Homeಮುಖಪುಟಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ನಡೆದ ರೈತರ ಹತ್ಯೆಯು ಕೇಂದ್ರ ಸಚಿವ ಅಜಯ್‌‌ ಮಿಶ್ರಾ ಹಾಗೂ ಆತನ ಮಗ ಆಶೀಶ್‌ ಮಿಶ್ರಾನಿಂದ ನಡೆದ “ಅತ್ಯಂತ ಯೋಜಿತ ಪಿತೂರಿ” ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲು ಸೇರಿದ್ದ ರೈತರ ಮೇಲೆ ಭಾನುವಾರ ವಾಹನಗಳನ್ನು ಹತ್ತಿಸಿದಾಗ ಒಟ್ಟು ಎಂಟು ಜನರು ಸಾವನ್ನಪ್ಪಿದ್ದರು. ಸೋಮವಾರ ಎಫ್‌ಐಆರ್‌ ದಾಖಲಾಗಿತ್ತು.

ಆಶೀಶ್‌ ಮಿಶ್ರಾ ಹಾಗೂ ಇತರರ ಗುಂಪು ರೈತರ ಮೇಲೆ ವಾಹನ ಹತ್ತಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು. ಆದರೆ ಸಚಿವರು ರೈತರೇ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು ಎಂದು ಆರೋಪಿಸಿದ್ದರು.

ಇದನ್ನೂ ಓದಿರಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಮಿಶ್ರಾ ಅವರನ್ನು ಇನ್ನೂ ಬಂಧಿಸಲಾಗಿಲ್ಲ. “ರೈತರೊಂದಿಗೆ ಮಾತುಕತೆ, ಮರಣೋತ್ತರ ಪರೀಕ್ಷೆ ಹಾಗೂ ಅಂತ್ಯಸಂಸ್ಕಾರದ ಕಾರ್ಯದಲ್ಲಿ ಪಾಲ್ಗೊಂಡಿದ್ದರಿಂದ ಇನ್ನೂ ಬಂಧಿಸಲಾಗಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶದ ಬಹರಿಚ್‌‌ ಜಿಲ್ಲೆಯ ನನ್ಪರ ಜಿಲ್ಲೆಯ ಜಗಜೀತ್‌ ಸಿಂಗ್‌ ಅವರ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ಕೊಲೆ ಹಾಗೂ ನಿರ್ಲಕ್ಷ್ಯದಿಂದ ಸಾವು ಸೇರಿದಂತೆ ವಿವಿಧ ಕಾರಣಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

“ಮೂರು ವಾಹನಗಳಲ್ಲಿ ಆಶೀಶ್‌ ಮಿಶ್ರಾ ಹಾಗೂ ಶಸ್ತ್ರಸಜ್ಜಿತ 10-20 ಮಂದಿ ನುಗ್ಗಿದಾಗ ರೈತರು ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದರು” ಎಂದು ಎಫ್‌ಐಆರ್‌ ಹೇಳಿದೆ. ಆತ ಎಡಬದಿಯಲ್ಲಿ ಕುಳಿತ್ತಿದ್ದಾಗ ಗುಂಡು ಹಾರುತ್ತಲೇ ಇದ್ದನು. ಜನರನ್ನು ಮೇಲೆ ಹರಿಯುತ್ತಲೇ ವಾಹನ ಮುನ್ನಡೆಯಿತು” ಎಂದು ಎಫ್‌ಐಆರ್‌ ಉಲ್ಲೇಖಿಸಿದೆ.

“ಗುಂಡು ಹಾರಿಸಿದ್ದರಿಂದ ಗುರ್‍ವಿಂದರ್‌ ಸಿಂಗ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಬದಿಯಲ್ಲಿದ್ದ ರೈತರನ್ನು ಅಪ್ಪಚ್ಚಿ ಮಾಡುತ್ತಾ ವಾಹನ ವೇಗವಾಗಿ ಚಲಿಸಿತು. ರೈತರನ್ನು ಛಿದ್ರಛಿದ್ರ ಮಾಡಿದ ನಂತರ, ನಿಯಂತ್ರಣ ಕಳೆದುಕೊಂಡ ವಾಹನ ಕಂದಕಕ್ಕೆ ಉರುಳಿದೆ” ಎಂದು ಹೇಳಲಾಗಿದೆ.

“ಇಲ್ಲಿಯವರೆಗೆ ಬಂದ ಮಾಹಿತಿಯ ಪ್ರಕಾರ, ನಾಲ್ಕು ರೈತರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ” ಎಂದು ಎಫ್ಐಆರ್ ಹೇಳಿದೆ. ಸಚಿವರ ಮಗನ ಹೆಸರನ್ನು ಎಫ್‌ಐಆರ್ ಸೇರಿಸಲಾಗಿದೆ. ಘಟನೆಯ ಬಳಿಕ ಜನರು ಕಬ್ಬಿನ ಹೊಲಕ್ಕೆ ಓಡಿಹೋದರು ಮತ್ತು ಗುಂಡು ಹಾರಿಸುವುದನ್ನು ಮುಂದುವರಿಸಲಾಗಿತ್ತು” ಎಂದು ತಿಳಿಸಲಾಗಿದೆ. ಕೇಂದ್ರ ಸಚಿವರ ವಿಡಿಯೋ ಕೂಡ ಎಫ್‌ಐಆರ್‌ನ ಭಾಗವಾಗಿದೆ.

“ಭಾನುವಾರದ ಘಟನೆಯ ಹಿಂದಿನ ದಿನ, ಕೇಂದ್ರ ಸಚಿವರು ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದರು” ಎಂದು ಎಫ್ಐಆರ್ ಹೇಳಿದೆ. “ಸಚಿವರು ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.”

ವೀಡಿಯೊದಲ್ಲಿ, ಪ್ರತಿಭಟನಾ ನಿರತ ರೈತರನ್ನು ‘ಸರಿದಾರಿಗೆ ತರುವ ಬಗ್ಗೆ’ ಸಚಿವರು ಮಾತನಾಡಿದ್ದರು. “ನಿಮ್ಮ ಮಾರ್ಗಗಳನ್ನು ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ನಾವು ಅವುಗಳನ್ನು ಸರಿಪಡಿಸುತ್ತೇವೆ” ಎಂದು ಅವರು ಹೇಳಿದ್ದರು. “ಸರಿಪಡಿಸುವ ಕಾರ್ಯ ಕೇವಲ ಎರಡು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.” ಎಂದಿದ್ದರು.

ಸ್ಥಳೀಯರು ನೀಡಿದ ದೂರಿನ ಅನ್ವಯ, ನಾಲ್ಕು ಜನರನ್ನು ಹೊಡೆದು ಸಾಯಿಸಿದ ಆರೋಪದ ಮೇಲೆ ಸುಮಿತ್ ಜೈಸ್ವಾಲ್ ಎಂದು ಗುರುತಿಸಲಾಗಿರುವ ವ್ಯಕ್ತಿಯ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302 (ಕೊಲೆ), 323 (ಸ್ವಯಂಪ್ರೇರಿತವಾಗಿ ಹಿಂಸಾಕೃತ್ಯ), 336 (ಇತರರ ಜೀವನ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ತರುವ ಕ್ರಿಯೆ) ಆಪಾದನೆಗಳನ್ನು ಹೊರಿಸಲಾಗಿದೆ. ಈ ಪ್ರಕರಣದ ತನಿಖೆಗೆ ಇಬ್ಬರು ಉಪ ಅಧೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

ಇದನ್ನೂ ಓದಿರಿ: ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...