Homeಚಳವಳಿಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

- Advertisement -
- Advertisement -

ನವರಾತ್ರಿಗೆ ತಯಾರಾಗುತ್ತಿರುವ ಕೊಲ್ಕತ್ತಾದಲ್ಲಿ ದುರ್ಗಾ ಪೂಜೆ ಮಂಟಪಗಳನ್ನು ವಿಭಿನ್ನವಾಗಿ ಅಲಂಕರಿಸಲಾಗುತ್ತಿದೆ. ಉತ್ತರ ಕೊಲ್ಕತ್ತಾದ ಸ್ಥಳೀಯ ಕ್ಲಬ್‌ವೊಂದು, ಸುಮಾರು ಒಂದು ವರ್ಷದಿಂದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟವನ್ನು ಗೌರವಿಸುವ ಮೂಲಕ ದುರ್ಗಾ ಪೂಜೆಯನ್ನು ಆಚರಿಸುತ್ತಿದೆ.

ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ರಚಿಸಿರುವ ಬೃಹತ್ ಕಲಾಕೃತಿಗಳು ರೈತರ ಸಂಕಷ್ಟವನ್ನು ಚಿತ್ರಿಸುತ್ತವೆ. ಇದರ ಜೊತೆಗೆ ಭಾನುವಾರ ನಡೆದ ಯುಪಿಯ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡವನ್ನು ತೀವ್ರವಾಗಿ ಟೀಕಿಸಿ ಚಿತ್ರಗಳನ್ನು ರಚಿಸಲಾಗಿದೆ.

ಡುಮ್‌ಡಮ್ ಉದ್ಯಾನವನದ ಭಾರತ ಚಕ್ರ ಪೆಂಡಾಲ್‌ನಲ್ಲಿ ಪ್ರವೇಶದ್ವಾರದಲ್ಲಿ ಟ್ರ್ಯಾಕ್ಟರ್‌ನ ಬೃಹತ್ ಪ್ರತಿರೂಪವನ್ನು ರಚಿಸಲಾಗಿದೆ. ಗೋಡೆ ಮೇಲೆ ಬಿಡಿಸಲಾಗಿರುವ ಭಿತ್ತಿ ಚಿತ್ರಗಳಲ್ಲಿ ಕಾರು ರೈತನ ಮೇಲೆ ಹರಿದು ಹೋಗುತ್ತಿರುವ ಚಿತ್ರವಿದೆ.

ಇದನ್ನೂ ಓದಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ದೊಡ್ಡ ಟ್ಯ್ರಾಕ್ಟರ್‌ ಮೇಲೆ ದೊಡ್ಡ ರೆಕ್ಕೆಗಳನ್ನು ರಚಿಸಲಾಗಿದ್ದು, ಈ ರೆಕ್ಕೆಗಳಲ್ಲಿ ಪ್ರತಿಭಟನೆ ವೇಳೆ ಹುತಾತ್ಮರಾದ ರೈತರ ಹೆಸರುಗಳನ್ನು ಬರೆಯಲಾಗಿದೆ ಎಂದು ಈ ಕಲಾಕೃತಿಗಳನ್ನು ರಚಿಸಿರುವ ಕಲಾವಿದ ಅನಿರ್ಬನ್ ದಾಸ್ ಹೇಳಿದ್ದಾರೆ.

ಪೋಲಿಸರ ಹಲ್ಲೆಗಳಿಂದ ತಪ್ಪಿಸಿಕೊಳ್ಳುವಾಗ ಪ್ರತಿಭಟನಾಕಾರರು ತಮ್ಮ ಚಪ್ಪಲಿಗಳನ್ನು ಕಳೆದುಕೊಂಡು ಕಾಲ್ನಡಿಗೆಯಲ್ಲಿ ಆಂದೋಲನ ನಡಸುವುದನ್ನು ಸಂಕೇತಿಸಲು ನೂರಾರು ಚಪ್ಪಲಿಗಳನ್ನು ಇಳಿಬಿಡಲಾಗಿದೆ.  ಮುಖ್ಯ ಪೆಂಡಾಲ್‌ನ ಛಾವಣಿಯನ್ನು ಭತ್ತದಿಂದ ಅಲಂಕರಿಸಲಾಗಿದೆ. ದೆಹಲಿಯಲ್ಲಿರುವ ಮಾದರಿಯ ಬ್ಯಾರಿಕೇಡ್‌ಗಳನ್ನು ತಯಾರಿಸಿ ಇಲ್ಲಿ ಇರಿಸಲಾಗಿದೆ.

“ನಾವು ರೈತರು, ಭಯೋತ್ಪಾದಕರಲ್ಲ. ರೈತರು ಆಹಾರ ನೀಡುವ ಸೈನಿಕರು” ಎಂದು ಪೋಸ್ಟರ್‌ನಲ್ಲಿ, ಬರೆಯಲಾಗಿದೆ.

ಪೂಜಾ ಸಮಿತಿಯ ಕಾರ್ಯದರ್ಶಿ ಪ್ರತೀಕ್ ಚೌಧರಿ ಅವರು ರೈತರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಎತ್ತಿ ತೋರಿಸಲು ಬಯಸಿದ್ದೇವೆ ಎಂದಿದ್ದಾರೆ.

“1946-47ರಲ್ಲಿ ತೆಭಾಗ (Tebhaga movement)ಚಳುವಳಿಯ ದಿನಗಳಿಂದ ಹಿಡಿದು ಇತ್ತೀಚಿನ ಮೂರು ಕಾರ್ಪೊರೇಟ್ ಪರ ಕೃಷಿ ಮಸೂದೆಗಳ ವಿರುದ್ಧದ ಆಂದೋಲನದವರೆಗೆ, ನಮಗೆ ಆಹಾರವನ್ನು ಒದಗಿಸುವ ರೈತರ ಕಥೆಯನ್ನು ಹೇಳಲು ನಾವು ಪ್ರಯತ್ನಿಸಿದ್ದೇವೆ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ನಾಲ್ಕು ರೈತರ ಮೇಲೆ ಕಾರು ಹರಿಸಿ ಕೊಲೆ ಮಾಡಿರುವ ಘಟನೆ ನಮ್ಮ ಪೆಂಡಾಲ್ ಬಹುತೇಕ ಸಿದ್ಧವಾಗಿದ್ದಾಗ ಸಂಭವಿಸಿದೆ. ಆದರೂ, ನಾವು ಅದನ್ನು ಸೇರಿಸಿದ್ದೇವೆ” ಎಂದು ಚೌಧರಿ ಹೇಳಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...