Homeಮುಖಪುಟಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ....

- Advertisement -
- Advertisement -

ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ದಲಿತರನ್ನು ಗುರುತಿಸಲು, ನಾಯಕರನ್ನಾಗಿ, ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಾಗುತ್ತದೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕ್ಲಬ್‌ಹೌಸ್‌ನಲ್ಲಿ ಅನುಭವ ಮಂಟಪ ಕ್ಲಬ್‌ ಶನಿವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಪ್ರಶ್ನೆಗಳಿಗೆ ಉತ್ತರಿಸಿದರು.

‘ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯನವರ ಅಭ್ಯಂತರವೇನಾದರೂ ಇದೆಯೇ?’ ಎನ್ನುವ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

“ಭಾರತದ ದೇಶದಲ್ಲಿ ಐದಾರು ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್‌ ಪಕ್ಷ ಮಾಡಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದಲಿತರ ಪರವಾಗಿ ಅನೇಕ ಕೆಲಸಗಳನ್ನು ಮಾಡಿದ್ದೇನೆ. ಯಾರು ಮುಖ್ಯಮಂತ್ರಿ ಎಂಬುದಕ್ಕಿಂತ ದಲಿತರ ಪರವಾಗಿ ಕೆಲಸ ಮಾಡುವವರು ಮುಖ್ಯವಾಗುತ್ತಾರೆ. ಮೊದಲನೇ ಬಾರಿಗೆ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಪಿ, ಟಿಎಸ್‌ಪಿ ಹಣ ಖರ್ಚು ಮಾಡಲು ಮುಂದಾಗಿದ್ದು ನಮ್ಮ ನೇತೃತ್ವದ ಸರ್ಕಾರ” ಎಂದು ತಿಳಿಸಿದರು.

ಬಜೆಟ್‌ನಲ್ಲಿ ಶೇ. 24ರಷ್ಟು ಹಣವನ್ನು ಎಸ್‌ಸಿಪಿ, ಟಿಎಸ್‌ಪಿಗೆ ಹಣ ಖರ್ಚು ಮಾಡಬೇಕು ಎಂದು ನಾವು ಕಾನೂನು ಮಾಡಿದೆವು. ಒಂದು ವರ್ಷಕ್ಕೆ ಮೂವತ್ತು ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡುವ ಕೆಲಸವನ್ನು ನಾನು ಕೊನೆಯ ಬಜೆಟ್‌ ಮಂಡಿಸಿದಾಗ ಮಾಡಿದ್ದೇನೆ. ಸುಪ್ರೀಂ ಕೋರ್ಟ್‌ ಬಡ್ತಿ ರದ್ದು ಮಾಡಿದಾಗ ಅಹಿಂಸಾ ಸಂಘಟನೆಯ ತೀವ್ರ ವಿರೋಧದ ನಡುವೆಯೂ ಕಾನೂನು ರೂಪಿಸಿ ದಲಿತರಿಗೆ ರಕ್ಷಣೆ ನೀಡಿದ್ದು ನಮ್ಮ ಸರ್ಕಾರ. ದಲಿತರಿಗೆ ಮೊದಲ ಬಾರಿಗೆ ಇಡೀ ದೇಶದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ಸರ್ಕಾರ ಎಂದು ಹೇಳಿದರು.

ದಲಿತರು ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯವಿದೆ ಹೊರತು ಬೇರೆ ಪಕ್ಷಗಳಲ್ಲಿ ಅಲ್ಲ. ಈಗ ಪಂಜಾಬ್‌ನಲ್ಲಿ ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗಿದೆ. ಆಂಧ್ರದಲ್ಲಿ ಸಂಜೀವಯ್ಯನವರು ಮುಖ್ಯಮಂತ್ರಿ ಆಗಿದ್ದರು. ಹೀಗೆ ಬೇರೆ ಬೇರೆ ರಾಜ್ಯಗಳಲ್ಲೂ ದಲಿತರು ಮುಖ್ಯಮಂತ್ರಿಗಳಾಗಿದ್ದಾರೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದರು.

 ‘ಕರಾವಳಿಯಲ್ಲಿ ಕೋಮುಗಲಭೆ ತಡೆಯುವಲ್ಲಿ ಹಿನ್ನಡೆಯಾಯಿತು’

‘ಕರಾವಳಿಯಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಒಂದು ಹುಡುಗ, ಒಂದು ಹುಡುಗಿ ಒಂದು ಕಡೆ ನಿಂತು ಮಾತನಾಡುತ್ತಿದ್ದರೆ, ಧರ್ಮದ ಹೆಸರಲ್ಲಿ ಗೂಂಡಾಗಿರಿ ಮಾಡುವವರಿಗೆ ಸುದ್ದಿ ಮುಟ್ಟಿಸಿ ಆ ಜೋಡಿಗಳಿಗೆ ತೊಂದರೆ ನೀಡುವ ಜಾಲ ದೊಡ್ಡದಾಗಿ ಬೆಳೆಯುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತಹ ಪ್ರವೃತ್ತಿಯ ಕಡಿವಾಣಕ್ಕೆ ಕಠಿಣ ಕ್ರಮ ಜರುಗಿಸದಿರುವುದೂ ಇದಕ್ಕೆ ಕಾರಣವೇ?’ ಎಂದು ಶ್ರೀನಿವಾಸ ಕಾರ್ಕಳ ಅವರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ‘ಕರಾವಳಿ ಭಾಗವು ಕೋಮುವಾದದ ಪ್ರಯೋಗಾಲಯ ಎಂಬುದು ಸತ್ಯ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕರಾವಳಿಯಲ್ಲಿ ಕೋಮುಗಲಭೆಗಳನ್ನು ತಡೆಯುವಲ್ಲಿ ಹಿನ್ನಡೆಯಾಯಿತು ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಹಾಗೆಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಕುರಿತು ಯಾವುದೇ ಭಯವೇನೂ ಇಲ್ಲ ಎಂದರು.

