HomeಮುಖಪುಟRSS ಬೆಂಬಲಿತ ಶಾಲೆಗಳು ಕೋಮು ದ್ವೇಷವನ್ನು ಬೆಳೆಸುತ್ತವೆ: ದಿಗ್ವಿಜಯ್ ಸಿಂಗ್

RSS ಬೆಂಬಲಿತ ಶಾಲೆಗಳು ಕೋಮು ದ್ವೇಷವನ್ನು ಬೆಳೆಸುತ್ತವೆ: ದಿಗ್ವಿಜಯ್ ಸಿಂಗ್

- Advertisement -
- Advertisement -

“ಆರೆಸ್ಸೆಸ್‌‌ ಬೆಂಬಲಿತ ಶಾಲೆಗಳು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮು ದ್ವೇಷವನ್ನು ಬೆಳೆಸುತ್ತವೆ” ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಹೇಳಿಕೆ ನೀಡಿದ್ದಾರೆ. ಇದರ ವಿರುದ್ದ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಕಾನೂನು ನೋಟಿಸ್ ಕಳುಹಿಸಿದ್ದಾರೆ ಎಂದು ಪಿಟಿಐ ಬುಧವಾರ ವರದಿ ಮಾಡಿದೆ.

ದಿಗ್ವಿಜಯ್‌ ಸಿಂಗ್ ಅವರು ಭಾನುವಾರದಂದು ಭೋಪಾಲ್‌ನಲ್ಲಿ ಸರಸ್ವತಿ ಶಿಶು ಮಂದಿರದ ಬಗ್ಗೆ ಹೇಳಿಕೆ ನೀಡಿದ್ದರು. “ಬಾಲ್ಯದಿಂದಲೆ ಸರಸ್ವತಿ ಶಿಶು ಮಂದಿರದಲ್ಲಿ, ವಿದ್ಯಾರ್ಥಿಗಳ ಹೃದಯ ಮತ್ತು ಮನಸ್ಸಿನಲ್ಲಿ ಇತರ ಧರ್ಮಗಳ ವಿರುದ್ಧ ದ್ವೇಷದ ಬೀಜಗಳನ್ನು ಬಿತ್ತುವವರ ವಿರುದ್ಧ ನಾವು ಹೋರಾಡುತ್ತಿದ್ದೇವೆ. ಈ ದ್ವೇಷದ ಬೀಜಗಳು ಕ್ರಮೇಣ ಭಾರತದ ಕೋಮು ಸೌಹಾರ್ದತೆಯನ್ನು ಕೆಡಿಸುತ್ತವೆ ಹಾಗೂ ಕೋಮು ದ್ವೇಷವನ್ನು ಸೃಷ್ಟಿಸುತ್ತವೆ ಮತ್ತು ಗಲಭೆಗೆ ಕಾರಣವಾಗುತ್ತವೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

ಬಿಜೆಪಿ ವಕ್ತಾರರಾದ ಪಂಕಜ್ ಚತುರ್ವೇದಿ ಅವರು ಬುಧವಾರದಂದು ದಿಗ್ವಿಜಯ್‌ ಸಿಂಗ್ ಅವರಿಗೆ, ಶಾಲೆಗಳ ವಿರುದ್ಧ ಮಾಡಿರುವ ತಮ್ಮ ಟೀಕೆಗಳನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ದಿಗ್ವಿಜಯ್ ಅವರು ಭಾರತದಾದ್ಯಂತ ಹರಡಿರುವ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕ್ಷಮೆ ಕೇಳಬೇಕು. ಕ್ಷಮೆ ಕೇಳದಿದ್ದರೆ, ಅವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುತ್ತೇನೆ” ಎಂದು ಪಂಕಜ್‌ ಹೇಳಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೂಡಾ ದಿಗ್ವಿಜಯ್ ಸಿಂಗ್ ಮತ್ತು ಮಧ್ಯಪ್ರದೇಶದ ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೋಹ್ರಿಗೆ ಸೋಮವಾರ ನೋಟಿಸ್ ನೀಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮಕ್ಕಳ ಹಕ್ಕುಗಳ ಆಯೋಗವು, ಈ ಕುರಿತು ವಿಚಾರಣೆ ನಡೆಸಿ ಒಂದು ವಾರದೊಳಗೆ ವರದಿಯನ್ನು ಸಲ್ಲಿಸುವಂತೆ ವಿವೇಕ್‌ ಜೋಹ್ರಿಯನ್ನು ಕೇಳಿದೆ. ದಿಗ್ವಿಜಯ್‌ ಅವರ ಹೇಳಿಕೆ ಸರಸ್ವತಿ ಶಿಶು ಮಂದಿರದ ವಿದ್ಯಾರ್ಥಿಗಳ ಭಾವನೆಗಳನ್ನು ಘಾಸಿಗೊಳಿಸಿದೆ. ಜೊತೆಗೆ ಭಾರತೀಯ ದಂಡ ಸಂಹಿತೆ ಹಾಗೂ ಬಾಲ ನ್ಯಾಯ ಕಾಯ್ದೆಯ ಭಾಗಗಳನ್ನು ಅವರ ಹೇಳಿಕೆ ಉಲ್ಲಂಘಿಸಿವೆ ಎಂದು ಆಯೋಗ ಹೇಳಿದೆ.

ಇದನ್ನೂ ಓದಿ: Fact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...