ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ನಡೆಸುತ್ತಿರುವ ಟ್ವಿಟರ್ ಅಭಿಯಾನ ಈಗ ಟ್ರೆಂಡ್ ಆಗಿದೆ. ಯುಪಿಎಸ್‌ಸಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾವಿರಾರು ಜನರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಅಭಿಯಾನವನ್ನು ಇನ್ನು ಹೆಚ್ಚಿನ ಮಟ್ಟಕ್ಕೆ ಜೈಜೋಡಿಸಿ ಎಂದು ಕನ್ನಡ ಮನಸ್ಸುಗಳು ಮನವಿ ಮಾಡಿವೆ. #ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಟ್ವೀಟ್ ಮಾಡಲು ಕರವೇ ತಿಳಿಸಿದೆ.
Can @PMOIndia tell the people of India why students can take Union government exams in only English and Hindi .
Why not in Kannada, Tamil, Telugu, Bengali, Marathi etc? Are students of other states second class citizens?
#ServeInMyLanguage ||
#UPSCInKannada ||#ಕನ್ನಡದಲ್ಲಿUPSC pic.twitter.com/BlWvW0W4en— Deepak || ದೀಪಕ್ ✨ (@ThisisDeepakR) October 10, 2021
“ಯುಪಿಎಸ್ ಸಿ ಪರೀಕ್ಷೆಗಳ ಎಲ್ಲ ಹಂತಗಳಲ್ಲೂ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು, ಕನ್ನಡದಲ್ಲೂ ಉತ್ತರ ಬರೆಯುವ ಅವಕಾಶ ಇರಬೇಕು. ಇದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯ. ಭಾರತ ಒಕ್ಕೂಟ ಸರ್ಕಾರ ಈ ಕೂಡಲೇ ಪರೀಕ್ಷಾ ವಿಧಾನ ಬದಲಿಸಿ, ಕನ್ನಡ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಬ್ರಿಟಿಷರ ಕಾಲದ ಸಾಮ್ರಾಜ್ಯಶಾಹಿ ನೀತಿಗಳನ್ನೇ ಭಾರತ ಒಕ್ಕೂಟ ಸರ್ಕಾರ ಈಗಲೂ ಮುಂದುವರೆಸುತ್ತಿದೆ. ಇದರಿಂದಾಗಿ ಭಾರತದ ಹಿಂದಿಯೇತರ ಭಾಷಾ ಸಮುದಾಯಗಳು ಎರಡನೇ ದರ್ಜೆ ಪ್ರಜೆಗಳಂತೆ ಬದುಕುವಂತಾಗಿದೆ. ಹಿಂದೆ ನಾವು ಬ್ರಿಟಿಷರ ಗುಲಾಮರಾಗಿದ್ದೆವು. ಈಗ ಬ್ರಿಟಿಷರ ಜಾಗದಲ್ಲಿ ಹಿಂದಿ ಸಾಮ್ರಾಜ್ಯಶಾಹಿಗಳು ಕುಳಿತಿದ್ದಾರೆ” ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿರಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ
ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಹಿಂದಿ ಭಾಷಿಕರಿಗೆ ಎಷ್ಟು ಹಕ್ಕಿದೆಯೋ ಕನ್ನಡ, ತಮಿಳು, ತೆಲುಗು, ಬಂಗಾಳಿ, ಮಲಯಾಳಂ, ಪಂಜಾಬಿ, ಒರಿಯಾ, ಮರಾಠಿ, ಕಾಶ್ಮೀರಿ, ಅಸ್ಸಾಮಿ ಇತ್ಯಾದಿ ಭಾಷಿಕರಿಗೂ ಅಷ್ಟೇ ಹಕ್ಕಿದೆ. ಹೀಗಿರುವಾಗ ಹಿಂದಿಯನ್ನರಿಗೆ ಮಾತ್ರ ಅವರ ನುಡಿಯಲ್ಲಿ ಪರೀಕ್ಷೆ ಬರೆಸುವ ಮೋಸ ಯಾಕೆ? ಸಂವಿಧಾನದ ಹದಿನಾಲ್ಕನೇ ಪರಿಚ್ಛೇದದ ಪ್ರಕಾರ ಭಾರತದ ಎಲ್ಲ ನಾಗರಿಕರೂ ಸಮಾನರು. ಆದರೆ ಹಿಂದಿ ಭಾಷಿಕ ಸಮುದಾಯಕ್ಕೆ ಎಲ್ಲ ಅವಕಾಶಗಳನ್ನು ನೀಡಿ, ಇತರ ಭಾಷಿಕರ ಹಕ್ಕುಗಳನ್ನು ಕಿತ್ತುಕೊಂಡರೆ ಸಮಾನತೆ ಇರಲು ಸಾಧ್ಯವೇ? ಇದು ಯಾವ ರೀತಿಯ ಸಮಾನತೆ? ಇದನ್ನು ಹಿಂದಿಯೇತರ ಜನಸಮುದಾಯಗಳು ಕೇಳುತ್ತಿದ್ದೇವೆ ಎಂದು ಕನ್ನಡಿಗರ ಪರ ಅವರು ಧ್ವನಿ ಎತ್ತಿದ್ದಾರೆ.
