Homeಮುಖಪುಟಪಿಎಂ ಭೇಟಿಯಾದ ಪಂಜಾಬ್ ನೂತನ ಸಿಎಂ ಚನ್ನಿ: ಕೃಷಿ ಕಾಯ್ದೆಗಳನ್ನು ಕೈಬಿಡಲು ಮನವಿ

ಪಿಎಂ ಭೇಟಿಯಾದ ಪಂಜಾಬ್ ನೂತನ ಸಿಎಂ ಚನ್ನಿ: ಕೃಷಿ ಕಾಯ್ದೆಗಳನ್ನು ಕೈಬಿಡಲು ಮನವಿ

- Advertisement -
- Advertisement -

ಇತ್ತೀಚೆಗಷ್ಟೇ ಪಂಜಾಬ್‌ನ ನೂತನ ಸಿಎಂ ಆಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚನ್ನಿ ಇಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ ಎಂದು ಮನವಿ ಮಾಡಿದ್ದಾರೆ.

ಕಳೆದ ಒಂದು ವರ್ಷದಿಂದ ದೇಶಾದ್ಯಂತ ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿದ್ದಾರೆ. ಅದಕ್ಕೆ ಪಂಜಾಬ್ ಮತ್ತು ಹರಿಯಾಣದ ರೈತರು ನಾಯಕತ್ವ ನೀಡಿದ್ದಾರೆ. ಈ ಸಂದರ್ಭದಲ್ಲಿಯೇ ಚನ್ನಿಯವರು ಪ್ರಧಾನಿಯವರೊಂದಿಗಿನ ಮೊದಲ ಭೇಟಿಯಲ್ಲಿಯೇ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಜೊತೆಗೆ ಭತ್ತ ಖರೀದಿ ಪ್ರಕ್ರಿಯೆಯನ್ನು ಮುಂದೂಡಿರುವ ಕೇಂದ್ರ ಕ್ರಮವನ್ನು ರದ್ದುಗೊಳಿಸಿ ಕೂಡಲೇ ಭತ್ತ ಖರೀದಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪಂಜಾಬ್ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಭತ್ತ ಬೆಳೆಯುವ ರಾಜ್ಯವಾಗಿದ್ದು ಕೇಂದ್ರದ ಕ್ರಮದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಚನ್ನಿ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರವು ಅಕ್ಟೋಬರ್ 1 ರಿಂದ ಭತ್ತ ಕೊಳ್ಳುವುದನ್ನು ಅಕ್ಟೋಬರ್ 11 ಕ್ಕೆ ಮುಂದೂಡಿದೆ. ಕೇಂದ್ರದ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಇತರ ರಾಜ್ಯ ಏಜೆನ್ಸಿಗಳು ಭತ್ತ ಕೊಳ್ಳುತ್ತವೆ. ಈಗಾಗಲೇ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಬೆಳೆಗೆ ಹಾನಿಯಾಗುತ್ತಿದ್ದು, ಕೇಂದ್ರ ಭತ್ತ ಕೊಳ್ಳುವುದನ್ನು ತ್ವರಿತಗೊಳಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

“ಕೃಷಿ ನಮ್ಮ ಮುಖ್ಯ ಆದಾಯದ ಮೂಲವಾಗಿದೆ. ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗಿನ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ಸಹಾಯ ಮಾಡುವಂತೆ ನಾನು ಪ್ರಧಾನಿಯವರ ಬಳಿ ಮನವಿ ಮಾಡಿದ್ದೇನೆ” ಎಂದು ಚನ್ನಿ ಪ್ರಧಾನಿಯೊಂದಿಗಿನ ಸಭೆಯ ನಂತರ ತಿಳಿಸಿದ್ದಾರೆ.


ಇದನ್ನೂ ಓದಿ: ಹರಿಯಾಣ: ಪ್ರತಿಭಟನಾನಿರತ ರೈತರ ಮೇಲೆ ಮತ್ತೆ ಜಲ ಫಿರಂಗಿ ಬಳಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಕೇವಲ ದುಷ್ಟರಿಗಷ್ಟೇ ಧರ್ಮ ಬೇಕು”: ಪ್ರಧಾನಿ ಮೋದಿ-ಚಿನ್ಮಯಾನಂದ ಎಐ ಸಂವಾದದ ನಡುವೆ ಸ್ವಾಮಿ ಚಿನ್ಮಯಾನಂದರ ಹಳೆಯ ಕ್ರಾಂತಿಕಾರಿ ಹೇಳಿಕೆ ಈಗ ಮುನ್ನೆಲೆಗೆ!

ದೆಹಲಿಯ ಭಾರತ್ ಮಂಟಪಂನಲ್ಲಿ ಆಯೋಜಿಸಿದ್ದ ‘ಚಿನ್ಮಯ ಅಮೃತ ಮಹೋತ್ಸವ’ ಜಾಗತಿಕ ಸಮ್ಮೇಳನದ ವೇದಿಕೆ ಇತ್ತೀಚೆಗೆ ವಿಶಿಷ್ಟ ತಾಂತ್ರಿಕ ಪ್ರದರ್ಶನವೊಂದಕ್ಕೆ ಸಾಕ್ಷಿಯಾಯಿತು. 1993ರಲ್ಲೇ ಇಹಲೋಕ ತ್ಯಜಿಸಿದ್ದ ಚಿನ್ಮಯ ಮಿಷನ್ ಸಂಸ್ಥಾಪಕ ಸ್ವಾಮಿ ಚಿನ್ಮಯಾನಂದ ಅವರ...

ಜೀವನ ವೆಚ್ಚ, ಶಾಲಾ ನಿಧಿ ಕಡಿತದ ವಿರುದ್ಧ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು, ಜಲಫಿರಂಗಿ ಪ್ರಯೋಗ

ಫ್ರಾನ್ಸ್‌ನಲ್ಲಿ ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ರಾಜಧಾನಿ ಪ್ಯಾರಿಸ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು...

