತಿಗಳಿಗೆ ರವಾನೆ: ತರಾತುರಿ ಕಾನೂನುಗಳಿಗೆ ಹ್ಯೂಮನ್‌ ರೈಟ್ಸ್‌ ವಾಚ್ ಕಳವಳ!

ನವದೆಹಲಿ: ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯವೈಖರಿಯ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಹ್ಯೂಮನ್ ರೈಟ್ಸ್ ವಾಚ್ (HRW), ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ...

ತಿರುವಪ್ಪರಂಕುಂದ್ರಂ ‘ಕಾರ್ತಿಕ ದೀಪ’ ವಿವಾದ: ಸುಪ್ರೀಂ ಕೋರ್ಟ್‌ಗೆ ಮಧುರೈ ಜಿಲ್ಲಾಧಿಕಾರಿ ನೀಡಿದ ವಿವರಣೆ ಏನು?

ತಮಿಳುನಾಡಿನ ತಿರುವಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಬೆಳಗಿಸುವ ವಿಚಾರವಾಗಿ ವಿವಾದ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮಧುರೈ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್‌ಗೆ ಹಾಜರಾಗಿ ನ್ಯಾಯಾಲಯದ ಆದೇಶದಂತೆ ಬೆಟ್ಟದ ಮೇಲಿರುವ ದೀಪಸ್ತಂಭದಲ್ಲಿ ದೀಪ ಬೆಳಗಿಸದೆ, ಸಾಂಪ್ರದಾಯಿಕ ಸ್ಥಳದಲ್ಲೇ...

ಎಸ್‌ಐಆರ್ ವಿರುದ್ಧ ಜಾರ್ಖಂಡ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ತಕ್ಷಣ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

ದೇಶಾದ್ಯಂತ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಜಾರ್ಖಂಡ್ ವಿಧಾನಸಭೆ ಬುಧವಾರ (ನ.25) ನಿರ್ಣಯವೊಂದನ್ನು ಅಂಗೀಕರಿಸಿದೆ. ಧ್ವನಿಮತದ ಮೂಲಕ ಅಂಗೀಕರಿಸಲಾದ ಈ ನಿರ್ಣಯದಲ್ಲಿ ಎಸ್‌ಐಆರ್...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ತಂದೆಯ ಹೆಸರು ಡಿಲೀಟ್; ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವೇಳೆ ತಂದೆಯ ಹೆಸರು ಮತದಾರರ ಪಟ್ಟಿಯಿಂದ ಅಳಿಸಲ್ಪಟ್ಟಿರುವ ಕಾರಣಕ್ಕೆ ಸುಮಾರು ಮೂರು ತಿಂಗಳ ಹಸುಗೂಸಿಗೆ ಜನನ ಪ್ರಮಾಣಪತ್ರ ನೀಡಲು ಪಂಚಾಯತ್ ಅಧಿಕಾರಿಗಳು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಯಲ್ಲಿ ಅಕ್ರಮ ಬಂಧನ ಆರೋಪ: ಕೇಂದ್ರ, ದೆಹಲಿ ಸರ್ಕಾರಕ್ಕೆ ಸುಪ್ರೀಂ 10 ದಿನಗಳ ಗಡುವು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ಕಳೆದ ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಪ್ರತಿಭಟನಾಕಾರರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಮಗ್ರ...

ಮೋದಿ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳು ದುರ್ಬಲಗೊಂಡಿವೆ: ಹ್ಯೂಮನ್ ರೈಟ್ಸ್ ವಾಚ್

ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ನಾಗರಿಕ ಸ್ವಾತಂತ್ರ್ಯಗಳ ಕುರಿತು ದಶಕಗಳಿಂದ ಸ್ವತಂತ್ರವಾಗಿ ತನಿಖೆ ನಡೆಸಿ ವರದಿಗಳನ್ನು ಪ್ರಕಟಿಸುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಭಾರತದ ಪ್ರಸ್ತುತ ರಾಜಕೀಯ ಮತ್ತು...

6 ವರ್ಷಗಳ ಜೈಲುವಾಸದ ಬಳಿಕವೂ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ವರ್ಷಗಳಿಂದ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ತಕ್ಷಣ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ (ನ.25) ನಿರಾಕರಿಸಿದೆ. ಉಮರ್...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ರೈತರ ಪ್ರತಿಭಟನೆ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕನಿಷ್ಠ ಸಾಕಾಣಿಕೆ ದರವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ "ವಿಧಾನ ಸೌಧ ಚಲೋ" ಪ್ರತಿಭಟನೆ...

ರಾಹುಲ್ ಗಾಂಧಿ ವಿರುದ್ಧ ಸಿಬಿಐ, ಇ.ಡಿ ತನಿಖೆಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್...

ಯೋಗೇಶ್ ಗೌಡ ಕೊಲೆ ಪ್ರಕರಣ | ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್: ಎರಡು ವಾರಗಳಲ್ಲಿ ಶರಣಾಗಲು ಆದೇಶ

ನವದೆಹಲಿ: 2016ರ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ ಎಂಟು ಮಂದಿ ಅಪರಾಧಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಜೀವಾವಧಿ...