Homeಕರ್ನಾಟಕಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

ಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆಗಳ ಉಸ್ತುವಾರಿಗಳ ಪಟ್ಟಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ, ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೆಸರನ್ನು ಬಿಜೆಪಿ ಕೈಬಿಟ್ಟಿತ್ತು. ಈ ಬಗ್ಗೆ ವಿಜಯೇಂದ್ರ ಅವರ ಅಭಿಮಾನಿಗಳು ಬಿಜೆಪಿ ನಾಯಕತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಅವರನ್ನು ಉಸ್ತುವಾರಿಗಳ ಪಟ್ಟಿಗೆ ಅವರ ಹೆಸರನ್ನು ಸೋಮವಾರ ಸೇರಿಸಿದೆ.

ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಣೆ: ಕಸರತ್ತು ಆರಂಭಿಸಿದ ಪಕ್ಷಗಳು

ವಿಜಯೇಂದ್ರ ಅವರ ಹೆಸರು ಬಿಜೆಪಿ ಕೈಬಿಟ್ಟ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಪಕ್ಷದ ಉನ್ನತ ನಾಯಕತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಅವರು ಟ್ವಿಟರ್‌ನಲ್ಲಿ ಖಂಡಿಸಿದ್ದರು. “ಪಕ್ಷದ ತೀರ್ಮಾನದಂತೆ, ನಮ್ಮ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ, ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ನಾವು ಕಾರ್ಯನಿರ್ವಹಿಸೋಣ. ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಮ್ಮತಿಯಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಪಕ್ಷವು ಅಕ್ಟೋಬರ್ 1 ರಂದು ಘೋಷಿಸಿದ್ದ ಉಸ್ತುವಾರಿಗಳ ಗುಂಪಿನಲ್ಲಿ ಬಿಜೆಪಿ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರ ಹೆಸರು ಇರಲಿಲ್ಲ. ಅವರ ಅಭಿಮಾನಿಗಳ ಆಕ್ರೊಶ ವ್ಯಕ್ತವಾದ ನಂತರ, ಸೋಮವಾರ ಪಕ್ಷವು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಹಾನಗಲ್‌ ಉಸ್ತುವಾರಿಯಾಗಿ ಅವರನ್ನು ಸೇರಿಸಿದ್ದಾರೆ. ಅವರ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ, ಜೆ ಸಿ ಮಾಧುಸ್ವಾಮಿ, ಬಿ ಸಿ ಪಾಟೀಲ್, ಶಿವರಾಮ ಹೆಬ್ಬಾರ್ ಮತ್ತು ಸಂಸತ್ ಸದಸ್ಯ ಶಿವಕುಮಾರ ಉದಾಸಿ ಸೇರಿದಂತೆ ಒಟ್ಟು 13 ಉಸ್ತುವಾರಿಗಳನ್ನು ನೇಮಿಸಲಾಗಿದೆ.

ಸಿಂದಗಿ ಕ್ಷೇತ್ರದಲ್ಲಿ ಉಸ್ತುವಾರಿಯಾಗಿ, ಸಚಿವರಾದ ಗೋವಿಂದ್ ಕಾರಜೋ‌ಲ್, ವಿ ಸೋಮಣ್ಣ, ಸಿ ಸಿ ಪಾಟೀಲ್ ಮತ್ತು ಶಶಿಕಲಾ ಜೊಲ್ಲೆ ಪಟ್ಟಿಯಲ್ಲಿ ಇದ್ದಾರೆ.

ಸಿಂದಗಿಯಲ್ಲಿ ಜೆಡಿ(ಎಸ್) ಶಾಸಕರಾದ ಎಂ.ಸಿ. ಮನಗೂಳಿ ಮತ್ತು ಹಾನಗಲ್‌ನಲ್ಲಿ ಬಿಜೆಪಿಯ ಸಿ. ಎಂ. ಉದಾಸಿ ಅವರ ಮರಣದಿಂದಾಗಿ ಉಪಚುನಾವಣೆಗಳು ನಡೆಯುತ್ತಿದೆ.

ಕೆ.ಆರ್. ಪೇಟೆ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ವಿಜಯೇಂದ್ರ ಅವರೇ ಹಾನಗಲ್ ಅಭ್ಯರ್ಥಿ ಎಂದು ಊಹಿಸಲಾಗಿತ್ತು.

ಇದನ್ನೂ ಓದಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ಮೂಲಗಳ ಪ್ರಕಾರ, ಹಾನಗಲ್‌‌ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯಲ್ಲಿ ದಿವಂಗತ ಮಾಜಿ ಶಾಸಕ ಸಿ.ಎಂ. ಉದಾಸಿಯವರ ಸೊಸೆ, ಹಾವೇರಿ-ಗದಗ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಉದಾಸಿ, ಕಲ್ಯಾಣ್ ಕುಮಾರ್ ಶೆಟ್ಟರ್ ಮತ್ತು ಶಿವರಾಜ್ ಸಜ್ಜನರ್‌ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಸಿಂದಗಿಯಲ್ಲಿ, 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಭೂಸನೂರ್, ಅಶೋಕ್ ಅಲ್ಲಾಪುರ, ಶಂಬುಲಿಂಗ ಕಕ್ಕಲಮೇಲಿ, ಸಿದ್ದು ಬಿರಾದಾರ್ ಮತ್ತು ಸಂಗನಗೌಡ ಪಾಟೀಲ್ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಜೆಡಿ(ಎಸ್) ಈಗಾಗಲೇ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಿಂದಗಿಯಲ್ಲಿ ಮತ್ತು ನಿಯಾಜ್ ಶೇಖ್ ಅವರನ್ನು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನಾಗಿ ಹೆಸರಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ದಿವಂಗತ ಎಂ.ಸಿ. ಮನಗೂಳಿ ಅವರ ಮಗ ಅಶೋಕ್ ಮನಗೂಳಿ ಅವರನ್ನು ಸಿಂದಗಿಯಿಂದ ಅಭ್ಯರ್ಥಿಯಾಗಿ ಅಂತಿಮಗೊಳಿಸಿದೆ. ಹಾನಗಲ್‌ನಲ್ಲಿ ಮಾಜಿ ಎಂಎಲ್‌ಸಿ ಶ್ರೀನಿವಾಸ್ ಮಾನೆ ಅವರನ್ನು ಅಭ್ಯರ್ಥಿಯಾಗಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...