‘ಒಂದೇ ಹೆಸರಿನಲ್ಲಿ 13 ವೋಟ್’ : ಉತ್ತರ ಪ್ರದೇಶ ಆಝಂಗಢದಲ್ಲಿ ಮತದಾರರ ಪಟ್ಟಿ ಅಕ್ರಮ; 9 ಅಧಿಕಾರಿಗಳ ವಿರುದ್ಧ ಕ್ರಮ

ಆಝಂಗಢ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ 13 ಪ್ರತ್ಯೇಕ ಸ್ಥಳಗಳಲ್ಲಿ ವಿಕಾಸ್ ಯಾದವ್ ಎಂಬ ಹೆಸರು ತಪ್ಪಾಗಿ ದಾಖಲಾಗಿರುವುದು ಆಂತರಿಕ ತನಿಖೆಯಿಂದ ತಿಳಿದುಬಂದ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)...

ಎಸ್‌ಆರ್‌ಎಫ್‌ಟಿಐ ವಿದ್ಯಾರ್ಥಿಗಳ ಹೋರಾಟಕ್ಕೆ ನಾಸಿರುದ್ದೀನ್ ಶಾ, ಪಾಯಲ್ ಕಪಾಡಿಯಾ ಬೆಂಬಲ; ಬಿಜೆಪಿ ವಿರುದ್ಧ ನಟನ ವಾಗ್ದಾಳಿ

ಕೋಲ್ಕತ್ತಾ: ಕೋಲ್ಕತ್ತಾದ ಸತ್ಯಜಿತ್ ರೇ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಸ್‌ಆರ್‌ಎಫ್‌ಟಿಐ)ಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಹಿರಿಯ ನಟ ನಾಸಿರುದ್ದೀನ್ ಶಾ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕಿ ಪಾಯಲ್ ಕಪಾಡಿಯಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ: ತನಿಖೆ ಚುರುಕು 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆಪಾದಿತ ಕುಟುಕು ಕಾರ್ಯಾಚರಣೆಯ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಅಪರಾಧ ವಿಭಾಗದ ವಿಶೇಷ ತಂಡ ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಪ್ರಕರಣದಲ್ಲಿ ನಡೆದಿರುವ ಮೊದಲ...

ಕೆಪಿಎಸ್‌ಸಿ ನೇಮಕಾತಿ ಹಗರಣ : ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಅನುಮತಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ (ಅ.24) ಅನುಮತಿ ನೀಡಿದ್ದಾರೆ. ಈ...

ಶಾಂತಿ ಬಾಂಡ್‌ಗೆ ಸಹಿ ಹಾಕಲು ನಿರಾಕರಿಸಿದ ನೇಹಾ ಬೋರಾ; ನೋಟಿಸ್‌ನ ಔಚಿತ್ಯದ ಬಗ್ಗೆ ಪ್ರಶ್ನೆ

ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ (ಎಸ್‌ಇಎಂ) ಮುಂದೆ ಶಾಂತಿ ಬಾಂಡ್‌ಗೆ ಸಹಿ ಹಾಕುವುದಿಲ್ಲ ಎಂದು ಶನಿವಾರ (ಅ. 24) ಹೇಳಿದ್ದಾರೆ. ರೂ....

ಚುನಾವಣಾ ಆಯೋಗದ ಕಾರ್ಯವೈಖರಿ ಪರಿಶೀಲಿಸಲು ನಿವೃತ್ತ ಸಿಜೆಐ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯನಿರ್ವಹಣೆಯಲ್ಲಿರುವ ಸಾಂಸ್ಥಿಕ ನ್ಯೂನತೆಗಳನ್ನು ಪರಿಶೀಲಿಸಲು, ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಥವಾ ನಿವೃತ್ತ ನ್ಯಾಯಾಧೀಶರೊಬ್ಬರ ಅಧ್ಯಕ್ಷತೆಯಲ್ಲಿ ಸ್ವತಂತ್ರ ತಜ್ಞ ಸಮಿತಿಯೊಂದನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ...

ಗೋವು ಕಳ್ಳಸಾಗಣೆ ಆರೋಪ: ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು!

ಪೊಲೀಸರು ಬಿಡುಗಡೆ ಮಾಡುವ ವಿಡಿಯೊಗಳಲ್ಲಿ ಒಂದೇ ರೀತಿಯ ದೃಶ್ಯಗಳು ಮರುಕಳಿಸುತ್ತವೆ: ಕಾಲಿನ ಕೆಳಭಾಗಕ್ಕೆ ಗುಂಡೇಟು ತಗುಲಿದ ವ್ಯಕ್ತಿಯೊಬ್ಬರು ಕತ್ತಲಿನಲ್ಲಿ ಕುಂಟುತ್ತಾ ಸಾಗುತ್ತಿದ್ದರೆ, ಪೊಲೀಸರು ಅವರನ್ನು ಸುತ್ತುವರಿದು ಕರೆದೊಯ್ಯುತ್ತಾರೆ. ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ...

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹13.97 ಕೋಟಿ ಅನಧಿಕೃತ ವಹಿವಾಟು: ಎಫ್‌ಐಆರ್ ದಾಖಲು

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೊತೆಗಿನ ತನ್ನ ಸೆಟಲ್‌ಮೆಂಟ್ ಖಾತೆಯಿಂದ ರೂ 13.97 ಕೋಟಿ ಹಣವನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ (ಸೈಫನ್ ಮಾಡಲಾಗಿದೆ) ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಸಿದೆ. ಹಿಂದುಸ್ತಾನ್ ಟೈಮ್ಸ್...