ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) ನ ಎಂಟನೇ ಸೀಸನ್ ಡಿಸೆಂಬರ್ 22 ರಂದು ಬೆಂಗಳೂರಿನಲ್ಲಿ ಆರಂಭವಾಗಲಿದೆ. ಆದರೆ, ಕೊರೊನಾ ಹಿನ್ನಲೆಯಲ್ಲಿ ಕ್ರೀಡಾಂಗಣದಲ್ಲಿ ಯಾವುದೇ ಪ್ರೇಕ್ಷಕರಿಲ್ಲದೆ ನಡೆಯಲಿದೆ. ಈ ಸೀಸನ್‌ನಲ್ಲಿ ಆಡುವ ಆಟಗಾರರ ಹರಾಜು ಆಗಸ್ಟ್ 29-31 ರಂದು ಮುಂಬೈನಲ್ಲಿ ನಡೆಸಲಾಗಿತ್ತು.
ಆಟಗಾರರು ಮತ್ತು ಎಲ್ಲಾ ಪಾಲುದಾರರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಈ ವರ್ಷ ಲೀಗ್ ಅನ್ನು ಬೆಂಗಳೂರಿನಲ್ಲಿ ಒಂದೇ ಸ್ಥಳದಲ್ಲಿ ನಡೆಸಲಾಗುವುದು ಎಂದು ಕ್ರೀಡಾಕೂಟದ ಆಯೋಜಕರಾದ ಮಾಶಾಲ್ ಸ್ಪೋರ್ಟ್ಸ್ ಹೇಳಿದೆ.
ಇದನ್ನೂ ಓದಿ: ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?
ಪಿಕೆಎಲ್ ಸೀಸನ್ 8 ರ ಕುರಿತು ಮಾತನಾಡಿದ ಮಾಶಾಲ್ ಸ್ಪೋರ್ಟ್ಸ್ ಸಿಇಒ ಅನುಪಮ್ ಗೋಸ್ವಾಮಿ, “ಉತ್ತಮ ಸುರಕ್ಷತೆಯೊಂದಿಗೆ ಸ್ಪರ್ಧಾತ್ಮಕ ಕ್ರೀಡಾಕೂಟಗಳನ್ನು ನಡೆಸಲು ಬೆಂಗಳೂರಿನಲ್ಲಿ ಎಲ್ಲಾ ಸೌಲಭ್ಯಗಳಿವೆ. ಪಿಕೆಎಲ್ ಸೀಸನ್ 8 ರ ಕ್ರೀಡಾಕೂಟಕ್ಕಾಗಿ ಎದುರು ನೋಡುತ್ತಿದ್ದೇವೆ..” ಎಂದು ಹೇಳಿದ್ದಾರೆ.
ಪ್ರೊ ಕಬಡ್ಡಿ ಪಂದ್ಯಾಟವು ರಾಜ್ಯದಲ್ಲಿ ನಡೆಯುತ್ತಿರುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ.
“ಕಬಡ್ಡಿ ಭಾರತದ ನಿಜವಾದ ಸ್ಥಳೀಯ ಕ್ರೀಡೆಯಾಗಿದೆ. ಅಲ್ಲದೆ ಇದು ಕರ್ನಾಟಕದಲ್ಲಿ ಬಹಳ ಜನಪ್ರಿಯವಾಗಿದೆ. ನಮ್ಮ ರಾಜ್ಯದಲ್ಲಿ ಮುಂಬರುವ ಪ್ರೊ ಕಬಡ್ಡಿ ಸೀಸನ್ 8 ರ ಪಂದ್ಯಾಟವನ್ನು ನಾವು ಸ್ವಾಗತಿಸುತ್ತೇವೆ ಮತ್ತು ಬೆಂಬಲಿಸುತ್ತೇವೆ” ಎಂದು ಬೊಮ್ಮಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳನ್ನು ಅನುಸುವುದಾಗಿ ಪ್ರೊ ಕಬಡ್ಡಿ ಸಂಘಟಕರು ಹೇಳಿದ್ದು, ಅದಕ್ಕಾಗಿ ಬಯೋ ಬಬಲ್ ಅನ್ನು ನಿರ್ಮಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?


