’ಆರ್‌ಎಸ್‌ಎಸ್ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ. ನಮ್ಮ ಹೋರಾಟ ಆರ್‌ಎಸ್‌ಎಸ್ ವಿರುದ್ಧ’ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ’ಉತ್ತರ ಪ್ರದೇಶದ ಲಖಿಂಪುರದಲ್ಲಿ ರೈತರ ಮೇಲೆ ನಡೆದಿರುವ ದೌರ್ಜನ್ಯ ದೇಶದಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿದೆ. ದೇಶದ ಅನ್ನದಾತರ ಮೇಲೆ ಉತ್ತರ ಪ್ರದೇಶ, ಹರಿಯಾಣ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ದೌರ್ಜನ್ಯ ನಡೆಸುತ್ತಿವೆ” ಎಂದು ಆರೋಪಿಸಿದ್ದಾರೆ.
ಮುಂದುವರಿದು “ನಮ್ಮ ಹೋರಾಟ ಆರ್‌ಎಸ್‌ಎಸ್ ವಿರುದ್ಧ. ಇದು ಮುಚ್ಚಿಡುವಂತದ್ದಲ್ಲ. ಇದಕ್ಕಾಘಿ ನಾನು ಚುನಾವಚಣೆಯನ್ನು ಸೋತಿದ್ದೇನೆ” ಎಂದಿದ್ದಾರೆ.
ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು
Live from KPCC https://t.co/7hm8fJwonj
— Karnataka Congress (@INCKarnataka) October 6, 2021
“ಆರ್‌ಎಸ್‌ಎಸ್ ಎಂದಿಗೂ ಬಡವರ ಪರವಾಗಿಲ್ಲ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿಲ್ಲ. ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಆರ್‌ಎಸ್‌ಎಸ್ ಪುಸ್ತಕಗಳನ್ನು ಓದಿ ನಿಮಗೆ ಅರ್ಥವಾಗುತ್ತದೆ. ನಾನು 16ನೇ ವಯಸ್ಸಿನಿಂದಲೇ ಆರ್‌ಎಸ್‌ಎಸ್ ವಿರುದ್ಧ ಹೋರಾಡುತ್ತಿದ್ದೇನೆ. ಮುಂದೆಯೂ ಹೋರಾಡುತ್ತೇನೆ. ಆರ್‌ಎಸ್‌ಎಸ್ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ನಾನು ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು” ಎಂದು ಹೇಳಿದ್ದಾರೆ.
ಜೊತೆಗೆ, “ಮೋದಿಯವರು ನಿನ್ನೆ ಲಕ್ನೋದಲ್ಲೇ ಇದ್ದರೂ ಅವರು ರೈತರ ಕುಟುಂಬಕ್ಕೆ ಸಾಂತ್ವನ ಹೇಳುವ ಪ್ರಯತ್ನ ಮಾಡದೇ ನಿರ್ಲಕ್ಷಿಸಿದ್ದಾರೆ. ರೈತರ ಬಗ್ಗೆ ಇರುವ ಕಾಳಜಿಗೆ ಸಾಕ್ಷಿ. ಪ್ರಿಯಾಂಕಾ ಗಾಂಧಿ ಅವರನ್ನು ಯಾಕೆ ಕಾನೂನು ಬಾಹಿರವಾಗಿ ಬಂಧಿಸಿದ್ದೀರಿ ಎಂಬ ಪ್ರಶ್ನೆಯನ್ನೂ ಮಾಡಿಲ್ಲ. ನಂತರ ಪ್ರಿಯಾಂಕಾ ಗಾಂಧಿ ಅವರೇ, ‘ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಿದ್ದಾರೆ ಈ ಬಗ್ಗೆ ಗಮನಹರಿಸಿ’ ಎಂದು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳುವವರನ್ನು ಬಂಧಿಸುವವರಿಂದ, ಕೇಂದ್ರ ಸಚಿವರ ಮಗನ ಬಂಧನ ಆಗಿಲ್ಲ ಯಾಕೆ? ರೈತರ ಮೇಲೆ ಹರಿದ ಕಾರಿನಲ್ಲಿ ಆತ ಇದ್ದ ಎಂಬ ಆರೋಪ ಇದೆ. ಆದರೂ ಅವರನ್ನು ಬಂಧಿಸಲಾಗಿಲ್ಲ ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: RSS ಬೆಂಬಲಿತ ಶಾಲೆಗಳು ಕೋಮು ದ್ವೇಷವನ್ನು ಬೆಳೆಸುತ್ತವೆ: ದಿಗ್ವಿಜಯ್ ಸಿಂಗ್


