Homeಮುಖಪುಟರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

- Advertisement -
- Advertisement -

ಜುಲೈನಲ್ಲಿ ಕ್ಯಾಬಿನೇಟ್‌ ಪುನರ್‌ ರಚನೆಯಾದಾಗ ಕೇಂದ್ರದ ಸಂಪುಟ ಸೇರಿರುವ ಅಜಯ್‌ ಮಿಶ್ರಾ ಅವರು ಉತ್ತರ ಪ್ರದೇಶದಿಂದ ಸಂಪುಟಕ್ಕೆ ಆಯ್ಕೆಯಾದ ಏಳು ಮಂದಿಯಲ್ಲಿದ್ದ ಒಬ್ಬರೇ ಒಬ್ಬರು ಬ್ರಾಹ್ಮಣ ಪ್ರತಿನಿಧಿಯಾಗಿದ್ದಾರೆ.

ರೈತರ ಮೇಲೆ ವಾಹನ ಚಲಾಯಿಸಿ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಕೊಂದಿದ್ದಾರೆ ಎಂಬ ಆರೋಪ ಬಂದಿದ್ದು, ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆಯಬೇಕು ಎಂಬ ಆಗ್ರಹ ಕೇಳಿಬಂದಿದೆ. ಒಂದು ವೇಳೆ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ತೆಗೆದರೆ ಎದುರಾಗುವ ಬ್ರಾಹ್ಮಣ ಪ್ರಾತಿನಿಧ್ಯವನ್ನು ಸರಿದೂಗಿಸುವುದು ಹೇಗೆ ಎಂಬ ಬಿಕ್ಕಟ್ಟು ಬಿಜೆಪಿಗೆ ಎದುರಾಗಿದೆ.

ಸಂಪುಟಕ್ಕೆ ಸೇರಿದ ಉತ್ತರ ಪ್ರದೇಶದ ಏಳು ಮಂದಿಯಲ್ಲಿ ಆರು ಮಂದಿ ಓಬಿಸಿ ಹಾಗೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೆಚ್ಚಿನ ಹೊಸ ಮುಖಗಳು ಸಂಸತ್ತಿನಲ್ಲಿ ಯಾವುದೇ ಅಭೂತಪೂರ್ವ ಸಾಧನೆಯನ್ನು ಮಾಡಿದವರಾಗಿರಲಿಲ್ಲ. ಹೇಳಬೇಕೆಂದರೆ ತಮ್ಮ ಕ್ಷೇತ್ರಗಳ ಹೊರಗೆ ಅಷ್ಟೇನೂ ಈ ಹೊಸ ಮುಖಗಳು ತಿಳಿದಿರಲಿಲ್ಲ. ಆದಾಗ್ಯೂ, ಮಿಶ್ರಾ ಅವರ ಸೇರ್ಪಡೆ ಹೆಚ್ಚಿನ ಗಮನ ಸೆಳೆಯಿತು. ಏಕೆಂದರೆ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪನಾಯಕರನ್ನಾಗಿ ನೇಮಿಸಲಾಯಿತು.

ಇದನ್ನೂ ಓದಿರಿ: ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಉತ್ತರ ಪ್ರದೇಶದಲ್ಲಿ ಬಿಜೆಪಿ ಬ್ರಾಹ್ಮಣ ವಿರೋಧಿಯಾಗಿದೆ ಎಂಬ ಆರೋಪವನ್ನು ತೊಳೆದು ಹಾಕಲು ಮಿಶ್ರಾ ಅವರನ್ನು ಕ್ಯಾಬಿನೇಟ್‌ಗೆ ಸೇರಿಸಲಾಯಿತು. ಠಾಕೂರ್‌ ಜಾತಿಗೆ ಸೇರಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬ್ರಾಹ್ಮಣರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬ ಟೀಕೆಗಳು ಈ ಹಿಂದಿನ ವರ್ಷಗಳಲ್ಲಿ ಕೇಳಿಬಂದಿದ್ದವು.

2022ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕೇಸರಿ ಪಕ್ಷವಾದ ಬಿಜೆಪಿ, ಮೇಲ್ಜಾತಿಯನ್ನು, ಯಾದವರಲ್ಲದ ಓಬಿಸಿಗಳನ್ನು ಜಾಠವರಲ್ಲದ ದಲಿತರನ್ನು ತನ್ನ ಹಿಡಿತಕ್ಕೆ ತರಲು ಯತ್ನಿಸಿದೆ. ಆದರೆ ಕೆಲವೇ ತಿಂಗಳಲ್ಲಿ ಮಿಶ್ರಾ ಅವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ ಅವರ ಹಾದಿಗೆ ಮುಳ್ಳಾಗಿ ಪರಿಣಮಿಸಿದ್ದಾರೆ. ಅಜಿತ್‌ ಮಿಶ್ರಾ ಅವರ ಮಗ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು, ರೈತರ ಕೊಲೆಯಲ್ಲಿ ಹೆಸರು ಕೇಳಿಬಂದಿರುವುದು ಬಿಜೆಪಿಗೆ ಅಘಾತ ತಂದಿದೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದೆ. ಸಾವನ್ನಪ್ಪಿದ ರೈತ ಕುಟುಂಬಗಳಿಗೆ 45 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ನಾಗರಿಕ ಸಮಾಜ ಹಾಗೂ ವಿರೋಧ ಪಕ್ಷಗಳ ವಿರೋಧಕ್ಕೆ ಘಟನೆ ಗುರಿಯಾಗಿದ್ದು, ಉತ್ತರ ಪ್ರದೇಶ ಪೊಲೀಸರು, ಆಶೀಶ್‌ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ. ಈ ಘಟನೆ ಬಿಜೆಪಿಯ ಮೇಲೆ ಚುನಾವಣೆಯ ಸಂದರ್ಭದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನಲಾಗಿದೆ.

ರೈತರ ಕುಟುಂಬದಲ್ಲಿ ಜನಿಸಿದ ಮಿಶ್ರಾ ಅವರ ರಾಜಕೀಯ ವೃತ್ತಿಜೀವನ ವಿವಾದಗಳಿಂದ ಕೂಡಿದೆ. ರಾಜಕೀಯಕ್ಕೆ ಧುಮುಕುವ ಮುನ್ನ ಕಾನೂನು ಅಭ್ಯಾಸ ಮಾಡಿದ್ದರು. ಮುಂದೆ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಹಿಂದಿ ದಿನಪತ್ರಿಕೆಯಾದ ನವಭಾರತ್ ಟೈಮ್ಸ್ ಪ್ರಕಾರ 2000ರಲ್ಲಿ ಕೊಲೆ ಪ್ರಕರಣದಲ್ಲಿ ಮಿಶ್ರಾ ಆರೋಪಿಯಾಗಿದ್ದರು. ಆದರೆ 2004ರಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರು. 2012ರಲ್ಲಿ ನಿಗಾಸಸ್‌ನಿಂದ ಶಾಸಕರಾಗಿ ಆಯ್ಕೆಯಾದರು. ನಾಲ್ಕು ವರ್ಷಗಳ ಅವಧಿಯಲ್ಲಿ , ಅವರು 2014ರಲ್ಲಿ ಲಖಿಂಪುರ್ ಖೇರಿಯಿಂದ ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದರು. ಅವರು 2014 ಮತ್ತು 2019ರ ಸಂಸತ್ ಚುನಾವಣೆಗಳಲ್ಲಿ ಭಾರೀ ಅಂತರದಿಂದ ಗೆದ್ದರು, ಯುಪಿಯಲ್ಲಿ ಪ್ರಸ್ತುತ ಬ್ರಾಹ್ಮಣ ಮುಖವನ್ನು ಹುಡುಕುತ್ತಿದ್ದಾಗ ಬಿಜೆಪಿ ನಾಯಕತ್ವದ ವಿಶ್ವಾಸವನ್ನು ಗಳಿಸಿದರು. ಒಂದು ದಶಕದಲ್ಲಿ ಬ್ರಾಹ್ಮಣ ನಾಯಕನಾಗಿ ಬೆಳೆದಿದ್ದಾರೆ. ಆದರೆ ರೈತರ ಹತ್ಯೆಯಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿರುವುದು ಒತ್ತಡಕ್ಕೆ ಸಿಲುಕಿದ್ದಾರೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...