Homeಕರ್ನಾಟಕಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ - ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

- Advertisement -
- Advertisement -

ಮಂಗಳೂರಿನಲ್ಲಿ ಮತ್ತೊಮ್ಮೆ ಅನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಘಟನೆ ಯಾವಾಗ ನಡೆದಿದೆ ಎಂದು ಇನ್ನೂ ತಿಳಿದು ಬಂದಿಲ್ಲ.

ಏಳು ವೈದ್ಯಕೀಯ ವಿದ್ಯಾರ್ಥಿಗಳು ಪಿಕ್‌ನಿಕ್ ತೆರಳಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಿಂದಿರುಗುವಾಗ ಪಡುಬಿದ್ರಿ ಪೆಟ್ರೋಲ್‌ ಬಂಕ್‌ನಲ್ಲಿ ವಿದ್ಯಾರ್ಥಿಗಳನ್ನು ತಡೆದು, ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್‌ ಶಶಿಕುಮಾರ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ವಾರ್ತಾಭಾರತಿ ವರದಿ ಮಾಡಿದೆ. ಘಟನೆಯು ಸುರತ್ಕಲ್ ಟೋಲ್‌ಗೇಟ್‌ ಸಮೀಪ ನಡೆದಿದೆ ಎನ್ನಲಾಗಿದೆ ಎಂದು ಪತ್ರಿಕೆಯು ವರದಿ ಮಾಡಿದೆ.

ಇತ್ತೀಚೆಗಷ್ಟೇ ತನ್ನ ಸಹೋದ್ಯೋಗಿ ಹಾಗೂ ಇನ್ನೊಬ್ಬ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ, ಬಜರಂಗದಳದ ಸುಮಾರು ಐದು ಜನರ ತಂಡವೊಂದು ಕಿರುಕುಳ ನೀಡಿತ್ತು. ಈ ಸಂಬಂಧ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಭಜರಂಗದಳದ ಸದಸ್ಯರನ್ನು ಬಂಧಿಸಿದ್ದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಹಲವಾರು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ವರದಿಯಾಗಿತ್ತು. ಬಂಟ್ವಾಳದಲ್ಲಿ ಕಾರಿಂಜ ದೇವಸ್ಥಾನಕ್ಕೆ ತೆರಳಿದ್ದ ಆರು ವಿದ್ಯಾರ್ಥಿಗಳನ್ನು ತಡೆದು ಹಲವು ಗಂಟೆಗಳ ಕಾಲ ಪ್ರಶ್ನಿಸಿದ್ದ ತಂಡದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದಕ್ಕಿಂಲೂ ಮುಂಚೆ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ವಿಭಿನ್ನಕೋಮಿನ ಯುವಕ ಯುವತಿಯರು ಒಟ್ಟಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಆರೋಪಿಸಿ ಬಸ್ಸನ್ನು ತಡೆದಿದ್ದು ವರದಿಯಾಗಿತ್ತು.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ಇದನ್ನೂ ಓದಿ: ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...