ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಕಾನ್ಪುರದ ಉದ್ಯಮಿ ಮನೀಶ್ ಗುಪ್ತಾ ಅವರ ಸಾವಿಗೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ಸೇರಿದಂತೆ ಎಲ್ಲಾ ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒಪ್ಪಿಕೊಂಡಿದ್ದಾರೆ.
ಉದ್ಯಮಿ ಮನೀಶ್ ಗುಪ್ತಾ ಅವರ ಕುಟುಂಬದವರನ್ನು ಭೇಟಿ ಮಾಡಿದ ಸಿಎಂ ಯೋಗಿ ಆದಿತ್ಯನಾಥ್, ಮೃತರ ಪತ್ನಿ ಮತ್ತು ಸಂಬಂಧಿಕರು ಒತ್ತಾಯಿಸಿದ ಸಿಬಿಐ ತನಿಖೆ ಸೇರಿದಂತೆ ಎಲ್ಲಾ ಮೂರು ಬೇಡಿಕೆಗಳನ್ನು ಒಪ್ಪಿಕೊಂಡಿದ್ದು, ಒಬ್ಬ ಅಪರಾಧಿ ಕೂಡ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಸೋಮವಾರ ಮಧ್ಯರಾತ್ರಿ ಗೋರಖ್‌ಪುರ್ ಹೋಟೆಲ್‌ನಲ್ಲಿ ನಡೆದ ಪೊಲೀಸರ ದಾಳಿಯಲ್ಲಿ ಕಾನ್ಪುರದ 38 ವರ್ಷದ ಉದ್ಯಮಿ ಮನೀಶ್ ಗುಪ್ತಾ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರು ಮಂದಿ ಪೊಲೀಸರನ್ನು ಅಮಾನತುಗೊಳಿಸಿ, ಬಂಧಿಸಲಾಗಿದೆ.
ಇದನ್ನೂ ಓದಿ: ಉತ್ತರ ಪ್ರದೇಶ: ಪೊಲೀಸ್ ದಾಳಿಯಲ್ಲಿ ಉದ್ಯಮಿ ಸಾವು- 6 ಪೊಲೀಸರ ಅಮಾನತು
गोरखपुर में हुई दु:खद घटना का दोषी कोई भी हो, किसी भी पद पर हो, वह किसी भी कीमत पर बख्शा नहीं जाएगा। सबकी जवाबदेही तय की जाएगी। अपराधी सिर्फ अपराधी होता है।
घटना के बाद अधिकारियों को निर्देशित कर तत्काल मुकदमा दर्ज कराया गया।
— Yogi Adityanath (@myogiadityanath) September 30, 2021
“ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುವುದು. ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಮನೀಶ್ ಹತ್ಯೆ ಪ್ರಕರಣದಲ್ಲಿ ಇರುವವರನ್ನು ಯಾರು ರಕ್ಷಿಸುವುದಿಲ್ಲ ಈ ಸಮಯದಲ್ಲಿ ನಾನು ನಿಮ್ಮೆಲ್ಲರೊಂದಿಗಿದ್ದೇನೆ” ಎಂದು ಸಿಎಂ ಹೇಳಿದ್ದಾರೆ.
ಸಂತ್ರಸ್ತ ಕುಟುಂಬಕ್ಕೆ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿರುವ ಸಿಎಂ, ಸ್ಥಳದಲ್ಲೇ ಕಾನ್ಪುರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರನ್ನು ಕರೆಸಿ, ಮೃತ ಗುಪ್ತಾ ಅವರ ಪತ್ನಿ ಮೀನಾಕ್ಷಿಯವರನ್ನು ವಿಶೇಷ ಕರ್ತವ್ಯದ (Officer on Special Duty) ಅಧಿಕಾರಿಯಾಗಿ ನೇಮಿಸುವಂತೆ ಸೂಚಿಸಿದ್ದಾರೆ.
ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ ಮುಖ್ಯಸ್ಥ ಶಿವಪಾಲ್ ಯಾದವ್ ಕೂಡ ಕಾನ್ಪುರಕ್ಕೆ ಭೇಟಿ ನೀಡಿದ್ದಾರೆ. ಸಿಬಿಐ ತನಿಖೆಗೆ ಆಗ್ರಹಿಸಿ ಬಿಎಸ್ಪಿ ಮುಖ್ಯಸ್ಥೆ, ಯುಪಿ ಮಾಜಿ ಮುಖ್ಯಮಂತ್ರಿ ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ


