Homeಮುಖಪುಟನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಉತ್ತರ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆಗಳು ಜರುಗುತ್ತಿದ್ದು, ಇದೇ ಸಂದರ್ಭದಲ್ಲಿ ಇಂದು ರಾಜ್ಯದ ಲಕ್ನೋಗೆ ಪ್ರಧಾನೀ ಮೋದಿಯವರು ಭೇಟಿ ನೀಡುತ್ತಿದ್ದಾರೆ. ಲಖಿಂಪುರ್‌ಗೆ ಹೊರಟು ಕಳೆದೊಂದು ದಿನದಿಂದ ಬಂಧನದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

“ಪ್ರಧಾನಿ ಮೋದಿಯವರೆ, ನೀವು ಆಜಾದಿ ಅಮೃತ್ ಮಹೋತ್ಸವಕ್ಕಾಗಿ ಲಕ್ನೋಗೆ ಬರುತ್ತಿದ್ದೀರಿ ಎಂದು ನಾನು ಕೇಳಿದೆ. ನೀವು ಈ ವಿಡಿಯೋವನ್ನು ನೋಡಿದ್ದೀರಾ?” ಎಂದು ಪ್ರಿಯಾಂಕ ಗಾಂಧಿ ವೈರಲ್ ವಿಡಿಯೋವೊಂದನ್ನು ತಮ್ಮ ಮೊಬೈಲ್‌ನಿಂದ ಪ್ರದರ್ಶಿಸಿದ್ದಾರೆ. ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ. ಇದು ಕೇಂದ್ರ ಸಚಿವನ ಕಾರೆಂದು ರೈತರು ಆರೋಪಿಸಿದ್ದಾರೆ.

“ರೈತರ ಮೇಲೆ ಕಾರು ಹರಿಸಿ ಕೊಂದ ಈ ಮನುಷ್ಯನನ್ನು ಏಕೆ ಇನ್ನೂ ಬಂಧಿಸಲಾಗಿಲ್ಲ? ಲಖಿಂಪುರ್ ಖೇರಿಗೆ ಭೇಟಿ ನೀಡಲು ಬಯಸುವ ನಮ್ಮಂತಹ ನಾಯಕರನ್ನು ಯಾವುದೇ ಎಫ್‌ಐಆರ್ ಅಥವಾ ಆದೇಶವಿಲ್ಲದೆ ಬಂಧಿಸಲಾಗಿದೆ? ಈ ಮನುಷ್ಯ ಏಕೆ ಮುಕ್ತನಾಗಿದ್ದಾನೆ ಎಂದು ತಿಳಿಯಲು ನಾನು ಬಯಸುತ್ತೇನೆ? ಎಂದು ಪ್ರಿಯಾಂಕ ಗಾಂಧಿ ವಿಡಿಯೋದಲ್ಲಿ ಹೇಳಿದ್ದಾರೆ.

ಕೇಂದ್ರ ಸಚಿವ ಅಜಯ್‌ ಮಿಶ್ರಾರವರನ್ನು ಏಕೆ ಇನ್ನು ಸಂಪುಟದಿಂದ ವಜಾ ಮಾಡಿಲ್ಲ? ರೈತರನ್ನು ಕೊಂದ ಕಾರು ಅವರದೇ ಆಗಿದೆ ಎಂದು ರೈತರು ಆರೋಪಿಸಿದ್ದಾರೆ. ಅವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರನ್ನು ಕೊಂದಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿಯವರೆ ಇಂದು ನೀವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೀರಿ. ನೆನಪಿರಲಿ ರೈತರಿಂದಲೇ ಈ ಸ್ವಾತಂತ್ರ್ಯ ನಮಗೆ ತಲುಪಿದ್ದು. ಇಂದಿಗೂ ರೈತರ ಮಕ್ಕಳು ಗಡಿಯಲ್ಲಿ ಕಾಯುತ್ತಿದ್ದಾರೆ. ನಮ್ಮ ರೈತರು ವರ್ಷದಿಂದಲೂ ಹೋರಾಟ ನಡೆಸುತ್ತಿದ್ದರೆ ನೀವು ಅವರನ್ನು ನಿರ್ಲಕ್ಷಿಸಿದ್ದೀರಿ ಎಂದು ಪ್ರಿಯಾಂಕ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ಇಂದು ಲಖಿಂಪುರ್‌ಗೆ ಬಂದು ರೈತರ ನೋವನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಒತ್ತಾಯಿಸಿತ್ತೇನೆ. ಈ ದೇಶದ ಆತ್ಮವಾದ ರೈತರನ್ನು ರಕ್ಷಿಸುವುದು ನಿಮ್ಮ ಕರ್ತವ್ಯವಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.

ಸೋಮವಾರ ಮುಂಜಾನೆ ಹತ್ಯೆಯಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರನ್ನು ಸೀತಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ನಂತರ ಅವರನ್ನು ಗೆಸ್ಟ್ ಹೌಸ್ ಒಂದರಲ್ಲಿ ಬಂಧಿಯಾಗಿಡಲಾಗಿದ್ದು, ಅಲ್ಲಿ ಅವರು ಕಸ ಗುಡಿಸಿ ಸ್ವಚ್ಛಗೊಳಿಸುವ ವಿಡಿಯೋ ಸಹ ವೈರಲ್ ಆಗಿತ್ತು.


ಇದನ್ನೂ ಓದಿ: ರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...