Homeಕರ್ನಾಟಕಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

ಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

- Advertisement -
- Advertisement -

’ಪಕ್ಷದಲ್ಲಿ ಬೆಳೆದು ಪಕ್ಷ ಬಿಟ್ಟು ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಜೆಡಿಎಸ್ ಸಂಘಟನಾ ಕಾರ್ಯಾಗಾರ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ’ಕೆಲ ಶಾಸಕರು ಪಕ್ಷ ತೊರೆಯುವ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರೇ ಸ್ವತಃ ಗೊಂದಲ ಸೃಷ್ಟಿಸಿಕೊಂಡು ಬಹಿರಂಗ ಹೇಳಿಕೆ ಕೊಡುವುದು ಯಾಕೆ..? ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಬಹುದಾದ ವಿಚಾರಗಳನ್ನು ಹೊರಗೆ ಹೇಳುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬರಲಿ. ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು’ ಎಂದಿದ್ದಾರೆ.

’ಯಾರೇ ಶಾಸಕರು ಬಂದರು ಮುಕ್ತವಾಗಿ ನಾನು ಯಾವಾಗಲೂ ಮಾತನಾಡುತ್ತೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಆದರೆ, 3-4 ಜನ ಪಕ್ಷ ತೊರೆಯುವ ಮಾತನ್ನಾಡಿದ್ದಾರೆ. ಅವರ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಸಿಬ್ಬಂದಿಯ ಹೆಂಡತಿ, ಮಕ್ಕಳ ಆತ್ಮಹತ್ಯೆ: ಕೊಲೆಗಡುಕ ಸರ್ಕಾರ ಎಂದ ಎಚ್‌.ಡಿ.ಕುಮಾರಸ್ವಾಮಿ

’ಯಾರನ್ನೂ ಪಕ್ಷ ಬಿಟ್ಟು ಹೋಗಿ ಅಂತ ನಾನು ಹೇಳಿಲ್ಲ. ಆದರೆ, ಪಕ್ಷ ತ್ಯಜಿಸಿ ಹೋದ ಮೇಲೆ ನಾನೇನು ಮಾಡಲು ಆಗುವುದಿಲ್ಲ. ನಿನ್ನೆಯೂ ಒಬ್ಬ ಶಾಸಕರು ನಾಯಕರೇ ಗೊಂದಲ ಸೃಷ್ಟಿ ಮಾಡ್ತಿರೋದು ಅಂದಿದ್ದಾರೆ. ನಾವ್ಯಾಕೆ ಗೊಂದಲ ಸೃಷ್ಟಿ ಮಾಡೋಣ. ಒಳಗೊಳಗೇ ಸಂಚು ರೂಪಿಸಿಕೊಂಡು ನನ್ನ ಮೇಲೆ ಗೂಬೆ ಕೂರಿಸುತ್ತಾರೆ. ಅಧಿಕಾರದ ರುಚಿ ಕಂಡು ನಡುನೀರಲ್ಲಿ ಕಾರ್ಯಕರ್ತರನ್ನು ಬಿಟ್ಟು ಹೋಗ್ತಾರೆ. ನಾಯಕರಿಂದ ಪಕ್ಷ ಅಲ್ಲ, ಕಾರ್ಯಕರ್ತರಿಂದ ಪಕ್ಷ. ಕೆಲವರು ಪಕ್ಷದ ಕುತ್ತಿಗೆ ಕುಯ್ದು ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಾರ್ಯಗಾರಗಳು ಯಶಸ್ವಿಯಾಗಿ ನಡೆದಿವೆ. ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಆಗುವುದೂ ಇಲ್ಲ. ಈಗ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿರುವಂತಿದೆ. ಅದೇ ಕಾರಣಕ್ಕೆ ನಮ್ಮಂತೆಯೇ ಕಾರ್ಯಾಗಾರ ಆಯೋಜಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...