Homeಮುಖಪುಟಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

- Advertisement -
- Advertisement -

ಅಸ್ಸಾಂನ ಧೋಲ್ಪುರ್ ಗ್ರಾಮದಲ್ಲಿ ಗುರುವಾರ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ನಡೆದಿತ್ತು. ಈ ಸಂದರ್ಭ ಬನಿಯನ್ ಮತ್ತು ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬರು ಕೋಲು ಹಿಡಿದುಕೊಂಡು ಪೊಲೀಸರನ್ನು ಬೆನ್ನಟ್ಟಿದ್ದರು. ಆದರೆ ಅವರನ್ನು ಪೊಲೀಸರು ಗುಂಡಿಟ್ಟು, ಅಮಾನವೀಯವಾಗಿ ಥಳಿಸಿ, ತುಳಿದು ಕೊಲೆ ಮಾಡಲಾಗಿದೆ. ಅವರನ್ನು 28 ವರ್ಷದ ಮೊಯಿನುಲ್ ಹಕ್ ಎಂದು ಗುರುತಿಸಲಾಗಿದೆ.

ಮೂವರು ಮಕ್ಕಳ ತಂದೆಯಾಗಿರುವ ಮೊಯಿನುಲ್ ಹಕ್, ಒಂದು ತುಂಡು ಭೂಮಿಯಲ್ಲಿ ತರಕಾರಿ ಬೆಳೆದು ಕುಟುಂಬವನ್ನು ಮುನ್ನಡೆಸುತ್ತಿದ್ದರು. ಆದರೆ ಸರ್ಕಾರ ಈ ಭೂಮಿ ಅವರದ್ದಲ್ಲ ಎಂದು ಪ್ರತಿಪಾದಿಸಿ ಅವರನ್ನು ಸ್ಥಳಾಂತರ ಮಾಡಲು ಹೊರಟಿತ್ತು. ಇದನ್ನು ವಿರೋಧಿಸಿ ಅವರು ಪೊಲೀಸರ ವಿರುದ್ದ ಪ್ರತಿಭಟಿಸಿದ್ದರು.

“ಅವರು ನನ್ನ ಮಗನನ್ನು ಕೊಂದಿದ್ದಾರೆ. ನಾವು ಬಾಂಗ್ಲಾದೇಶಿಯರೇ? ಹಾಗಾದರೆ ನಮ್ಮನ್ನು ಅಲ್ಲಿಗೆ ಕಳುಹಿಸಿ” ಎಂದು ತನ್ನ ಮಗನ ಸಾವಿನ ಬಗ್ಗೆ ಮೊಯಿನುಲ್ ಅವರ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಯಿನುಲ್ ಹಕ್ ಅವರ ಪತ್ನಿ ಮತ್ತು ತಾಯಿ ಅಸಮಾಧಾನದಿಂದ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮುಯೀನುಲ್ ಅವರ ಹತ್ಯೆಯ ಬಗ್ಗೆ ದೇಶದಾದ್ಯಂತ ಆಕ್ರೋಶ ಹೆಚ್ಚುತ್ತಿದ್ದಂತೆ ಅವರನ್ನು ಬಾಂಗ್ಲಾದೇಶದಿಂದ ಅತಿಕ್ರಮವಾಗಿ ದೇಶಕ್ಕೆ ಬಂದವರು ಎಂದು ಬಿಂಬಿಸಲಾಗಿತ್ತು. ಆದರೆ ಮೊಯೀನುಲ್ ಅವರ ಹೆಸರು ಎನ್‌ಆರ್‌ಸಿಯಲ್ಲಿದೆ ಎಂದು ಪತ್ರಕರ್ತರು ದೃಢೀಕರಿಸಿದ್ದು, ಅವರು ಅಕ್ರಮ ನಿವಾಸಿಯಲ್ಲ ಎಂದು ತಿಳಿಸಿದ್ದಾರೆ. ಅವರು ಆಧಾರ್ ಕಾರ್ಡ್ ಕೂಡಾ ಹೊಂದಿದ್ದರು. ಅವರ ಪೌರತ್ವ ಪ್ರಮಾಣಪತ್ರಗಳ ಹೊರತಾಗಿಯೂ ಅವರನ್ನು ಕ್ಯಾಮರಾ ಮುಂದೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪತ್ರಕರ್ತರು ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕಳೆದ ಸೋಮವಾರದಿಂದ ಸುಮಾರು 800 ಕುಟುಂಬಗಳನ್ನು ಅವರ ಮನೆಗಳಿಂದ ಹೊರಹಾಕಿ ತಾತ್ಕಾಲಿಕ ಪರಿಹಾರ ಶಿಬಿರದಲ್ಲಿ ಕೂಡಿಹಾಕಲಾಗಿದೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

7 ಮತ್ತು 2 ವರ್ಷದ ಇಬ್ಬರು ಹುಡುಗರು ಮತ್ತು ಐದು ವರ್ಷದ ಹೆಣ್ಣು ಮಗುವಿನ ತಂದೆಯಾಗಿರುವ ಮುಯಿನುಲ್‌ ಹಕ್ ಅವರ ಮೃತದೇಹವನ್ನು ಸಿಪಾಜಾರ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಪರಿಹಾರ ಘೋಷಿಸುವವರೆಗೂ ಸ್ಥಳೀಯರು ಮೃತದೇಹಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ತಿಳಿಸಿವೆ.

