Homeಕರ್ನಾಟಕಪ್ರಧಾನಿ ಮೋದಿಯವರೇ ನೀವೊಬ್ಬರು ‘ಫ್ಯಾಸಿಸ್ಟ್‌‌’: ಕಾರ್ಮಿಕ ನಾಯಕಿ ಎಸ್‌. ವರಲಕ್ಷ್ಮಿ

ಪ್ರಧಾನಿ ಮೋದಿಯವರೇ ನೀವೊಬ್ಬರು ‘ಫ್ಯಾಸಿಸ್ಟ್‌‌’: ಕಾರ್ಮಿಕ ನಾಯಕಿ ಎಸ್‌. ವರಲಕ್ಷ್ಮಿ

- Advertisement -
- Advertisement -

‘ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮಿ ಅವರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.

‘ಭಾರತ್‌ ಬಂದ್‌’ ಪ್ರಯುಕ್ತ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಅವರು, “ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ” ಎಂದರು.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

“ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ನಾವು ಸಾರಿ ಸಾರಿ ಹೇಳುತ್ತಿದ್ದೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಜನರ ಪ್ರವಾಗಿ ನಿಲ್ಲಬೇಕಿದ್ದ ಬಿಜೆಪಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಶಕ್ತಿಗಳ ಮತ್ತು ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿಅವರು ಕಿಡಿಕಾರಿದರು.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿತ್ತು. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಇದನ್ನೂ ಓದಿ: ಮೋದಿ ಯುಎಸ್‌ ಭೇಟಿ – ‘ಮಾಧ್ಯಮಗಳು ಪ್ರಶ್ನೆ ಕೇಳಬಾರದೆಂದು ಮೊದಲೇ ತೀರ್ಮಾನವಾಗಿತ್ತು!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...