Homeಮುಖಪುಟಹುದ್ದೆ ಇರಲಿ, ಇಲ್ಲದಿರಲಿ ರಾಹುಲ್, ಪ್ರಿಯಾಂಕ ಜೊತೆಗಿರುವೆ: ನವಜೋತ್ ಸಿಂಗ್ ಸಿಧು

ಹುದ್ದೆ ಇರಲಿ, ಇಲ್ಲದಿರಲಿ ರಾಹುಲ್, ಪ್ರಿಯಾಂಕ ಜೊತೆಗಿರುವೆ: ನವಜೋತ್ ಸಿಂಗ್ ಸಿಧು

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಬದಲಾವಣೆಯ ನಂತರ ಪಂಜಾಬ್ ಕಾಂಗ್ರೆಸ್‌ನಲ್ಲಿ ಕುತೂಹಲಕಾರಿ ಬೆಳವಣಿಗೆಗಳು ಘಟಿಸುತ್ತಿವೆ. ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಸಂದರ್ಭದಲ್ಲಿಯೇ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದರು. ಇದು ಕಾಂಗ್ರೆಸ್ ವರಿಷ್ಟರಲ್ಲಿ ದೊಡ್ಡ ತಲೆನೋವಿಗೆ ಕಾರಣವಾಗಿತ್ತು. ಈ ಕುರಿತು ಇಂದು ಮತ್ತೆ ಪ್ರತಿಕ್ರಿಯಿಸಿರುವ ಸಿಧು, ಹುದ್ದೆ ಇರಲಿ, ಇಲ್ಲದಿರಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಜೊತೆಗಿರುವೆ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ. ಹುದ್ದೆ ಇರಲಿ, ಇಲ್ಲದಿರಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಜೊತೆಗಿರುವೆ. ನಕರಾತ್ಮಕ ಶಕ್ತಿಗಳು ನಮ್ಮನ್ನು ಸೋಲಿಸಲು ಎಷ್ಟೇ ಪ್ರಯತ್ನಿಸಲಿ.. ಆದರೆ ಸಕರಾತ್ಮಕ ಧೋರಣೆಯಿಂದ ಪ್ರತಿ ಹಂತದಲ್ಲಿಯೂ ನಾವು ಮೇಲೆದ್ದು ಬರುತ್ತೇವೆ. ಅದು ಪಂಜಾಬ್ ಅನ್ನು ಗೆಲ್ಲಿಸುತ್ತದೆ, ನಮ್ಮ ಭಾತೃತ್ವ ಪ್ರತಿ ಪಂಜಾಬಿಯನ್ನು ಗೆಲ್ಲಿಸುತ್ತದೆ” ಎಂದು ಬರೆದುಕೊಂಡಿದ್ದಾರೆ.

ಇನ್ನೊಂದೆಡೆ ಅಮರಿಂದರ್ ಸಿಂಗ್ ಬಿಜೆಪಿ ಪಕ್ಷ ಸೇರುವುದಿಲ್ಲ ಎಂದು ಹೇಳೀದ್ದು, ಸ್ವಂತ ಪಕ್ಷ ಕಟ್ಟುವ ಆಲೋಚನೆಯಲ್ಲಿದ್ದಾರೆ. ಎಲ್ಲಾ ಪಕ್ಷಗಳಲ್ಲಿರುವ ಅತೃಪ್ತರನ್ನು ಸೆಳೆಯುವ ಯೋಚನೆಯಲ್ಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...