Homeಚಳವಳಿಭಾರತ್ ಬಂದ್: ದೇಶದಾದ್ಯಂತ ಆರಂಭಗೊಂಡ ಪ್ರತಿಭಟನೆ, ಪಂಜಾಬ್, ಹರಿಯಾಣ ಸಂಪೂರ್ಣ ಬಂದ್

ಭಾರತ್ ಬಂದ್: ದೇಶದಾದ್ಯಂತ ಆರಂಭಗೊಂಡ ಪ್ರತಿಭಟನೆ, ಪಂಜಾಬ್, ಹರಿಯಾಣ ಸಂಪೂರ್ಣ ಬಂದ್

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ 6 ಗಂಟೆಗೆ ಜನ ಬೀದಿಗಿಳಿದು ರೈತರಿಗೆ ಬೆಂಬಲ ನೀಡಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಗೆ ಬಂದ್ ಆರಂಭವಾಗಿದ್ದು, ಇಂದು ಸಂಜೆ 4 ಗಂಟೆಯವರೆಗೂ ಮುಂದುವರಿಯಲಿದೆ.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು, ಸಂಪರ್ಕ ರಸ್ತೆ ಮತ್ತು ರೈಲ್ವೆ ಹಳಿಗಳನ್ನು ಬಂದ್ ಮಾಡಲಾಗಿದೆ. ರಸ್ತೆ ಮತ್ತು ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪಂಜಾಬ್ ನಲ್ಲಿ ರೈತರು 350 ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಪಂಜಾಬ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಜಿಡಿಪಿ) ಪ್ರತಿಭಟನಾ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ರಾಜ್ಯದ ಪೊಲೀಸ್ ಪಡೆಗಳಿಗೆ ಸೂಚನೆ ನೀಡಿದ್ದಾರೆ. ಎಲ್ಲ ಪ್ರತಿಭಟನಾ ಸ್ಥಳಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಹರಿಯಾಣದಲ್ಲೂ ಜಿಂದ್ ಜಿಲ್ಲೆಯಲ್ಲಿ 25 ಸ್ಥಳಗಳಲ್ಲಿ ಹೆದ್ದಾರಿಗಳನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ಭಾರತ್ ಬಂದ್ ಹಿನ್ನೆಲೆಯಲ್ಲಿ ದೆಹಲಿ-ಗುರ್ಗಾಂವ್ ಗಡಿ (ರಾಜೋಕ್ರಿ) ಗಡಿಯಲ್ಲಿ ಸಂಚಾರ ದಟ್ಟಣೆಯಾಗಿದೆ.
ಬಂದ್ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕೆಲವು ಮಾರ್ಗಗಳನ್ನು ತಡೆದಿದ್ದಾರೆ. ದೆಹಲಿಗೆ ಪ್ರವೇಶಿಸುವ ವಾಹನಗಳ ತೀವ್ರ ತಪಾಸಣೆ ನಡೆಸಿದ್ದಾರೆ.

ರಾಜಸ್ಥಾನ, ಹರಿಯಾಣ, ಬಿಹಾರ್‌, ತಮಿಳುನಾಡು, ಜಾರ್ಖಾಂಡ್, ಚಂಡಿಗಢ, ಕೇರಳ, ಆಂಧ್ರ ಪ್ರದೇಶ, ಕರ್ನಾಟಕ, ಉತ್ತರಾಖಂಡ , ಮಧ್ಯಪ್ರದೇಶ, ಪಂಜಾಬ್, ಉತ್ತರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳಗಳಲ್ಲಿ ರೈತರು ಮತ್ತು ರೈತ ಪರ ಸಂಘಟನೆಗಳು ಬಂದ್‌ ನಡೆಸುತ್ತಿವೆ.

ಅಮೃತಸರದ ಗುರುನಾನಕ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವಿವಿ ಗೇಟ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶೈಕ್ಷಣಿಕ ಮತ್ತು ಇತರ ಸಂಸ್ಥೆಗಳು, ಅಂಗಡಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತೆ ಸಂಯುಕ್ತ ಕಿಸಾನ್ ಮೋರ್ಚಾ (SKM) ಕರೆ ನೀಡಿದೆ. ಆದರೆ, ಆಸ್ಪತ್ರೆಗಳು, ಮೆಡಿಕಲ್‌ಗಳು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳು, ಎಲ್ಲಾ ತುರ್ತು ಸಂಸ್ಥೆಗಳು ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುತ್ತದೆ. ಜೊತೆಗೆ ಬಂದ್ ಅನ್ನು ಸ್ವಯಂಪ್ರೇರಿತ ಮತ್ತು ಶಾಂತಿಯುತವಾಗಿ ಜಾರಿಗೊಳಿಸಲಾಗುವುದು ಎಂದು ರೈತ ಸಂಘಟನೆ ಭರವಸೆ ನೀಡಿದೆ.


ಇದನ್ನೂ ಓದಿ: ಅನ್ನದಾತ ಸಮುದಾಯ ತೀವ್ರ ವಿಷಮ ಸ್ಥಿತಿ ಎದುರಿಸುತ್ತಿದೆ: ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

0
ಸಾರ್ವತ್ರಿಕ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೂ ಮುನ್ನ ಬಂಧಿಸಿದ್ದು ಏಕೆ? ಎಂದು...