Homeಚಳವಳಿರೈತ ಹೋರಾಟ: ಹೆದ್ದಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ರೈತ ಹೋರಾಟ: ಹೆದ್ದಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ರಾಷ್ಟ್ರ ರಾಜಧಾನಿಯನ್ನು ನೆರೆಯ ರಾಜ್ಯಗಳಿಗೆ ಸಂಪರ್ಕಿಸುವ ಹೆದ್ದಾರಿಗಳನ್ನು ನಿರ್ಬಂಧಿಸಿರುವುದರ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೆದ್ದಾರಿಗಳನ್ನು ಹೀಗೆ ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಒಕ್ಕೂಟ ಸರ್ಕಾರ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಜಾರಿಗೊಳಿಸಿತು. ಇವುಗಳು ರೈತರಿಗೆ ಮಾರಕ ಎಂದ ರೈತರು ಇವುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕಳೆದ ನವೆಂಬರ್‌ 26 ರಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಸಮಸ್ಯೆಗಳ ಪರಿಹಾರವು ನ್ಯಾಯಾಂಗ ಸ್ವರೂಪ, ಆಂದೋಲನ ಅಥವಾ ಸಂಸತ್ತಿನ ಚರ್ಚೆಗಳ ಮೂಲಕ ಮಾಡಬಹುದು. ಆದರೆ, ಹೆದ್ದಾರಿಗಳನ್ನು ಹೇಗೆ ನಿರ್ಬಂಧಿಸಬಹುದು..? ಅದು ಶಾಶ್ವತವಾಗಿ ಹೇಗೆ ಸಾಧ್ಯ…? ಇದು ಯಾವಾಗ ಕೊನೆಗೊಳ್ಳುತ್ತದೆ..?” ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರ ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ರೈತರ ಪ್ರತಿಭಟನಾ ಗಡಿಗಳಲ್ಲಿ ಮೊಳಗಿದ ಹುತಾತ್ಮ ಭಗತ್ ಸಿಂಗ್ ಘೋಷಣೆಗಳು

ಸುಪ್ರೀಂ ಕೋರ್ಟ್ ನೊಯ್ಡಾ ನಿವಾಸಿ ಮೊನಿಕ್ಕಾ ಅಗರವಾಲ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ಮೊದಲು ದಿಲ್ಲಿಯನ್ನು ತಲುಪಲು 20 ನಿಮಿಷಗಳಾಗುತ್ತಿತ್ತು. ಆದರೆ, ಈಗ ಎರಡು ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ. ಜೊತೆಗೆ ಯುಪಿ ಗೇಟ್ ಬಳಿಯ ಪ್ರತಿಭಟನೆಗಳಿಂದಾಗಿ ಪ್ರದೇಶದ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ  ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರ ನ್ಯಾಯಪೀಠ, ಹೆದ್ದಾರಿಗಳನ್ನು ಮುಕ್ತಗೊಳಿಸಲು ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್ ಅವರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿರುವ ನಟರಾಜ್, ಪ್ರತಿಭಟನಾ ನಿರತ ರೈತರೊಂದಿಗೆ ಸಭೆ ಕರೆದಿದ್ದೇವೆ ಅದಕ್ಕೆ ಸಂಬಂಧಿಸಿದ ವಿವರಗಳನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ.

ನ್ಯಾಯಪೀಠವು, “ನಾವು ಕಾನೂನನ್ನು ಹಾಕಬಹುದು. ಆದರೆ ಕಾನೂನನ್ನು ಹೇಗೆ ಕಾರ್ಯಗತಗೊಳಿಸುವುದು ಎಂಬುದು ನಿಮ್ಮ ಕೆಲಸವಾಗಿದೆ. ನ್ಯಾಯಾಲಯವು ಅದನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ. ಅದನ್ನು ಕಾರ್ಯಗತಗೊಳಿಸಬೇಕಾಗಿರುವುದು ಕಾರ್ಯಾಂಗದ ಕೆಲಸ” ಎಂದು ಹೇಳಿದೆ. ನ್ಯಾಯಾಲಯವು ಪ್ರಕರಣವನ್ನು ಅಕ್ಟೋಬರ್ 4 ಕ್ಕೆ ಮುಂದೂಡಿದೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿರುವ ರೈತರು ದೆಹಲಿಯ ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ರಾಜಸ್ಥಾನದ ಗಡಿಗಳಲ್ಲಿ ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಸರ್ಕಾರದ ಮುಂದಿನ ಗುರಿ ಮಾಧ್ಯಮಗಳು, ನೀವು ಉಳಿಯಬೇಕಿದ್ದರೇ ನಮ್ಮ ಜೊತೆಯಾಗಿ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...