Homeಮುಖಪುಟಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

- Advertisement -
- Advertisement -

ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು, ಅಭಿವೃದ್ಧಿ ಮತ್ತು ಮಾನವೀಯತೆ ಸವಾಲಾಗಿ ನಿಂತಿದೆ.

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

ಭಾನುವಾರ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಇದ್ದ ಜೀಪನ್ನು ತಡೆದು ನಿಲ್ಲಿಸಿದ್ದ ಬಜರಂಗ ದಳದ ಜಿಲ್ಲಾ ಪ್ರಮುಖನೆನ್ನಲಾದ ಪ್ರೀತಮ್ ಶೆಟ್ಟಿ, ಸುರತ್ಕಲ್ ಬಜರಂಗದಳದ ಮುಂದಾಳು ಆರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರ ತಂಡ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದೆ.

ಇದನ್ನೂ ಓದಿರಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಈ ಪ್ರಕರಣದಲ್ಲಿ ಐವರು ಹಲ್ಲೆಕೋರರನ್ನು ಬಂಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್‌‌ ಒಬ್ಬರ ಕಣ್ಣೆದುರೆ ದಾಂಧಲೆಯಾಗಿದ್ದರೂ ಆ ಪೊಲೀಸ್ ಅಧಿಕಾರಿ ಹಲ್ಲೆ ತಡೆದಿದ್ದರೂ ಆರೋಪಿಗಳನ್ನು ಬಂಧಿಸಲು ಮೀನಮೇ಼ಷ ಎಣಿಸಿದ್ದರು. ಭಜರಂಗ ದಳದವರು ತಾವು ಸುರತ್ಕಲ್ ಟೋಲ್ ಗೇಟ್‌ನಲ್ಲಿ ಮಾಡಿದ್ದ ‘ಧರ್ಮ ರಕ್ಷಣೆ’ ಹೆಸರಿನ ದುಷ್ಕೃತ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಾಗ ವೈರಲ್ ಆಯಿತು. ಆಗ ಅನಿವಾರ್ಯವಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಯಿತು. ಅಂದರೆ ಆರೋಪಿಗಳು ಕಣ್ಣೆದುರಿದ್ದರೂ ಸೋಮವಾರ ಸಂಜೆಯ ವರೆಗೆ ಬಂಧನವಾಗಿರಲಿಲ್ಲ. ಆಳುವ ಬಿಜೆಪಿಯ ಬೆಂಬಲಿತ ಸಂಘಟನೆಗೆ ಆರೋಪಿಗಳು ಸೇರಿದ್ದರಿಂದ ಪೊಲೀಸರು ಕೈಕಟ್ಟಿ ಕೂತಿದ್ದರು ಎಂಬುದು ಬಹಿರಂಗ ರಹಸ್ಯ! ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಬೇಕಿದ್ದ ಸುರತ್ಕಲ್ ಪೊಲೀಸರು ಹಲ್ಲೆಗೀಡಾದ ವಿದ್ಯಾರ್ಥಿಯಿಂದ ದೂರು ಪಡೆದ ನಂತರವೇ ಬಂಧನದ ಪ್ರಹಸನ ಮಾಡಿದ್ದಾರೆ ಎಂದು ‘ಮೋರಲ್‌ ಪೊಲಿಸಿಂಗ್‌’ನ ಆತಂಕಗಳನ್ನು ಎದುರಿಸುತ್ತಿರುವ ಮಂಗಳೂರಿನ ಜನರು ಹೇಳುತ್ತಾರೆ.

ಸೆಪ್ಟೆಂಬರ್‌ನಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ ಸ್ಥಳೀಯ ಮುಸ್ಲಿಮ್ ಹುಡುಗ ಮತ್ತು ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಮಾತನಾಡಿದರೆಂಬ ಕಾರಣಕ್ಕೆ ಸಂಘ ಪರಿವಾರದ ಸಂಘಟನೆಯವರು ರಂಪಾಟ ಎಬ್ಬಿಸಿ ಹಲ್ಲೆ ಮಾಡಿದ್ದರು. ಇದರ ಬೆನ್ನಿಗೆ ಬಂಟ್ವಾಳದಲ್ಲಿ ಆರು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಐವರು ಭಜರಂಗದಳದವರು ದಾಳಿ ನಡೆಸಿದ್ದರು. ಕಾರಿಂಜ ದೇವಾಲಯಕ್ಕೆ ಮುಸ್ಲಿಮ್ ಗೆಳೆಯರೊಂದಿಗೆ ಹಿಂದೂ ಹುಡುಗರು ಹೋಗಿದ್ದೇ ಅಪರಾಧವಾಗಿತ್ತು. ಈ ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಹಿಂದುತ್ವದ ಹೆಸರಲ್ಲಿ ನಡೆಯುತ್ತಿರುವ ಅತಿರೇಕದ ಘಟನೆಗಳ ಸೂತ್ರಧಾರರು ಕ್ರಿಮಿನಲ್ ಆರೋಪ ಹೊತ್ತವರೆಂಬುದು ಗಮನಾರ್ಹ ಸಂಗತಿಯಾಗಿದೆ. ಈ ಭಯ ಹುಟ್ಟಿಸುವ ಸರಣಿ ಪ್ರಕರಣಗಳು ದಕ್ಷಿಣ ಕನ್ನಡದ ಸಾಮಾಜಿಕ ಬದುಕು, ವಾಣಿಜ್ಯ ವಹಿವಾಟು ಮತ್ತು ಪ್ರವಸೋದ್ಯಮಕ್ಕೆ ಗಂಡಾಂತರಕಾರಿಯಾಗಿವೆ. ಹೊರಗಿನ ಉದ್ಯಮಿಗಳು, ಪ್ರವಾಸಿಗರು ಜಿಲ್ಲೆಗೆ ಬರಲು ಹತ್ತು ಬಾರಿ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ. ಮೋರಲ್‌ ಪೋಲಿಸಿಂಗ್‌ ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರೀಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸುತ್ತಿವೆ. ಈ ಅಸಂವಿಧಾನಿಕ ಘಟನೆಗಳಿಗೆ ಕಡಿವಾಣಹಾಕಬೇಕಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ.

– ಶುದ್ದೋಧನ


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...