ಗೋರುಖುಟಿ ಮತ್ತು ಧೋಲ್ಪುರ್ 1, 2 ಮತ್ತು 3 ಒಟ್ಟು ನಾಲ್ಕು ಪ್ರದೇಶಗಳಿಂದ ಗ್ರಾಮಸ್ಥರನ್ನು ಪೋಲಿಸರು ಹೊರಹಾಕಿದ್ದಾರೆ. ಮೊಯಿನುಲ್ ಹಕ್ ಅವರ ಹತ್ಯೆಯ ಘಟನೆಯು ಧೋಲ್ಪುರ-3 ನೇ ಗ್ರಾಮದಲ್ಲಿ ನಡೆದಿದೆ. ಪ್ರದೇಶಗಳನ್ನು ಖಾಲಿ ಮಾಡುವ ಬಗ್ಗೆಗಿನ ನೋಟಿಸ್‌ ಅನ್ನು ಬುಧವಾರ ರಾತ್ರಿ ನೀಡಲಾಗಿದ್ದು, ಗುರುವಾರ ಬೆಳಿಗ್ಗೆ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಆರಂಭವಾಗಿದೆ. ವರದಿಗಳ ಪ್ರಕಾರ ಎರಡು ಮಸೀದಿಗಳನ್ನು ಈಗಾಗಲೆ ನೆಲಸಮ ಮಾಡಲಾಗಿದೆ.

ಗುರುವಾರ ನಡೆದ ಹಿಂಸಾಚಾರದ ಕುರಿತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಪೊಲೀಸರ ಜೊತೆಗೆ ಹಲ್ಲೆ ನಡೆಸಿದ್ದ ಛಾಯಾಚಿತ್ರಗಾಹಕ ಬಿಜಯ್ ಬೋನಿಯಾ ಬಂಧನಕ್ಕೆ ಒಳಗಾಗಿದ್ದಾರೆ. ಸ್ಥಳೀಯ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ದಾಳಿಯನ್ನು ವಿರೋಧಿಸಿ, ‘ಅಖಿಲ ಅಸ್ಸಾಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಒಕ್ಕೂಟ’ (AAMSU) ಅಸ್ಸಾಂನ ಹಲವಾರು ಭಾಗಗಳಲ್ಲಿ ಪ್ರತಿಟನೆ ನಡೆಸಿದೆ. ಜೊತೆಗೆ ದಾರ್‍ರಾಂಗ್ ಜಿಲ್ಲೆಯಲ್ಲಿ ಮುಂಜಾನೆಯಿಂದ ಮುಸ್ಸಂಜೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯದ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೂಡಾ ದರ್ರಾಂಗ್ ಜಿಲ್ಲಾ ಕೇಂದ್ರವಾದ ಮಂಗಳದೈನಲ್ಲಿ ಪ್ರತಿಭಟನೆ ನಡೆಸಿದೆ. ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಸೇರಿದಂತೆ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಅಸ್ಸಾಂ ರಾಜ್ಯವು ಪ್ರಭುತ್ವ ಪ್ರಾಯೋಜಿತ ಬೆಂಕಿಯಲ್ಲಿದೆ. ನಾನು ರಾಜ್ಯದ ನಮ್ಮ ಸಹೋದರ ಸಹೋದರಿಯರ ಪರವಾಗಿ ನಿಲ್ಲುತ್ತೇನೆ. ಭಾರತದ ಯಾವುದೇ ಮಕ್ಕಳು ಈ ಕ್ರೂರತೆಗೆ ಅರ್ಹರಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಈ ಎಲ್ಲದರ ನಡುವೆ, ಅಸ್ಸಾಂ ಸಿಎಂ ಹಿಮಾಂತ ಅವರು ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ನೀವು ಒಂದು ವೀಡಿಯೊದಿಂದ ರಾಜ್ಯ ಸರ್ಕಾರವನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. 1983 ರಿಂದ ಆ ಪ್ರದೇಶವು ಕೊಲೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲದಿದ್ದರೆ, ಸಾಮಾನ್ಯವಾಗಿ ಜನರು ದೇವಾಲಯದ ಭೂಮಿಯನ್ನು ಅತಿಕ್ರಮಿಸುವುದಿಲ್ಲ. ನಾನು ಅಲ್ಲಿನ ಅತಿಕ್ರಮಣಗಳನ್ನು ನೋಡಿದ್ದೇನೆ. ಶಾಂತಿಯುತ ಎತ್ತಂಗಡಿಗೆ ಒಪ್ಪಿಕೊಳ್ಳಲಾಗಿತ್ತು, ಆದರೆ ಅವರನ್ನು ಪ್ರಚೋದಿಸಿದವರು ಯಾರು?” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....