This is the fate of non Hindi/non English speaking Indians for the past 70+ years when it comes to Union govt jobs. This should change and all languages be given equal opportunities. #UPSCInKannada pic.twitter.com/WysAryGdm4
— Vasant Shetty (@vasantshetty81) October 10, 2021
Further Shows how Union Govt is Not Supporting GROWTH OF NATIVE LANGUAGES OF INDIA. https://t.co/YixzhjjVhV
— KPSCKarnataka (@karnatakakpsc) October 10, 2021
ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಯೂ ಇಲ್ಲ, ಕನ್ನಡದಲ್ಲಿ ಬರೆಯುವ ಅವಕಾಶವೂ ಇಲ್ಲ. ಪ್ರಿಲಿಮ್ಸ್ ಆದರಷ್ಟೇ ಮುಖ್ಯ ಪರೀಕ್ಷೆ ಬರೆಯುವ ಅವಕಾಶ. ಅಲ್ಲೂ ಸಹ ಪ್ರಶ್ನೆ ಪತ್ರಿಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿರುತ್ತದೆ. ಇದು ಕನ್ನಡಿಗರ ಹಕ್ಕುಗಳನ್ನು ಮೊಟಕುಗೊಳಿಸಿದಂತಲ್ಲವೇ? ಪ್ರತಿ ವರ್ಷ ಸಾವಿರಾರು ಮಂದಿ ಕನ್ನಡದ ಮಕ್ಕಳು ಕೆಪಿಎಸ್‌ಸಿ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುತ್ತಾರೆ. ಇವರಿಗೆ ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲೇ ಬರೆಯಲು ಅವಕಾಶ ಇಲ್ಲ. ಇದರ ಅರ್ಥ ಕನ್ನಡಿಗರನ್ನು ಒಕ್ಕೂಟ ಸರ್ಕಾರ ಎರಡನೇ ದರ್ಜೆ ಪ್ರಜೆಗಳಂತೆ ನೋಡುತ್ತಿದೆ ಎಂದಾಗುವುದಿಲ್ಲವೇ? ಈ ಅನ್ಯಾಯ ಇನ್ನೆಷ್ಟು ದಿನ ಸಹಿಸುವುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ದುಡ್ಡು
ನನ್ನ ನಾಡು
ನನ್ನ ಮಂದಿ
ನನ್ನ ಒಕ್ಕೂಟ
ನನ್ನ ಮಂದಿಯಾಳ್ವಿಕೆ!!ನನ್ನನುಡಿಯಲ್ಲಿ ಪರೀಕ್ಶೆ ಏಕಿಲ್ಲ.?#UPSCInKannada #ಕನ್ನಡದಲ್ಲಿUPSC
— ಜಹೊಮ ತಿಪ್ಪೇಸ್ವಾಮಿ (Jahoma Thippeswamy) (@jahomathi) October 10, 2021
ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡಿಗರ ಚಳವಳಿಯ ಹಿನ್ನೆಲೆಯಲ್ಲಿ ಐಬಿಪಿಎಸ್ ಪರೀಕ್ಷೆಗಳಲ್ಲಿ ಕ್ಲರಿಕಲ್ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ದೊರೆತಿದೆ. ಆದರೆ ವ್ಯವಸ್ಥಾಪಕರ ಹುದ್ದೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಇಲ್ಲ. ಆದರೆ ಹಿಂದಿ ಭಾಷಿಕರು ಎಲ್ಲ ಪರೀಕ್ಷೆಗಳನ್ನು ಹಿಂದಿಯಲ್ಲೇ ಬರೆಯುತ್ತಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಸೇನಾ ನೇಮಕಾತಿಗಳ ಎಲ್ಲ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಸ್ಥಾನವೇ ಇಲ್ಲ. ಎಲ್ಲ ಪರೀಕ್ಷೆಗಳೂ ಹಿಂದಿ, ಇಂಗ್ಲಿಷ್ ಗಳಲ್ಲೇ ನಡೆಯುತ್ತವೆ. ಇದರ ಉದ್ದೇಶವದರೂ ಏನು? ಕನ್ನಡಿಗರಿಗೆ ಉದ್ಯೋಗ ನಿರಾಕರಣೆಯ ಹಿಂದಿನ ಕುತಂತ್ರವಾದರೂ ಯಾಕೆ? ಎಂದು ಕೇಳಿದ್ದಾರೆ.