ಬಜರಂಗದಳದ ಮಾಜಿ ಮುಖಂಡ ಸುನಿಲ್‌ ಬಜಿಲಕೇರಿಯವರು ಮಾತನಾಡಿ, “ವಿನಾಯಕ ಬಾಳಿಗ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಾಳಿದರು. ವಿನಾಯಕ ಬಾಳಿಗ ಪ್ರಕರಣಕ್ಕೆ ನ್ಯಾಯ ದೊರಕಿಸಿದರೆ ಕಾಂಗ್ರೆಸ್‌ಗೆ ಕರಾವಳಿ ಭಾಗದಲ್ಲಿ ಹೆಚ್ಚಿನ ಜನರು ಬೆಂಬಲ ನೀಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕರಾವಳಿ ಭಾಗದ ಜನರು ಹೆಚ್ಚಿನ ಉದ್ಯೋಗ ಪಡೆಯುವರು. ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಸ್ಮರಿಸುವರು” ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಕಾಂಗ್ರೆಸ್ ಯಾವುದೇ ಸಮುದಾಯದ ವಿರುದ್ಧವೂ ಇಲ್ಲ, ಪರವೂ ಇಲ್ಲ. ಯಾರಿಗೆ ಅನ್ಯಾಯವಾದರೂ ಕಾಂಗ್ರೆಸ್ ಪ್ರಶ್ನಿಸಲಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಎಲ್ಲರಿಗೂ ಉದ್ಯೋಗ ಕೊಡಬೇಕಲ್ಲವೇ? ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ನಡೆಸಲು ಅವಕಾಶ ನೀಡಬೇಕಲ್ಲವೇ?” ಎಂದು ಪ್ರಶ್ನಿಸಿದರು.

ನಾನು ಎಡಪಂಥೀಯ, ಹೀಗಾಗಿ ಅವರು ದ್ವೇಷಿಸುತ್ತಾರೆ

‘ನೀವು ಮುಖ್ಯಮಂತ್ರಿಯಾದಾಗಿನಿಂದಲೂ ನಿಮ್ಮ ಮೇಲೆ ಬಲಪಂಥೀಯರು ದ್ವೇಷ ಕಾರುವುದು ನಡೆಯುತ್ತಿದೆ. ನಿಮ್ಮನ್ನು ಈ ಪರಿಯಾಗಿ ದ್ವೇಷಿಸಲು ಕಾರಣವೇನು?” ಎಂದು ಹರ್ಷಕುಮಾರ್‌ ಕುಗ್ವೆಯವರು ಕೇಳಿದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯನವರು, “ಇದು ಬಹಳ ಸರಳವಾಗಿದೆ. ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ. ನನಗೂ ಮತ್ತು ಬಲಪಂಥೀಯರಿಗೂ ಇರುವ ವ್ಯತ್ಯಾಸವಿದು. ಪರಸ್ಪರ ಪ್ರೀತಿಸುವುದೇ ಮನುಷ್ಯತ್ವ.ಪರಸ್ವರ ಗೌರವಿಸುವುದೇ ಮನುಷ್ಯತ್ವ. ಮನುಷ್ಯತ್ವ ಇರದಿರುವವರು ದ್ವೇಷಿಸುತ್ತಾರೆ. ಹೀಗಾಗಿ ದ್ವೇಷ ಮಾಡುವವರನ್ನು ನಾನು ಪ್ರೀತಿಸುತ್ತೇನೆ” ಎಂದರು.

ಹಲವರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಅವರು, ಬಿಜೆಪಿ ನಾಯಕರು ಆರ್‌‌ಎಸ್‌ಎಸ್‌ ಕೈಗೊಂಬೆಗಳಾಗಿದ್ದಾರೆ ಎಂದರು. ‘ಎನ್‌ಇಪಿ’ ಶಿಕ್ಷಣ ವ್ಯವಸ್ಥೆಗೆ ಮಾರಕ. ಅದು ನಾಗಪುರ ಎಜುಕೇಷನ್‌ ಪಾಲಿಸಿ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಟೀಕಿಸಿದರು.

‘ಸರ್ಕಾರ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ವಸತಿ ನಿರ್ಮಾಣ ಯೋಜನೆ ಪ್ರಗತಿಯನ್ನು ಸಾಧಿಸಿಲ್ಲ’ ಎಂದರು.

ಸಿದ್ದರಾಮಯ್ಯನವರ ಕಾರ್ಯಕ್ರಮ ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಪ್ರಸಾರವಾಯಿತು. ಸುಮಾರು 1500 ಮಂದಿ ಕ್ಲಬ್‌ಹೌಸ್‌ನಲ್ಲಿ ಸಿದ್ದರಾಮಯ್ಯನವರ ಮಾತುಗಳನ್ನು ಆಲಿಸಿದರು. ಸಾವಿರಾರು ಜನರು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಮಾತುಗಳನ್ನು ಆಲಿಸಿದರು.

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...