Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

- Advertisement -
- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 24-25 ರಂದು ಅಮೆರಿಕಗೆ ತೆರಳಿದ್ದರು. ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರೊಂದಿಗೆ ಸಂವಾದ, ಕ್ವಾಡ್ ಸಭೆ ಹಾಗೂ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಮುಖ್ಯ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್, ಮೋದಿಯವರ ಬಹುದೊಡ್ಡ ಫೋಟೊದೊಂದಿಗೆ “ಭೂಮಿಯ ಕೊನೆಯ ಮತ್ತು ಉತ್ತಮ ಭರವಸೆ” ಎಂಬ ಶೀರ್ಷಿಕೆಯಲ್ಲಿ ಲೇಖನ ಪ್ರಕಟಿಸಿದೆ ಎಂದು ಸ್ಕ್ರೀನ್‌ ಶಾಟ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವಿಶ್ವದ ಅತ್ಯಂತ ಪ್ರೀತಿಯ ಮತ್ತು ಶಕ್ತಿಶಾಲಿ ನಾಯಕ ನಮ್ಮನ್ನು ಆಶೀರ್ವದಿಸಲು ಇಲ್ಲಿದ್ದಾರೆ” ಎಂಬ ಉಪಶೀರ್ಷಿಕೆಯೊಂದಿಗೆ ಮೋದಿಯವರು ಸಹಿ ಮಾಡುತ್ತಿರುವ ಫೋಟೊವುಳ್ಳ ನ್ಯೂಯಾರ್ಕ್ ಟೈಮ್ಸ್‌ನ ದಿನಾಂಕ 26 ಸೆಪ್ಟೆಂಬರ್ 2021ರ ಆವೃತ್ತಿ ಎಂದು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ.

ಈ ಸ್ಕ್ರೀನ್‌ ಶಾಟ್‌ ಅನ್ನು ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಕಾರ್ಯದರ್ಶಿ ರೋಹಿತ್ ಚಹಾಲ್ ಸೇರಿದಂತೆ ನೂರಾರು ಬಿಜೆಪಿ ನಾಯಕರು ಟ್ವಿಟರ್‌ನಲ್ಲಿ, ಫೇಸ್‌ಬುಕ್‌ನಲ್ಲಿ ಷೇರ್ ಮಾಡಿದ್ದಾರೆ. ವಾಟ್ಸಾಪ್‌ನಲ್ಲಿ ಅತಿ ಹೆಚ್ಚು ಫಾರ್ವಾಡ್ ಆಗಿದೆ.

ಫ್ಯಾಕ್ಟ್‌ ಚೆಕ್:

ಸೆಪ್ಟಂಬರ್ 26 ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಮುಖಪುಟದಲ್ಲಿ ನರೇಂದ್ರ ಮೋದಿ ಕುರಿತಾಗಿ ಯಾವುದೇ ಲೇಖನ ಪ್ರಕಟಿಸಿಲ್ಲ ಮತ್ತು ಅವರ ಫೋಟೊವನ್ನು ಸಹ ಪ್ರಕಟಿಸಿಲ್ಲ. ಈ ಮೇಲಿನ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಯಾರೂ ಪತ್ರಿಕೆಯ URL ವಿವರನ್ನು ಒದಗಿಸಿಲ್ಲ. ಸೂಕ್ಷ್ಮವಾಗಿ ಗಮನಿಸಿದರೆ ಇದು ಎಡಿಟ್ ಮಾಡಿದ ಫೋಟೊ ಎಂಬುದನ್ನು ತೋರಿಸುತ್ತದೆ.

ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತಾವು ಇದನ್ನು ಪ್ರಕಟಿಸಿಲ್ಲ. ಇದು ಎಡಿಟ್ ಮಾಡಿದ ಫೋಟೊ ಎಂದು ಸ್ಪಷ್ಟೀಕರಣ ನೀಡಿದೆ.

ಸ್ಕ್ರೀನ್ ಶಾಟ್‌ನಲ್ಲಿರುವ ಹೆಡ್‌ಲೈನ್ ಫಾಂಟ್ ನ್ಯೂಯಾರ್ಕ್ ಟೈಮ್ಸ್ ನಿರಂತರವಾಗಿ ಬಳಸುವ ಫಾಂಟ್‌ಗಿಂತ ಭಿನ್ನವಾಗಿದೆ. ಅಲ್ಲದೇ ಪತ್ರಿಕೆಯ ದಿನಾಂಕ ಬರೆಯುವ ಸ್ಥಳದಲ್ಲಿ  26 September ಎಂದು ಬರೆಯುವ ಬದಲು 26 “Setpember” ಎಂದು ತಪ್ಪಾಗಿ ಬರೆಯಲಾಗಿದೆ. ಹಾಗಾಗಿ ಇದು ಎಡಿಟೆಡ್ ಫೋಟೊ ಎಂದು ತೀರ್ಮಾನಿಸಬಹುದು.

ನಕಲಿ ಮುಖಪುಟದಲ್ಲಿ ಬಳಸಿದ ಪಿಎಂ ಮೋದಿಯವರ ಚಿತ್ರವನ್ನು ಕಳೆದ ತಿಂಗಳು ಪ್ರಕಟಿಸಿದ Zee News ಪ್ರಕಟಿಸಿದ “ಕಡಲ ಭದ್ರತೆಯನ್ನು ಹೆಚ್ಚಿಸುವ ಕುರಿತು ಯುಎನ್‌ಎಸ್‌ಸಿ ಉನ್ನತ ಮಟ್ಟದ ಮುಕ್ತ ಚರ್ಚೆಗೆ ಪಿಎಂ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ” ಎಂಬ ಲೇಖನಯಿಂದ ತೆಗೆದುಕೊಂಡಿರುವಂತೆ ಕಾಣುತ್ತದೆ.

ಅಲ್ಲದೆ ಈ ಫೋಟೊ ಮಾರ್ಚ್‌ನಿಂದಲೇ ಅಂತರ್ಜಾಲದಲ್ಲಿದೆ. “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 12, 2021 ರಂದು ಗುಜರಾತ್‌ನ ಅಹಮದಾಬಾದ್‌ನ ಸಬರಮತಿ ಆಶ್ರಮದಲ್ಲಿ ಸಂದರ್ಶಕರ ಪುಸ್ತಕಕ್ಕೆ ಸಹಿ ಹಾಕಿದರು” ಎಂಬ ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ ಲೇಖನದಲ್ಲಿ ಇದೇ ಚಿತ್ರ ಹಾಕಲಾಗಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿಯವರನ್ನು ಹೊಗಳುವುದಕ್ಕಾಗಿಯೇ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಅವರ ಬಗ್ಗೆ ಬಹುದೊಡ್ಡ ಲೇಖನ ಬಂದಿದೆ ಎಂದು ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ನ್ಯೂಯಾರ್ಕ್ ಟೈಮ್ಸ್ ಅಂತಹ ಯಾವುದೇ ಲೇಖನ ಪ್ರಕಟಿಸಿಲ್ಲ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ ditanagara

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...