UPSC ಪರೀಕ್ಷೆಯನ್ನು ಇಂಗ್ಲಿಷ್ ನಲ್ಲಿ ಮಾತ್ರ ನಡೆಸಿದರೆ ಅಲ್ಲಿ ಸಮಾನತೆಯ ಇರುತ್ತದೆ. ಯಾಕೆಂದರೆ ಅದು ಪರಕೀಯ ಭಾಷೆ. ಇನ್ನು ಇಂಗ್ಲಿಷ್ ಜತೆಗೆ ಹಿಂದಿಯಲ್ಲೂ ನಡೆಸಿದರೆ ಹಿಂದಿಯವರಿಗೆ ಅನುಕೂಲವಾಗುತ್ತದೆ, ಇತರ ಭಾಷೆಯವರಿಗೆ ಅನ್ಯಾಯವಾಗುತ್ತದೆ. ಎಲ್ಲರಿಗೂ ನ್ಯಾಯ ಸಲ್ಲಬೇಕಾದರೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲೂ ಅದು ನಡೆಯಬೇಕು#UPSCInKannada
— Shrinivas Karkala (@s_karkala) October 10, 2021
ರೈಲ್ವೆಯಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ನಡೆಸಲಾಗುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆಯ ಕ್ರಾಂತಿಕಾರಿ ಹೋರಾಟದಿಂದಾಗಿ ಈಗ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆದರೆ ಅಲ್ಲೂ ಸಹ ಮೇಲಿನ ಹಂತದ ಹುದ್ದೆಗಳ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
೧. ಒಕ್ಕೂಟ ಸರಕಾರದ ಹುದ್ದೆಗಳಲ್ಲಿ ಹೇಗೆ ಕನ್ನಡಿಗರು ಅವಕಾಶ ವಂಚಿತರಾಗುತ್ತಾರೆ, ಹೇಗೆ ಹಿಂದಿ ಬಾಶಿಕರಿಗೆ ಹೆಚ್ಚಿನ ಕೆಲಸ ಸಿಗುವಂತೆ ಅನೂಕಲತೆಗಳನ್ನು ಮಾಡಿಕೊಡುತ್ತಾರೆ ಎನ್ನುವದನ್ನು ಈ ಪಟ್ಟಿಯಲ್ಲಿ ನೋಡಬಹುದು.ಇಂತಹ ಅನ್ಯಾಯದ ವ್ಯವಸ್ತೆಯ ವಿರುದ್ದ ದನಿಯೆತ್ತುವುದು ನಮ್ಮೆಲ್ಲರ ಕರ್ತವ್ಯವಾಗಿದೆ.ಬನ್ನಿ,#UPSCinKannada #ಕನ್ನಡದಲ್ಲಿUPSC pic.twitter.com/3tZFqnlhLN
— ಮಲ್ಲಿಕಾರ್ಜುನ್ ಬಿ (Mallikarjun B) (@arjuna04) October 10, 2021
ಯುಪಿಎಸ್‌ಸಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶವಿಲ್ಲದಂತಾಗಿರುವಾಗ ಯುಪಿಎಸ್ ಸಿ ಪರೀಕ್ಷೆಗಳೇ ಯಾಕೆ ಬೇಕು ಎಂದು ನಾವು ಕೇಳಬೇಕಾಗುತ್ತೆ. ನಮ್ಮ ರಾಜ್ಯದ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಕೆಪಿಎಸ್ ಸಿ ಮೂಲಕವೇ ನೇಮಕ ಮಾಡಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಕಾಲ ಬಂದಿದೆ. ಭಾರತ ಒಕ್ಕೂಟದಲ್ಲಿ ಗೌರವದ ಸ್ಥಾನ ಪಡೆಯಬೇಕಿದ್ದ ಕನ್ನಡಿಗರನ್ನು ತಮ್ಮ ಹಕ್ಕುಗಳಿಗಾಗಿ ಅಂಗಲಾಚುವ ಸ್ಥಿತಿಗೆ ತಂದು ನಿಲ್ಲಿಸಲಾಗಿದೆ. ಒಕ್ಕೂಟದ ರಾಜ್ಯಗಳ ಪೈಕಿ ಅತಿಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕ. ಆದರೂ ನಮ್ಮ ಮೇಲೆ ಈ ದೌರ್ಜನ್ಯಗಳು ನಡೆಯುತ್ತಲೇ ಇವೆ. ಯುಪಿಎಸ್‌ಸಿ ಮಾತ್ರವಲ್ಲ, ಒಕ್ಕೂಟ ಸರ್ಕಾರದ ಅಡಿಯಲ್ಲಿ ನಡೆಯುವ ಎಲ್ಲ ಉದ್ಯೋಗಗಳ ಎಲ್ಲ ಹಂತದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ಇದು ನಮ್ಮ ಸಂವಿಧಾನಬದ್ಧ ಹಕ್ಕು. ಇದನ್ನು ನಿರಾಕರಿಸುವ ಯಾವುದೇ ಶಕ್ತಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿರಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ



# ಕನ್ನಡದಲ್ಲಿ upsc
ಕನ್ನಡದಲ್ಲಿ ಯು.ಪಿ.ಎಸ್. ಸಿ. ಬರೆಯುವ ವ್ಯವಸ್ಥೆ ಬೇಕೇಬೇಕು. ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಬೇಕು.