ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
’ಸುಳ್ಳಿನ ಕಂತೆಗಳನ್ನು ಸೃಷ್ಟಿ ಮಾಡಿ ಮುಗ್ಧ ಜನರ ತಲೆಗೆ ತುಂಬುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕ ಸಾಥ್, ಸಬ್ ಕ ವಿಕಾಸ್ ಎನ್ನುತ್ತಾರೆ, ಆದರೆ ಮಂತ್ರಿಮಂಡಲದಲ್ಲಿ ಒಬ್ಬನೇ ಒಬ್ಬ ಕ್ರಿಶ್ಚಿಯನ್, ಮುಸ್ಲಿಂ ಸಚಿವನಿಗೆ ಅವಕಾಶ ನೀಡಿಲ್ಲ” ಎಂದು ಆರೋಪಿಸಿದ್ದಾರೆ.
’ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಹಣ, ಅಧಿಕಾರದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ರೂ ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದ್ರು. ಇದಕ್ಕೇ ಹೇಳೋದು ಮಾಡಿದ್ದುಣ್ಣೋ ಮಹರಾಯ’ ಎಂದು ಯಡಿಯೂರಪ್ಪ ಅವರನ್ನು ಟೀಕಿಸಿದ್ದಾರೆ.
’ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ, ಬಡವರಿಗೆ ಉಚಿತವಾಗಿ ತಲಾ 7 ಕೆ.ಜಿ ಅಕ್ಕಿ ನೀಡಿದ್ದು ನಮ್ಮ ಸರ್ಕಾರ. ಈ ಯೋಜನೆಯನ್ನು ಮುಂದುವರೆಸಿಕೊಂಡು ಹೋಗಲು ಬಿಜೆಪಿ ಸರ್ಕಾರಕ್ಕೆ ಮನಸಿಲ್ಲ. ತಿನ್ನುವ ಅನ್ನದಲ್ಲೂ ರಾಜಕೀಯ ಮಾಡುತ್ತಾರೆ. ಮುಂದೆ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬಡವರಿಗೆ ಉಚಿತವಾಗಿ ಹತ್ತು ಕೆ.ಜಿ ಅಕ್ಕಿ ನೀಡುತ್ತೇವೆ’ ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಗುಲಾಬ್ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರಿ ಕಟ್ಟೆಚ್ಚರ, ರಾಜ್ಯದಲ್ಲಿ 2 ದಿನ ಮಳೆ
ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಿಗೆ ಸ್ವಂತ ಶಕ್ತಿ ಇಲ್ಲ. ಹಣ, ಅಧಿಕಾರದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ರೂ @BSYBJP ಅವರನ್ನೇ ಕಿತ್ತು ಬಿಸಾಕಿದ್ರು.
ಇದಕ್ಕೇ ಹೇಳೋದು 'ಮಾಡಿದ್ದುಣ್ಣೋ ಮಹರಾಯ' ಎಂದು. 3/7#Gandhinagara— Siddaramaiah (@siddaramaiah) September 26, 2021
’ಆರ್‌ಎಸ್‌ಎಸ್‌ನವರು ತಮ್ಮನ್ನು ತಾವು ದೇಶಭಕ್ತರು ಅಂತ ಕರೆದುಕೊಳ್ತಾರೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರನ್ನು ಬಿಜೆಪಿ ನಾಯಕರು ಹೇಳಲಿ ನೋಡೋಣ. ಇಷ್ಟೇ ಅವರ ದೇಶಭಕ್ತಿ. ಮಹಾತ್ಮ ಗಾಂಧಿ, ಬಿ.ಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಗೆ ಆಗ್ತಾ ಇರಲಿಲ್ಲ, ಅವರ ಭಾವಚಿತ್ರವನ್ನೂ ತಮ್ಮ ಕಚೇರಿಗಳಲ್ಲಿ ಹಾಕುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರನ್ನು ಪ್ರೀತಿಸುವ ಹಾಗೆ ನಾಟಕವಾಡಲು ಆರಂಭಿಸಿದ್ದಾರೆ” ಎಂದು ಬಿಜೆಪಿ ನಾಯಕರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.
’ಗಾಂಧೀಜಿಯವರನ್ನು ಗೌರವಿಸುವುದು ಎಂದರೆ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಲ್ಲ. ಅವರ ಚಿಂತನೆಗಳ ಪಾಲನೆ ಹಾಗೂ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಶ್ರಮಿಸುವುದು ಎಂಬುದನ್ನು ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಹಾತ್ಮ ಗಾಂಧಿ, ಬಿ.ಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ @BJP4India ಯವರಿಗೆ ಮೊದಲು ಆಗ್ತಾ ಇರಲಿಲ್ಲ, ಅವರ ಭಾವಚಿತ್ರವನ್ನೂ ತಮ್ಮ ಕಚೇರಿಗಳಲ್ಲಿ ಹಾಕುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರನ್ನು ಪ್ರೀತಿಸುವ ಹಾಗೆ ನಾಟಕವಾಡಲು ಆರಂಭಿಸಿದ್ದಾರೆ. 5/7#Gandhinagara
— Siddaramaiah (@siddaramaiah) September 26, 2021
’ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಎಲ್ಲಿಯವರೆಗೆ ಮೈತುಂಬಾ ಬಟ್ಟೆ ಮತ್ತು ಹೊಟ್ಟೆ ತುಂಬಾ ಅನ್ನ ಸಿಗುವುದಿಲ್ಲೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಅವರು ಹೇಳಿದ್ದರು. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಂದ್ ಮಾಡಿ ಬಿಜೆಪಿ ಸರ್ಕಾರ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದೆ’ ಎಂದಿದ್ದಾರೆ.
ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ


