Homeಚಳವಳಿರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರ ಸಾವಿಗೆ ಪ್ರತಿರೋಧ ವ್ಯಕ್ತಪಡಿಸಲು ರೈತ ಸಂಘಟನೆಗಳು ಅಕ್ಟೋಬರ್ 18 ರಂದು ‘ರೈಲ್ ರೋಕೋ’ ಮತ್ತು ಅಕ್ಟೋಬರ್ 26 ರಂದು ಲಖನೌದಲ್ಲಿ ಮಹಾಪಂಚಾಯತ್ ನಡೆಸಲಿವೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು. ಎಫ್‌ಐಆರ್‌ನಲ್ಲಿ ಕೊಲೆ ಆರೋಪಿ ಎಂದು ಹೆಸರಿಸಲಾಗಿರುವ ಅವರ ಮಗ ಆಶಿಶ್ ಮಿಶ್ರಾರನ್ನು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ಒತ್ತಾಯಿಸಿದ್ದಾರೆ.

“ದೇಶದಾದ್ಯಂತದ ರೈತರು ಅಕ್ಟೋಬರ್ 12 ರಂದು ಲಖಿಂಪುರ್ ಖೇರಿಯನ್ನು ತಲುಪುತ್ತಾರೆ. ಎಲ್ಲಾ ಸಂಘ ಸಂಸ್ಥೆಗಳಿಗೂ ಸಂಸ್ಥೆಗಳು ತಮ್ಮ ನಗರಗಳಲ್ಲಿ ರಾತ್ರಿ 8 ಗಂಟೆಗೆ (ಅಕ್ಟೋಬರ್ 12 ರಂದು) ಕ್ಯಾಂಡಲ್  ಮಾರ್ಚ್ ಕೈಗೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಮೃತಪಟ್ಟ ರೈತರ ಚಿತಾಭಸ್ಮದೊಂದಿಗೆ ರೈತರು ಪ್ರತಿ ರಾಜ್ಯಕ್ಕೆ  ಹೋಗುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

“ಅಕ್ಟೋಬರ್ 18 ರಂದು ನಾವು ದೇಶಾದ್ಯಂತ ‘ರೈಲ್ ರೋಕೋ’ ನಡೆಸುತ್ತೇವೆ. ಅ.26 ರಂದು ಲಕ್ನೋದಲ್ಲಿ ಬೃಹತ್ ಕಿಸಾನ್ ಮಹಾಪಂಚಾಯತ್ ನಡೆಯಲಿದೆ” ಎಂದು ಘೋಷಿಸಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಕಡೆಗಳಿಂದ ಒತ್ತಡ ಹೆಚ್ಚಾದ ಕಾರಣದಿಂದಾಗ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಶನಿವಾರ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ನಾಲ್ವರ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು.

ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಶ್ ಮಿಶ್ರಾ ಮತ್ತು 15 ರಿಂದ 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿ ಪ್ರಕರಣಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ...

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಮ್ಮುಖದಲ್ಲಿ 10 ನಕ್ಸಲರು ಶರಣಾಗತಿ: ಮುಖ್ಯವಾಹಿನಿಗೆ ಬಂದವರಿಗೆ ಸಂವಿಧಾನ ಪ್ರತಿ ನೀಡಿದ ಸಿಎಂ

ಡಿಸೆಂಬರ್ 7 ರಂದು, ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿ ನಕ್ಸಲರು ಬಾಲಘಾಟ್ ಜಿಲ್ಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಮುಖ್ಯವಾಹಿನಿಗೆ ಬಂದರು. ಶರಣಾಗತಿಯಾದ ನಕ್ಸಲರ ಬಳಿ ಇದ್ದ,...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...