ಅತ್ಯಾಚಾರ ಯತ್ನವನ್ನು ವಿರೋಧಿಸಿದ ಮಹಿಳೆಯೊಬ್ಬರನ್ನು ಜೀವಂತವಾಗಿ ಸುಟ್ಟು ಹಾಕಿದ ಘಟನೆ ಕಳೆದ ಭಾನುವಾರ ರಾತ್ರಿ ಯಾದಗಿರಿ ಜಿಲ್ಲೆಯಲ್ಲಿ ನಡೆದಿತ್ತು. ಪ್ರಮುಖ ಆರೋಪಿ ಘಟನೆಯ ಪೊಲೀಸರ ಮುಂದೆ ಶರಣಾಗಿದ್ದನು. ಇದೀಗ ಕೃತ್ಯಕ್ಕೆ ಸಹಕರಿಸಿದ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
‘ಆರೋಪಿ ಸುರಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು’ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಂಗಳವಾರ ತಿಳಿಸಿದ್ದರು.
ಅಕ್ಟೋಬರ್ 3 ರ ಭಾನುವಾರ ರಾತ್ರಿ, ಸುರಪುರ ತಾಲೂಕಿನ ತನ್ನ ಮನೆಯಲ್ಲಿ ನಡೆದ ಅತ್ಯಾಚಾರ ಯತ್ನವನ್ನು ವಿರೋಧಿಸಿದ ಮಹಿಳೆಯನ್ನು ಸಜೀವವಾಗಿ ಸುಟ್ಟುಹಾಕಲಾಗಿದೆ. ಪೊಲೀಸರು ಆರೋಪಿಯನ್ನು ಚೌಡೇಶ್ವರಿಹಾಲ್ ಗ್ರಾಮದ ನಿವಾಸಿ ಗಂಗಪ್ಪ ಬಸಪ್ಪ ಆರೋಲಳ್ಳಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಯಾದಗಿರಿ: ಅತ್ಯಾಚಾರ ವಿರೋಧಿಸಿದ ಮಹಿಳೆಯನ್ನು ಜೀವಂತ ಸುಟ್ಟ ದುಷ್ಕರ್ಮಿ
‘‘ಆರೋಪಿಯು ತಡರಾತ್ರಿ ಸಂತ್ರಸ್ತೆಯ ಮನೆಗೆ ನುಗ್ಗಿ, ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಇದನ್ನು ವಿರೋಧಿಸಿದ್ದರಿಂದ, ತನ್ನ ಮೋಟಾರ್ ಬೈಕ್‌ನಿಂದ ಇಂಧನವನ್ನು ತಂದು ಮಹಿಳೆಯ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ” ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಹೇಳಿದ್ದಾರೆ.
ಸಂತ್ರಸ್ತೆಯನ್ನು ಅಕ್ಟೋಬರ್ 4 ರ ಬೆಳಿಗ್ಗೆ ಸುರಪುರ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚೇತರಿಸದೆ, ಅವರ ಪರಿಸ್ಥಿತಿ ಹದಗೆಟ್ಟ ಕಾರಣ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅದೇ ದಿನ ಸಂಜೆ ಅವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
“ಆರೋಪಿಯು, ಒಂದು ವರ್ಷದಿಂದ ಹೊಲ ಅಥವಾ ಶೌಚಾಲಯಕ್ಕೆ ಹೋದಾಗೆಲ್ಲಾ ನನ್ನ ಸಹೋದರಿಯನ್ನು ಹಿಂಬಾಲಿಸುತ್ತಿದ್ದನು. ಈ ಕಿರುಕುಳದ ಬಗ್ಗೆ ಗ್ರಾಮದ ಮುಖ್ಯಸ್ಥರಿಗೆ ತಿಳಿಸಲಾಗಿತ್ತಾದರೂ ಏನೂ ಪ್ರಯೋಜನವಾಗಿಲ್ಲ” ಎಂದು ಕೊಲೆಗೀಡಾದ ಮಹಿಳೆಯ ಸಹೋದರಿ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿಯಲ್ಲಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆಯನ್ನು ಬೆತ್ತಲಾಗಿಸಿ ಅವರ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿ ಮೃಗೀಯವಾಗಿ ವರ್ತಿಸಿದ್ದರು. ಈ ವಿಡಿಯೊ ಇತ್ತೀಚೆಗೆ ವೈರಲ್ ಆಗಿ, ಭಾರಿ ಆಕ್ರೋಶ ಉಂಟುಮಾಡಿತ್ತು. ಈ ಹಿನ್ನಲೆಯಲ್ಲಿ ಪ್ರಕರಣದ ದಾಖಲಿಸಿದ್ದ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದರು.
ಇದನ್ನೂ ಓದಿ: ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ
ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೆ, ಅವರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿ ಅವರೊಂದಿಗೆ ಮೃಗೀಯವಾಗಿ ವರ್ತಿಸಿರುವ ಘಟನೆ ರಾಜ್ಯದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ



Atyachara, ittichige hecchagutiruvdakke yenu kaarna haagu idaannu tadeyalu yenu krama tegedukollabeku, idara bagge bareiri.