Homeಮುಖಪುಟಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

ಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

- Advertisement -
- Advertisement -

ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ದೆಹಲಿ ಮನೆ ಮೇಲೆ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಹೊಸದಿಲ್ಲಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಧ್ವಂಸಕ ಕೃತ್ಯ ನಡೆಸಿರುವ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮತ್ತು ಸುಧಾರಿತ ಭದ್ರತೆಯನ್ನು ನೀಡುವಂತೆ ಮನವಿ ಮಾಡಿದ್ದಾರೆ.

“ಇದು ಸದನದ ನಿಂದನೆ ಮತ್ತು ಸಂಸತ್ತಿನ ಸ್ವಾತಂತ್ರ್ಯ ಮತ್ತು ಘನತೆಯ ಮೇಲಿನ ದಾಳಿ. ಸದನದ ಉಸ್ತುವಾರಿಯಾಗಿ, ಸದನ, ಅದರ ಸದಸ್ಯರು ಮತ್ತು ಅಧಿಕಾರಿಗಳನ್ನು ರಕ್ಷಿಸುವುದು ನಿಮ್ಮ ಕಚೇರಿಯ ಕರ್ತವ್ಯವಾಗಿದೆ ” ಎಂದು ಓವೈಸಿ ಬರೆದಿದ್ದಾರೆ.

ಇದನ್ನೂ ಓದಿ: ಹಿಂದುತ್ವ ವಿಚಾರ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

 

“ಇದು ಸಂಸತ್ತಿನ ಸದಸ್ಯರ ಸಾಮೂಹಿಕ ಹಕ್ಕುಗಳ ಮೇಲಿನ ದಾಳಿ. ನನ್ನ ಉಸ್ತುವಾರಿ ಸಿಬ್ಬಂದಿ ರಾಜು ಲಾಲ್ ಅವರ ಮೇಲೂ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಅವರು ನನ್ನನ್ನು ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಕರಣದ ಸಮಗ್ರ ತನಿಖೆಗಾಗಿ ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿದ್ದಾರೆ. “ಇದು ನನ್ನ ನಿವಾಸದ ಮೇಲೆ ನಡೆದ ಮೊದಲ ವಿಧ್ವಂಸಕ ಕೃತ್ಯವಲ್ಲ. ಹಿಂದಿನ ದಾಳಿಗಳಲ್ಲಿಯೂ ಕಾನೂನು ಸುವ್ಯವಸ್ಥೆಯ ಬಗ್ಗೆ ಹೇಳಲು ಕೂಡ ಸಾಧ್ಯವಿಲ್ಲ. ಆದ್ದರಿಂದ, ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲು ನಿಮ್ಮ ಮಧ್ಯಸ್ಥಿಕೆಯನ್ನು ನಾನು ಬಯಸುತ್ತೇನೆ” ಎಂದಿದ್ದಾರೆ.

ದೆಹಲಿಯ ಹೈ-ಸೆಕ್ಯುರಿಟಿ ಅಶೋಕ ರಸ್ತೆ ಪ್ರದೇಶದಲ್ಲಿರುವ ಓವೈಸಿ ಅವರ ಮನೆಯ ಮೇಲೆ ಮಂಗಳವಾರ ಹಿಂದೂ ಸೇನೆಯ ಒಂದು ಗುಂಪು ದಾಳಿ ನಡೆಸಿತ್ತು. ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ಹಾನಿಗೊಳಿಸಿ, ನಾಮಫಲಕವನ್ನು ಮುರಿದು ಹಾಕಿದ್ದರು. ಪ್ರರಣದಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿದ್ದ ಸಂಸದ ಅಸಾದುದ್ದೀನ್ ಓವೈಸಿ “ಕಳೆದ 40 ವರ್ಷಗಳಿಂದ ಮನೆಯನ್ನು ನೊಡಿಕೊಳ್ಳುತ್ತಿರುವ ರಾಜು ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಗುಂಪು ಕೋಮು ಘೋಷಣೆಗಳನ್ನು ಕೂಗಿ, ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದೆ. ರಾಜು ಅವರ ಮೊಮ್ಮಕ್ಕಳು ಈಗ ಭಯದಿಂದ ಬದುಕುತ್ತಿದ್ದಾರೆ. ರಾಜು ಪೊಲೀಸರಿಗೆ ದೂರು ನೀಡಿದ್ದಾರೆ. ಕ್ರಮ ಕೈಗೊಳ್ಳಲಾಗುವುದು ಎಂದು ಭಾವಿಸುತ್ತೇವೆ” ಎಂದು  ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಅಸಾದುದ್ದೀನ್ ಓವೈಸಿ ಮನೆ ಮೇಲೆ ದಾಳಿ: ಐವರು ಹಿಂದೂ ಸೇನೆ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...