ವಿಧಾನಸಭಾ ಅಧಿವೇಶನದ ಆರಂಭದಂದು ಎತ್ತಿನ ಗಾಡಿ ಮೂಲಕ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಆರಂಭಸಿದ್ದ ಕಾಂಗ್ರೆಸ್ ನಂತರ ಸೈಕಲ್ ಜಾಥಾ ಮಾಡಿತ್ತು. ಇಂದು ಟಾಂಗಾ ಸವಾರಿ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಇಂಧನ ಬೆಲೆ ಏರಿಕೆ ವಿರೋಧಿಸಿದ್ದಾರೆ.
“ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರೊಂದಿಗೆ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಸವಾರಿ ಮಾಡಲಾಯಿತು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರೊಂದಿಗೆ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಸವಾರಿ ಮಾಡಲಾಯಿತು. pic.twitter.com/RoQZsddCEO
— DK Shivakumar (@DKShivakumar) September 24, 2021
“ಇಂದು ಇಂಧನ ಸೇರಿದಂತೆ ಅಗತ್ಯ ವಸ್ತುಗಳು, ಮನೆ ನಿರ್ಮಾಣ ಮಾಡುವ ವಸ್ತುಗಳ ಬೆಲೆ ಗಗನಕ್ಕೇರಿದೆ, ಕೊರೊನಾ ಬಂದ ಮೇಲೆ ಜನರ ಆದಾಯ ಕಡಿಮೆಯಾಗಿದೆ ಹೊರತು ಖರ್ಚು ಕಡಿಮೆ ಆಗಿಲ್ಲ. ನಾವು ಎಷ್ಟೇ ಹೇಳಿದರೂ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ, ಸರ್ಕಾರಕ್ಕೆ ಕಣ್ಣು, ಕಿವಿ, ಬಾಯಿ ಯಾವುದೂ ಇಲ್ಲ. ನಮ್ಮ ಹೋರಾಟ ನಿರಂತರ. ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತಿನಲ್ಲಿ ಕೂಡ ಹೋರಾಟ ಮಾಡಲಿದ್ದೇವೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
“ಸರ್ಕಾರ ವಿರುದ್ಧ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಮ್ಮ ಮೂರನೇ ಹೋರಾಟ ಇದು. ಇವತ್ತು ಟಾಂಗಾ ಗಾಡಿ ಮೇಲೆ ಬಂದು ಪ್ರತಿಭಟನೆ ಮಾಡಿದ್ದೇವೆ. 10-15 ಸಾವಿರ ಮನೆ ಖರ್ಚು ಮಾಡುತ್ತಿದ್ದವರ ಮನೆ ಖರ್ಚು ಇಂದು 15 ಸಾವಿರವಾಗಿದೆ. ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದು ಹೇಗೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
#WATCH | Leader of Opposition in Karnataka Assembly Siddaramaiah, State Congress president DK Shivakumar along with other party MLAs arrive at the Legislative Assembly in Bengaluru on tangas in protest against fuel price hike pic.twitter.com/ATQwywGoNo
— ANI (@ANI) September 24, 2021
ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ


