ಸಿಪಿಐ ಯುವ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹುತಾತ್ಮ ಭಗತ್ ಸಿಂಗ್ ಜನ್ಮದಿನವಾದ ಇಂದು ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾರ್ದಿಕ್ ಪಟೇಲ್ ಸಮ್ಮುಖದಲ್ಲಿ ದೆಹಲಿಯ ಶಹೀದ್ ಅಜಮ್ ಭಗತ್ ಸಿಂಗ್ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಯುವ ನಾಯಕರು ಕೈಗೆ ಕೈ ಜೋಡಿಸಿ ಹೊಸ ರಾಜಕಾರಣಕ್ಕೆ ಮುಂದಾಗಿದ್ದಾರೆ.
ಕೆಂಪು ಧಿರಿಸಿನಲ್ಲಿ ಕನ್ಹಯ್ಯ ಕುಮಾರ್, ನೀಲಿ ಧಿರಿಸಿನಲ್ಲಿ ಜಿಗ್ನೇಶ್ ಮತ್ತು ಬಳಿ ಧಿರಿಸಿನಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ತಮ್ಮ ಸಿದ್ದಾಂತಗಳನ್ನು ರೂಪಕಗಳ ಮೂಲಕ ಮುಂದಿಟ್ಟಿದ್ದಾರೆ. ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಇಬ್ಬರು ಯುವನಾಯಕರು ಮಾತನಾಡಲಿದ್ದಾರೆ.
जिन विचारों पर देश की बुनियाद है,
उनको सहेजना हमारी साझी जिम्मेदारी हैAICC में प्रेस वार्ता के पहले का एक पल.. pic.twitter.com/I7DQBQ1ysQ
— Srinivas BV (@srinivasiyc) September 28, 2021
ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿಯವರಿಗೆ ಅಂಬೇಡ್ಕರ್, ಗಾಂಧಿ ಮತ್ತು ಭಗತ್ ಸಿಂಗ್ ಚಿತ್ರಗಳಿರುವ ಫೋಟೊ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಕಾಂಗ್ರೆಸ್ ಶಾಲು ಹೊದಿಸಿದ್ದಾರೆ.
ಕನ್ಹಯ್ಯ ಕುಮಾರ್ ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹೋರಾಟದ ಸಂಕೇತವಾಗಿದ್ದಾರೆ. ಅವರು ವಿದ್ಯಾರ್ಥಿ ನಾಯಕನಾಗಿ ಮೂಲಭೂತವಾದದ ವಿರುದ್ಧ ಹೋರಾಡಿದರು. ಇಂತಹ ಕ್ರಿಯಾಶೀಲ ವ್ಯಕ್ತಿತ್ವದ ಯುವ ನಾಯಕ ಕಾಂಗ್ರೆಸ್ ಸೇರಿಕೊಳ್ಳುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುತ್ತದೆ ಎಂದು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಈ ಇಬ್ಬರೂ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರುವಲ್ಲಿ ಹಾರ್ದಿಕ್ ಪಟೇಲ್ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.
Shri @RahulGandhi with Shri KanhaiyaKumar and Gujarat MLA Shri @jigneshmevani80 at Shaheed-E-Azam Bhagat Singh Park, ITO, Delhi. pic.twitter.com/w07jJ1mwN8
— Youth Congress (@IYC) September 28, 2021
ಇದನ್ನೂ ಓದಿ: ಭವಾನಿಪುರ: ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಮಾಡಿದ ದಿಲೀಪ್ ಘೋಷ್
LIVE: Special Press Conference by KC Venugopal, Randeep Surjewala and Bhakta Charan Das at AICC HQ https://t.co/swZWsnkgWB
— Youth Congress (@IYC) September 28, 2021
ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನವಜೋತ್ ಸಿಧು ರಾಜೀನಾಮೆ


