Homeಚಳವಳಿರೈತರ ಪ್ರತಿಭಟನಾ ಗಡಿಗಳಲ್ಲಿ ಮೊಳಗಿದ ಹುತಾತ್ಮ ಭಗತ್ ಸಿಂಗ್ ಘೋಷಣೆಗಳು

ರೈತರ ಪ್ರತಿಭಟನಾ ಗಡಿಗಳಲ್ಲಿ ಮೊಳಗಿದ ಹುತಾತ್ಮ ಭಗತ್ ಸಿಂಗ್ ಘೋಷಣೆಗಳು

- Advertisement -
- Advertisement -

ಕ್ರಾಂತಿಕಾರಿ ಹುತಾತ್ಮ ಭಗತ್ ಸಿಂಗ್ ಅವರು 114ನೇ ಜನ್ಮ ದಿನದಂದು ಅವರ ಧೈರ್ಯ, ಅರ್ಪಣಾ ಮನೋಭಾವ, ವಿಚಾರಧಾರೆ ಮತ್ತು ಜೀವನಾದರ್ಶಗಳನ್ನು ಇಡೀ ದೇಶ ನೆನಪಿಸಿಕೊಂಡಿದೆ. ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕೂಡ ಭಗತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಶಹಜಾನ್‌ಪುರ, ಗಾಝಿಪುರ್‌ ಗಡಿಗಳಲ್ಲಿ ರೈತರು ಕಾರ್ಯಕ್ರಮಗಳನ್ನು ಆಯೋಜಿಸಿ, ಭಗತ್ ಸಿಂಗ್ ವಿಚಾರಧಾರೆಗಳನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಜೊತೆಗೆ ಪಂಜಾಬ್‌ನಲ್ಲಿ ಇಂದು ಭಾರಿ ಕಾರ್ಯಕ್ರಮಗಳ ಮೂಲಕ ರೈತರು ಹುತಾತ್ಮ ಭಗತ್ ಸಿಂಗ್‌ಗೆ ಗೌರವ ಸಮರ್ಪಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜನರಿಗಾಗಿ ತನ್ನ ಜೀವವನ್ನು ಅರ್ಪಿಸಿದ ಭಾರತದ ಹೆಮ್ಮೆಯ ಮಗನನ್ನು ಎಲ್ಲ ಪ್ರತಿಭಟನಾ ಸ್ಥಳಗಳಲ್ಲಿ ಸ್ಮರಿಸಲಾಯಿತು. ಭಗತ್ ಸಿಂಗ್ ಅವರ ತ್ಯಾಗವು ರೈತರಿಗೆ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಸ್ಫೂರ್ತಿ ನೀಡುತ್ತದೆ ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಛತ್ತೀಸ್‌ಗಢದ ಕಿಸಾನ್ ಮಜ್ದೂರ್ ಮಹಾಸಂಘದಿಂದ ಛತ್ತೀಸ್‌ಗಢದ ರಾಜೀಮ್‌ನಲ್ಲಿ ನಡೆದ ಬೃಹತ್ ಕಿಸಾನ್ ಮಹಾಪಂಚಾಯತ್‌ನಲ್ಲಿ ಎಸ್‌ಕೆಎಂ ನಾಯಕರು ಭಾಗಿಯಾಗಿದ್ದರು. ಲಕ್ಷಾಂತರ ರೈತರು ಭಾಗಿಯಾಗಿದ್ದ ಈ ಮಹಾಪಂಚಾಯತ್‌ನಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಮಹಾಪಂಚಾಯತ್ ಆರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದೆ. ರೈತ ವಿರೋಧಿ ಕೃಷಿ ಮತ್ತು ಗ್ರಾಹಕರ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಯಲ್ಲಿ ಖಾರಿಫ್ ಋತುವಿನ ಭತ್ತವನ್ನು ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಕ್ವಿಂಟಾಲ್‌ಗೆ ಖರೀದಿಸಬೇಕು. ನೀರಾವರಿ ಸಂಪನ್ಮೂಲಗಳನ್ನು ಹೆಚ್ಚಿಸಬೇಕು. ಬೆಳೆ ವೈವಿಧ್ಯತೆಯನ್ನು ಉತ್ತೇಜಿಸಬೇಕು. ಕೃಷಿ ಭೂಮಿಯನ್ನು ಬೇರೆ ಇತರೆ ಕಾರಣಗಳಿಗಾಗಿ ಸ್ವಾಧೀನ ಪಡಿಸಿಕೊಳ್ಳಬಾರದು ಮತ್ತು ಬುಡಕಟ್ಟು ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಚಳವಳಿಗಳ ಮೇಲಿನ ದಮನವನ್ನು ನಿಲ್ಲಿಸಬೇಕು ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ.


ಇದನ್ನೂ ಓದಿ: ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...