ಪೆಟ್ರೋಲ್-ಡೀಸೆಲ್-ಗ್ಯಾಸ್ ಬೆಲೆ ಏರಿಕೆ ನಿರಂತರವಾಗಿ ಮುಂದುವರೆದಿದೆ. ಇಂದೂ ಕೂಡ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಮೇಲೆ 31 ಪೈಸೆ ಏರಿಕೆಯಾಗಿದ್ದು 106.83 ರೂಗೆ ತಲುಪಿದೆ. ಅದೇ ರೀತಿ ಡೀಸೆಲ್ 37 ಪೈಸೆಯಷ್ಟು ಏರಿಕೆಯಾಗಿದ್ದು 97.40ರೂಗೆ ತಲುಪಿದೆ. ಕಳೆದ 10 ದಿನಗಳಲ್ಲಿ ಕರ್ನಾಟಕದಲ್ಲಿ 8 ಬಾರಿ ಬೆಲೆ ಏರಿಕೆ ಕಂಡಿದೆ.

ಮಾಹಿತಿ ಮೂಲ: ಗುಡ್ ರಿಟರ್ನ್ಸ್
ದೇಶದಲ್ಲಿಯೇ ಅತಿ ಹೆಚ್ಚಿನ ಇಂಧನ ಬೆಲೆ ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಪೆಟ್ರೋಲ್ ಬೆಲೆ ಇಂದು 109.25 ರೂಗೆ ಮುಟ್ಟಿದೆ. ಡೀಸೆಲ್ ಬೆಲೆ 99.55 ರೂಗೆ ತಲುಪಿದ್ದು 100 ರ ಗಡಿಯಲ್ಲಿದೆ.
ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆಗಳು ದಿನನಿತ್ಯ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಮತ್ತು ರುಪಾಯಿ ಡಾಲರ್ ವಿನಿಮಯ ದರದ ಆಧಾರದಲ್ಲಿ ಬೆಲೆ ನಿಗಧಿಯಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಗೆ ತರಲಾಗುತ್ತದೆ.
ಇನ್ನು ಬುಧವಾರ ಅಡುಗೆ ಸಿಲಿಂಡರ್ ಗ್ಯಾಸ್ ಬೆಲೆ ಸಹ 15 ರೂ ಹೆಚ್ಚಳ ಮಾಡಲಾಗಿದೆ. 14.2 ಕೆಜಿಯ ಸಿಲಿಂಡರ್ ಬೆಲೆ ಕರ್ನಾಟಕದಲ್ಲಿ 902.5 ರೂ ಆಗಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ಕನೇ ಬಾರಿ ಗ್ಯಾಸ್ ಬೆಲೆ ಏರಿಕೆ ಮಾಡಲಾಗಿದೆ.
ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 37 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 32.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 28 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 106ರೂ ದಾಟುತ್ತದೆ.
ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: 100 ಗಂಟೆಯಾದರೂ ಆರೋಪಿಗಳ ಬಂಧನವಿಲ್ಲ – ರೈತರ ಆಕ್ರೋಶ


